ಷ ಪದದ ಗಾದೆಗಳು

ವಿಷಯ ಪೋಣಿಕೆ

ಸಂಪಾದಿಸಿ

ಗಾದೆಗಳನ್ನು ಇಲ್ಲಿ ಪಟ್ಟಿ ಮಾಡಿರಿ









ಗಾದೆಗಳ ಬಗ್ಗೆ ಇನ್ನೊಂದಿಷ್ಟು ಕೊಂಡಿಗಳು

ಗಾದೆಗಳನ್ನು ಇಲ್ಲಿ ಪಟ್ಟಿ ಮಾಡಿರಿ

ಸಂಪಾದಿಸಿ
  • ಅಕಾಲದಲ್ಲಿ ಬೆಳೆಯಿದ್ದಂತೆ ವೃದ್ಧಾಪ್ಯದಲ್ಲಿ ಮಕ್ಕಳು.
  • ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
  • ಅಕ್ಷರ ಕಲಿಯುವುದಕ್ಕೆ ಬೇಧಭಾವ ಬೇಡ.
  • ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?
  • ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
  • ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
  • ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
  • ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
  • ಅನುರಾಧ ಬಂದರೆ ನಮ್ಮ ರಾಗಿ ನಮ್ಮದು.
  • ಅಪಕೀರ್ತಿ ತರುವ ಮಗನಿಗಿಂತ, ಸತ್ಕೀರ್ತಿ ತರುವ ಆಳೇ ಮೇಲು.
  • ಅಪದ್ದಕ್ಕೆ ಅಪ್ಪಣೆ ಕೊಟ್ರೆ ಬಾಯಿಗೆ ಬಂದದ್ದೇ ಮಾತು.
  • ಅಪಾಯ ತೀರಿತು, ದೇವರನ್ನು ಮರೆತಾಯಿತು.
  • ಅಪ್ಪನ ಮಾತು ಕೇಳದವನು ಅಮ್ಮನ ಮಾತು ಕೇಳಿಯಾನೆ?
  • ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು.
  • ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ.
  • ಅರಿತರೆ ಮಾತನಾಡು, ಮರೆತರೆ ಕೂತು ನೋಡು.
  • ಅರೆಗೊಡದ ಅಬ್ಬರವೇ ಬಹಳ.
  • ಅರ್ಧ ಕಲಿತವನ ಆಬ್ಬರ ಹೆಚ್ಚು.
  • ಅಲ್ಪರ ಸಂಗ ಅಭಿಮಾನ ಭಂಗ.
  • ಅಶ್ವಿನೀ ಸಸ್ಯನಾಶಿನೀ.
  • ಅಹಂಕಾರ ಇದ್ದ ಮನುಷ್ಯ ಏನನ್ನೂ ಸಾಧಿಸಲಾರ.
  • ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ.
  • ಆಕಾಶ ನೋಡೋಕೆ ನೂಕಾಟವೇಕೆ?
  • ಆತ್ಮೀಯವಾದ ಪ್ರೇಮ ಅಮರವಾದದ್ದು.
  • ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
  • ಆದರೆ ಒಂದಡಿಕೆ ಮರ, ಹೋದರೆ ಒಂದು ಗೋಟು.
  • ಆದರೆ ಹಬ್ಬ, ಇಲ್ಲದಿದ್ದರೆ ಬರಗಾಲ.
  • ಆಪತ್ತಿಗಾದವನೇ ನಿಜವಾದ ಗೆಳೆಯ.
  • ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
  • ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ.
  • ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ
  • ಆಸೆ ಆಕಾಶದಷ್ಟು, ಸಾಧನೆ ಸಾಸಿವೆಯಷ್ಟೇ.
  • ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು.
  • ಆಸೆಗೆ ತಕ್ಕ ಪರಿಶ್ರಮ ಬೇಕು.
  • ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ.
  • ಆಸೆಯಿಲ್ಲದವನು ದೇಶಕ್ಕೆ ಶ್ರೀಮಂತ.
  • ಆಸೆಯೇ ಜೀವನ, ಜೀವನವೇ ಆಸೆ.
  • ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು.
  • ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
  • ಆಳಾಗಬಲ್ಲವನು ಅರಸನಾಗಬಲ್ಲ.
  • ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
  • ಇತ್ತಿತ್ತ ಬಾ ಎಂದರೆ ಹೆಗಲೇರಿ ಕುಳಿತ.
  • ಇನ್ನೊಬ್ಬರ ಮಾತಿಗೆ ಕಿವಿಗೊಡಬೇಡ, ಚಾಡಿಹೇಳಿ ಜಗಳ ಹಚ್ಚಬೇಡ.
  • ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!
  • ಇರೋದು ಕಲಿಸುತ್ತೆ, ಇಲ್ಲದ್ದು ನಾಚಿಸುತ್ತೆ.
  • ಇಲಿ ಬೇಟೆಗೆ ತಮಟೆ ಬಡಿದಂಗೆ.
  • ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
  • ಇಂದಿನ ಸೋಲು ನಾಳಿನ ಗೆಲುವು.
  • ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
  • ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
  • ಉಗುಳಿ ಉಗುಳಿ ರೋಗ, ಬೊಗಳಿ ಬೊಗಳಿ ರಾಗ.
  • ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು.
  • ಉತ್ತಮವಾದ ನಗು ನೇಸರನ ಮಗು.
  • ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
  • ಉದ್ದುದ್ದ ಮಾತಿನವರ ಮೊಳಕೈ ಮೊಂಡ.
  • ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ.
  • ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು.
  • ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
  • ಊಟಕ್ಕೆ ಮೊದಲು ಉಪ್ಪಿನ ಕಾಯಿ, ಮಾತಿಗೆ ಮೊದಲು ಗಾದೆ.
  • ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ.
  • ಊಟವೆಂದರೆ ಊರು ಬಿಟ್ಟುಹೋದಂತೆ.
  • ಊರಿಗೆ ದೊರೆ ಆದರೂ ತಾಯಿಗೆ ಮಗನೆ.
  • ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
  • ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
  • ಎಡಗಣ್ಣು ಹೊಡೆದರೆ ನಾರಿಗೆ ಶುಭ.
  • ಎಡವಿದ ಕಾಲೇ ಎಡವುದು ಹೆಚ್ಚು.
  • ಎಣ್ಣೆ ಚೆಲ್ಲಿದವನೂ ಅತ್ತ, ಕಾಯಿ ಚೆಲ್ಲಿದವನೂ ಅತ್ತ.
  • ಎಣ್ಣೆ ತಣ್ಣಗಾದರೆ ಬೆಣ್ಣೆಯ ಹಾಗೆ ಇದ್ದೀತೆ?
  • ಎಣ್ಣೆ ಬರುವಾಗ ಗಾಣ ಮುರೀತು.
  • ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
  • ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
  • ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
  • ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!
  • ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
  • ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
  • ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ.
  • ಏನಾದರೂ ಆಗು ಮೊದಲುdda ಮಾನವನಾಗು.
  • ಏನು ಬೇಡಿದರೊಬ್ಬ ದಾನಿಯನ್ನು ಬೇಡು, ದೀನನಾ ಬೇಡಿದರೆ ಆ ದೀನ ಏನು ಕೊಟ್ಟಾನು?
  • ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
  • ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
  • ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?
  • ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
  • ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ.
  • ಒಲೆಯಮೇಲೆ ಇಟ್ಟಾಗ ಉಕ್ಕಿದಂತೆ ಹಾಲು, ಒಗ್ಗಟ್ಟಿಲ್ಲದ ಮನೆ ಬೀದಿಪಾಲು.
  • ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
  • ಒಳ್ಳೆಯ ಕೆಲಸಕ್ಕೆ ವಿಘ್ನ ಹೆಚ್ಚು.
  • ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
  • ಕಜ್ಜಿ ಕೆರೆದಷ್ಟು ಹಿತ, ಚಾಕೂ ಮಸೆದಷ್ಟೂ ಹರಿತ.
  • ಕಡಲೆಗೆ ಮುಂದು ಕಡಿವಾಣಕ್ಕೆ ಹಿಂದು.
  • ಕಡಲೆ ತಿಂದು ಕೈತೊಳೆದ ಹಾಗೆ.
  • ಕಣ್ಣಿಗೂ ಮೂಗಿಗೂ ಮೂರು ಗಾವುದ.
  • ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
  • ಕತ್ತಿ ಬಂಗಾರದ್ದಾಗಿದೆಯೆಂದು ಕತ್ತು ಕೊಯ್ದುಕೊಳ್ಳಲು ಸಾಧ್ಯವೇ?
  • ಕತ್ತೆಗೆ ತಿಪ್ಪೆಯೇ ತವರುಮನೆ.
  • ಕತ್ತೆಗೆ ಯಾಕೆ ಹತ್ತಿಕಾಳು?
  • ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು.
  • ಕತ್ತೆಯಾಗಬೇಡ ಕಾಗೆಯಾಗು.
  • ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
  • ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
  • ಕಲಹವೇ ಕೇಡಿಗೆ ಮೂಲ.
  • ಕಲಿತವನಿಗಿಂತ ನುರಿತವನೇ ಮೇಲು.
  • ಕಲ್ಲಾದರು ಕರಗಬಹುದು, ಕಪಟಿಯ ಮನಸ್ಸು ಕರಗದು.
  • ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ.
  • ಕಷ್ಟದಂತೆ ಫಲ, ಮನದಂತೆ ಮಹಾದೇವ.
  • ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ.
  • ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
  • ಕಳೆದ ದಿನಗಳು ಬರೆದ ಪುಟಗಳಂತೆ.
  • ಕಳ್ಳ ಹೊಕ್ಕ ಮನೆಗೆ ಎಣ್ಣೆ ದಂಡ.
  • ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
  • ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
  • ಕಾಯಕವನ್ನು ಸದಾ ಮಾಡು, ಸೋಮಾರಿತನವನ್ನು ಬಿಡು.
  • ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ.
  • ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
  • ಕೀಟ ಸಣ್ಣದಾದರೂ ಕಾಟ ಬಹಳ.
  • ಕೀಳನ ಕೆಣಕಬೇಡ, ಮೇಗಾಲು ತುರಿಸಬೇಡ.
  • ಕುಡಿಗೆ ಕುಂಬಳಕಾಯಿ ಭಾರವೇ?
  • ಕುದುರೆ ಕುರುಡಾದರೂ ಕಡಿಮೆಯೇನೂ ತಿನ್ನುವುದಿಲ್ಲ!
  • ಕುರಿ ಹಿಂಡಲ್ಲಿ ತೋಳ ಹೊಕ್ಕಂತೆ.
  • ಕುಲ ಬಿಟ್ಟರೂ ಛಲ ಬಿಡಬೇಡ.
  • ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
  • ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
  • ಕೂಳಿಗೆ ಮೂಲ ಭೂಮಿಗೆ ಭಾರ.
  • ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
  • ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ.
  • ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?
  • ಕೆಟ್ಟದ್ದನ್ನು ಬಯಸಬೇಡ, ಒಳ್ಳೆಯದನ್ನು ಬಿಡಬೇಡ.
  • ಕೆಡುವವರು ಮನೇಲಿದ್ರು ಕೆಡುತ್ತಾರೆ.
  • ಕೇಳುವವರ ಮುಂದೆ ಹೇಳುವವರು ದಡ್ಡರು.
  • ಕೈ ಕೆಸರಾದರೆ ಬಾಯಿ ಮೊಸರು.
  • ಕೊಟ್ಟು ಕೆಟ್ಟವರಿಲ್ಲ, ತಿಂದು ಬದುಕಿದವರಿಲ್ಲ.
  • ಕೋಟಿಗೆ ಒಬ್ಬ ಕುಬೇರ, ನೋಟಕ್ಕೆ ಒಬ್ಬ ಸುಂದರ.
  • ಕೋಣನಾಗಿರುವುದಕ್ಕಿಂತ ಜಾಣನಾಗಿರುವುದು ಲೇಸು.
  • ಕೋಣನಿಗೆ ಏನು ಗೊತ್ತು ಲತ್ತೆ ಪೆಟ್ಟು.
  • ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ.
  • ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?
  • ಕಂಚು ಕಡೆಯಲ್ಲ, ಹಂಚು ದ್ರವ್ಯವಲ್ಲ.
  • ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ.
  • ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ.
  • ಗದ್ದೆ ಸುಟ್ಟರೂ ಹಾಳಾಗದು ಗಾದೆ.
  • ಗಿಡ ಮೂರು ಮೊಳ, ಕಾಯಿ ಆರು ಮೊಳ.
  • ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
  • ಗುರಿಯಿಟ್ಟು ಗುಂಡು ಹಾಕು, ಸಮಯ ಸಾಧಿಸಿ ಬೇಟೆಯಾಡು.
  • ಗುರುಕೊಟ್ಟ ಜೋಳಿಗೆ ಅಂತ ಗೂಟಕ್ಕೆ ಹಾಕಿದರೆ ಊಟ ಹಾಕೀತೆ?
  • ಗುರುವಿಲ್ಲದೇ ಮಠವಿಲ್ಲ, ಹಿರಿಯರಿಲ್ಲದೆ ಮನೆಯಿಲ್ಲ.
  • ಗೆಳೆತನದಲ್ಲಿ ಮೋಸಮಾಡಬೇಡ.
  • ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
  • ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
  • ಚಾತುರ್ಯ ಬಲ್ಲವನಿಗೆ ಚಾಚೂ ಚಿಂತಿಲ್ಲ.
  • ಚಿತ್ತಾ ಮಳೆ ವಿಚಿತ್ರ ಬೆಳೆ!
  • ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ?
  • ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
  • ಚಿಂತೆ ಮಾಡಿದರೆ ಸಂತೆ ಸಾಗೀತೆ?
  • ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
  • ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
  • ಜಾಣನಿಗೆ ಮೂರು ದಾರಿ, ಕೋಣನಿಗೆ ಒಂದೇ ದಾರಿ.
  • ಜಾತಿ ಜಾತಿಗೆ ವೈರಿ, ನಾಯಿ ನಾಯಿಗೆ ವೈರಿ.
  • ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ.
  • ಜಾರುವುದು ತಪ್ಪಿದರೆ ಏರುವುದು ಸಾಧ್ಯ.
  • ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು.
  • ಟೊಳ್ಳು ಮಾತು ಸುಳ್ಳಿಗಿಂತ ಕಡೆ.
  • ಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ.
  • ಠಕ್ಕು ಇರುವವನಿಗೆ ಠಿಕಾಣಿ ಸಿಗದು.
  • ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
  • ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
  • ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
  • ತಾಯಿ ಬೇಕು ಇಲ್ಲವೇ ಬಾಯಿ ಬೇಕು.
  • ತಾಯಿಯನ್ನು ನಿಂದಿಸಬೇಡ, ಒಳ್ಳೆಯವರನ್ನು ಬಂಧಿಸಬೇಡ.
  • ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
  • ತಾಯಿಯ ಪ್ರೀತಿ ಸುಖವಾದದ್ದು, ತಂದೆಯ ಪ್ರೀತಿ ಮಧುರವಾದದ್ದು.
  • ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
  • ತೀರ್ಥ ಎಂದು ಎಲ್ಲೆಲ್ಲೋ ನೀರು ಕುಡಿದಂತೆ!
  • ತುಪ್ಪ ತಿಂದ ಮಾತಿಗಷ್ಟು ತಪ್ಪು ಮಾತು ಬಂತು.
  • ತುಂಟ ಮಂಟಪಕ್ಕೋದರೂ ತುಂಟತನ ಬಿಡಲಿಲ್ಲ.
  • ತುಂಬಿದ ಕೊಡ ತುಳುಕುವುದಿಲ್ಲ.
  • ತೂಕ ಸರಿಯಿದ್ದರೆ ವ್ಯಾಪಾರ.
  • ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ.
  • ತೇರಾದ ಮೇಲೆ ಜಾತ್ರೆ ಸೇರಿತು.
  • ತೋಟ ಮಾಡಿದವನಿಗೆ ಕೋಟಲೆಯಿಲ್ಲ.
  • ತಂದೆ, ತಾಯಿ ಸತ್ತರೂ ಸೋದರ ಮಾವ ಇರಬೇಕು.
  • ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
  • ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
  • ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
  • ದಯವಿಲ್ಲದ ಧರ್ಮವಿಲ್ಲ.
  • ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
  • ದುಡಿಯೋ ತನಕ ಮಡದಿ.
  • ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
  • ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
  • ದುರುಳನಿಂದಲೇ ದುರುಳುತನ.
  • ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
  • ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು.
  • ದೇವರನ್ನು ಬಯ್ಯುವವರು ಅರ್ಚಕನನ್ನು ಬಿಟ್ಟಾರೆ?
  • ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
  • ದೇಶ ತಿರುಗಬೇಕು, ಭಾಷೆ ಕಲಿಯಬೇಕು.
  • ದೇಹಕ್ಕೆ ಮುಪ್ಪಾದರೇನಾಯ್ತು, ಅಧ್ಯಯನಕ್ಕೆ ಮುಪ್ಪಿದೆಯೇ?
  • ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
  • ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
  • ಧೂಳಿ ಧೂಪವಾದೀತೆ, ಮಾಳಿಗೆ ಸ್ವರ್ಗವಾದೀತೆ?
  • ಧೈರ್ಯವಿದ್ದವನಿಗೆ ದೈವವೂ ಅನುಕೂಲ.
  • ನಗುವೇ ಆರೋಗ್ಯದ ಗುಟ್ಟು.
  • ನಡೆದಷ್ಟು ನೆಲ, ಪಡೆದಷ್ಟು ಫಲ.
  • ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
  • ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
  • ನರಗುಂದಕ್ಕೆ ಹೊದರೆ ಕುರು ತಪ್ಪೀತೆ?
  • ನಾಚಿಕೆ ಬಿಟ್ಟವ ಊರಿಗೇ ದೊಡ್ಡವ.
  • ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
  • ನಾಮವಿದ್ದವನಿಗೆ ಕಾಮ ಕಡಿಮೆಯೇ?
  • ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
  • ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
  • ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
  • ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
  • ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
  • ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ.
  • ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
  • ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
  • ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
  • ನಿನ್ನಿಂದ ಆದ ಪಾಪ, ಅದೇ ನಿನಗೆ ಶಾಪ.
  • ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ, ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
  • ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
  • ನೀರುಗಣ್ಣಿನ ಹೆಂಗಸು ಊರು ಹಾಳು ಮಾಡಿದಳಂತೆ.
  • ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
  • ನೂಲಿನಂತೆ ಸೀರೆ, ಬೀಜದಂತೆ ವೃಕ್ಷ.
  • ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು.
  • ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ.
  • ನೇಯುವ ಕಾಲ ತಪ್ಪಿದರೂ, ಸಾಯುವ ಕಾಲ ತಪ್ಪದು.
  • ನೋಡಿ ನಡೆದವನಿಗೆ ಕೇಡಿಲ್ಲ.
  • ನೋಡಿ ನಡೆದವರಿಗೆ ಕೇಡಿಲ್ಲ.
  • ನೋಡಿ ನಡೆದಾಗ ಎಡವೋದು ತಪ್ಪುತ್ತೆ.
  • ಪಡಿತಿಂದು ಗುಡಿಯಲ್ಲಿ ಉರುಳಾಡಿದ.
  • ಪದವಿ ಬಂದ ಬಳಿಕ ಮದವೂ ಬರತಕ್ಕದ್ದೆ.
  • ಪದವೂ ಮುಗಿಯಿತು, ತಂತಿಯೂ ಹರಿಯಿತು.
  • ಪರಿಚಿತರ ಮರೆಯಬೇಡ, ಅಪರಿಚಿತರ ನಂಬಬೇಡ.
  • ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ.
  • ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ.
  • ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು.
  • ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
  • ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?
  • ಪುಷ್ಪವಿಲ್ಲದ ಪೂಜೆ, ಅಶ್ವವಿಲ್ಲದ ಅರಸನಿಗೆ ಸಮ.
  • ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ.
  • ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
  • ಪಂಗಡವಾದವ ಸಂಗಡ ಬಂದಾನೆ?
  • ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ?
  • ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
  • ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
  • ಪ್ರೀತಿಗೊಂದು ಮುತ್ತು, ಹಸಿವಿಗೊಂದು ತುತ್ತು.
  • ಪ್ರೇಮಿಗಳಿಲ್ಲದ ನಾಡು ಬರೀ ಶೂನ್ಯದ ಬೀಡು.
  • ಬಕ್ಕಳ ಹೊನ್ನಿದ್ದರೆ ಊರೆಲ್ಲಾ ನೆಂಟರು.
  • ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
  • ಬರ ಬಂದಾಗ ಮಗ ಉಣ್ಣೊದು ಕಲಿತ.
  • ಬರಿಗೈಯವರ ಬಡಿವಾರ ಬಹಳ.
  • ಬಲ್ಲಿದವನಿಗೆ ಕಬ್ಬು.
  • ಬಸವನ ಹಿಂದೆ ಬಾಲ, ಲಗ್ನದ ಹಿಂದೆ ಸಾಲ.
  • ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು.
  • ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
  • ಬಾಯಿ ಬಂಗಾರ, ಮನ ಅಂಗಾರ.
  • ಬಾಯಿಯಲ್ಲಿ ಬೆಲ್ಲ ಎದೆಯಲ್ಲಿ ನೀಚತನ.
  • ಬಾಯಿಯಿದ್ದ ಮಗ ಬದುಕುವನು.
  • ಬಾಲ್ಯವಿಲ್ಲದೆ ಯೌವ್ವನವಿಲ್ಲ, ಯೌವ್ವನವಿಲ್ಲದೆ ಮುಪ್ಪಿಲ್ಲ.
  • ಬಾವಿ ತೋಡದೆ ನೀರು ಸಿಗದು, ಪ್ರಯತ್ನ ಮಾಡದೆ ಫಲ ಸಿಗದು.
  • ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ.
  • ಬಾಳುವ ಮನೆಗೊಂದು ಬೊಗಳುವನಾಯಿ. (ಅತ್ತೆ).
  • ಬಾಳೆಗೊಂದು ಗೊನೆ, ಬಾಳಿಗೊಂದು ಮಾತು.
  • ಬಾಳೆ ಬೆಳೆದವ ಬಾಳಿಯಾನು.
  • ಬಾಳೆಂಬ ಬಂಧನದಲ್ಲಿ ಈಜಬೇಕು, ಸಂಸಾರ ಎಂಬ ಸಾಗರದಲ್ಲಿ ತೇಲಬೇಕು.
  • ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
  • ಬಿಸಿಯಾದರೆ ಮಾತ್ರ ಬೆಣ್ಣೆ ಕರಗುವುದು.
  • ಬೀಜದಂತೆ ವೃಕ್ಷ, ವೃಕ್ಷದಂತೆ ಬೀಜ.
  • ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
  • ಬುದ್ಧಿಗಳ್ಳನಿಗೆಲ್ಲಿ ಸತ್ಯ, ಸದಾಚಾರ!
  • ಬುದ್ಧಿಯಿಲ್ಲದವನ ಐಶ್ವರ್ಯ, ಕಡಿವಾಣ ಇಲ್ಲದ ಕುದುರೆಯಂತೆ.
  • ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
  • ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
  • ಬೆಕ್ಕು ನಮ್ಮನೇದು, ಹಾಲು ಪಕ್ಕದ ಮನೇದು.
  • ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
  • ಬೆಲ್ಲವಿದ್ದಲ್ಲಿ ನೊಣ, ಕೆಂಡವಿದ್ದಲ್ಲಿ ಕಾವು.
  • ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
  • ಬೇಕಾದ ಮಾತು, ಬೆಲ್ಲಕ್ಕಿಂತ ಸವಿ.
  • ಬೇಸರವಿರಬಾರದು, ಅವಸರ ಮಾಡಬಾರದು.
  • ಬ್ಬರ ಕೂಳು ಇನ್ನೊಬ್ಬರ ಕುತ್ತು.
  • ಭರಣಿ ಮಳೆ ಧರಣಿ ಬೆಳೆ.
  • ಭಾರವಾದ ಪಾಪಕ್ಕೆ ಘೋರವಾದ ನರಕ.
  • ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು.
  • ಭಾಷೆ ಕೊಟ್ಟವನು ಪೋಷಣೆ ಮಾಡನೇ?
  • ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
  • ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?
  • ಭೂಮಿಯಿಂದ ಆಕಾಶಕ್ಕೆ ಏಣಿಯನ್ನು ಇಟ್ಟ.
  • ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
  • ಮಗ ಸಣ್ಣವನಾದರೂ, ಮಾತು ಸಣ್ಣದಲ್ಲ.
  • ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು.
  • ಮದುವೆ ಸಾಲ ಮಸಣಾದವರೆಗೂ.
  • ಮದುವೆ ಸಂಭ್ರಮದಲ್ಲಿ ತಾಳಿ ಕಟ್ಟುವುದನ್ನೇ ಮರೆತಂತೆ.
  • ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ.
  • ಮನಸಿದ್ದರೆ ಮಾರ್ಗ.
  • ಮನಸ್ಸನ್ನು ನಿಯಂತ್ರಿಸಿ ಜೀವನ ಸಾಗಿಸಿ.
  • ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
  • ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!
  • ಮನೆ ಗೆದ್ದು ಮಾರು ಗೆಲ್ಲು.
  • ಮನೆಗೆ ಮಾರಿ, ಊರಿಗೆ ಉಪಕಾರಿ.
  • ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು.
  • ಮನೆ ಮಕ್ಕಳು ಮಾಣಿಕ್ಯ, ನೆರೆಮನೆ ಮಕ್ಕಳು ಕಸಿವಿಸಿ.
  • ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ.
  • ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?
  • ಮನೆಯ ಬಾಗಿಲಿಗೆ ಬೀಗ ಹಾಕಿಕೋ, ಮನದ ಬಾಗಿಲನ್ನು ತೆರೆದಿಡು.
  • ಮನೆಯಲ್ಲಿ ರಾಮಣ್ಣನಂತೆ, ಬೀದಿಯಲ್ಲಿ ಕಾಮಣ್ಣನಂತೆ.
  • ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
  • ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!
  • ಮನೇಲಿ ಕತ್ತಲೆ, ಪರರಿಗೆ ದೀಪ ದಾನ ಮಾಡಿದ.
  • ಮಮತೆಯ ಮಡಿಲಲ್ಲಿ ತೂಗಬೇಕು, ಮನಸ್ಸೆಂಬ ಬಂಧನದಲ್ಲಿ ಬೀಳಬೇಕು.
  • ಮರ ನೆಟ್ಟು ಪಾಪವನ್ನು ಕಳೆದುಕೋ.
  • ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
  • ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ.
  • ಮಾಟ ಮಾಡಿದೋನ ಮನೆ ಹಾಳು.
  • ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
  • ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ.
  • ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
  • ಮಾತಿಗೆ ನೆಲೆಯಿಲ್ಲ, ಪ್ರೇಮಕ್ಕೆ ಬೆಲೆಯಿಲ್ಲ.
  • ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
  • ಮಾತು ಅಂಗಾರ ಮೌನ ಬಂಗಾರ
  • ಮಾತು ಆಡಿದರೆ ಮುತ್ತಿನ ಹಾರದಂತಿರಬೇಕು.
  • ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ.
  • ಮಾತು ಬೆಳ್ಳಿ, ಮೌನ ಬಂಗಾರ.
  • ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
  • ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ.
  • ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ.
  • ಮಾನ ಹೋದ ಮೇಲೆ ಮರಣ ಬಂದ ಹಾಗೆ.
  • ಮಾವನು ಇಲ್ಲದ ಮನೆಯೇಕೆ, ಹೆಂಡತಿಯಿಲ್ಲದ ಒಡವೆಯೇಕೆ?
  • ಮುಖಕ್ಕೆ ಮೂಗು ಚೆಂದ, ಮೂಗಿಗೆ ಮೇಲೆರಡು ಕಣ್ಣು ಚೆಂದ.
  • ಮುಖ ನೋಡಿ ಮನ ತಿಳಿ.
  • ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
  • ಮುಳ್ಳು ಬಿತ್ತಿದವನಿಗೆ ನೀನು ಹೂಬಿತ್ತು.
  • ಮೂಕವೇದನೆಯು ಸತ್ಯಕ್ಕಿಂತ ಮೇಲು.
  • ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು.
  • ಮೂರು ವರ್ಷದ ಬುದ್ಧಿ ನೂರು ವರುಷದ ತನಕ.
  • ಮೃತ್ಯು ಬಂದ ಮೇಲೆ ವೈದ್ಯ ಬಂದ.
  • ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ.
  • ಮೈತುಂಬ ಕಣ್ಣಿರಲಿ, ಕೈಯಲ್ಲಿ ಪೆನ್ನಿರಲಿ.
  • ಮೊದಲು ಕಣ್ಣು ಬಿಡು, ನಂತರ ಕೈ ಮಾಡು.
  • ಮೊಸರು ಇಟ್ಟುಕೊಂಡು ಮಜ್ಜಿಗೆಗೆ ಅತ್ತಹಾಗೆ.
  • ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
  • ಮಂತ್ರಕ್ಕಿಂತ ಉಗುಳೇ ಹೆಚ್ಚು.
  • ಮಂತ್ರ ಸ್ವಲ್ಪ, ಉಗುಳೇ ಬಹಳ.
  • ಯಾದವೇಂದ್ರ ದನ ಕಾದ, ರಾಘವೇಂದ್ರ ರಾಜ್ಯವಾಳಿದ.
  • ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?
  • ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
  • ರೈತನ ಮುಗ್ಗು ನಾಡಿನ ಕುಗ್ಗು.
  • ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ.
  • ರೋಹಿಣಿ ಮಳೆ ಓಣಿಯೆಲ್ಲಾ ಕೆಸರು.
  • ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
  • ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು.
  • ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
  • ವಯಸ್ಸಿಗೆ ತಕ್ಕ ಬುದ್ಧಿ ಕಲಿ.
  • ವಿದ್ಯಾವಂತನಾದರೆ ಜಗತ್ತಿನ ಆಡಳಿತವನ್ನೇ ನಡೆಸಬಹುದು.
  • ವಿನಯದಿಂದ ವಿಶ್ವವನ್ನು ಗೆಲ್ಲು, ಪರನಿಂದೆ ಮಹಾಪಾಪ.
  • ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
  • ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
  • ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
  • ವೇದ ಸುಳ್ಳಾದರು ಗಾದೆ ಸುಳ್ಳಾಗದು.
  • ವೇದ ಸುಳ್ಳು ಆದರು ಗಾದೆ ಸುಳ್ಳಾಗದು.
  • ವೈಕುಂಠಕ್ಕೆ ಹೋಗಲಿಕ್ಕೆ ಕುಂಟು ದಾಸಯ್ಯನ ಮಧ್ಯಸ್ತಿಕೆಯೇ?
  • ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು.
  • ಶರಣು ಆದವನಿಗೆ ಮರಣವಿಲ್ಲ.
  • ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
  • ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
  • ಶ್ರೀಮಂತನ ಮನೆ ಸೀಮಂತಕ್ಕೆ ಬಡವ ಬಡಬಡಿಸಿದ ಹಾಗೆ.
  • ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
  • ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ.
  • ಸತ್ತವರಿಗೆ ಸಂಗವಿಲ್ಲ, ಕೆಟ್ಟವರಿಗೆ ನೆಂಟರಿಲ್ಲ.
  • ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
  • ಸಮಯಕ್ಕೆ ಬಾರದ ಬುದ್ಧಿ, ಸಾವಿರ ಇದ್ದರು ಲದ್ದಿ,
  • ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
  • ಸಾಲಗಾರನ ಹೆಂಡತಿ ಶೋಕಿಮಾಡಿದರೇನು?
  • ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
  • ಸಾವಿಲ್ಲದ ಮನೆಯಿಲ್ಲ, ಸೋಲಿಲ್ಲದ ಮನುಷ್ಯನಿಲ್ಲ.
  • ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
  • ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ.
  • ಸುಣ್ಣ ತಿಂದ ಮಂಗ ಹಲ್ಲು ಕಿಸಿದಂತೆ.
  • ಸುಳ್ಳು ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು.
  • ಸೆಗಣಿ ಮೇಲೆ ಕಲ್ಲು ಹಾಕಿ, ಮುಖಕ್ಕೆ ಸಿಡಿಸಿಕೊಂಡಂತೆ.
  • ಸೊಸೆ ಸತ್ತರೆ ಸೊಬಾನ ಮಗ ಸತ್ತರೆ ಮನೆ ಹಾಳು.
  • ಸೋಲಿಲ್ಲದ ಸರದಾರನಿಲ್ಲ, ಸಂಗಮವಿಲ್ಲದ ಸಾವಿಲ್ಲ.
  • ಸಂಕೋಚ ಮಾಡಿದರೆ ಸಂಕಪಾಷಾಣವೂ ಸಿಗದು.
  • ಸಂತೋಷವೇ ಯೌವನ, ಚಿಂತೆಯೇ ಮುಪ್ಪು.
  • ಸಂಸಾರದಲ್ಲಿ ಸುಖವಿದೆ, ಬಾಳೆಂಬ ಬಂಧನದಲ್ಲಿ ಕಷ್ಟವಿದೆ.
  • ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು.
  • ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
  • ಸ್ವಾತಿ ಮಳೆ ಬಿದ್ರೆ ಮುತ್ತಿನಂಥ ಜೋಳ.
  • ಸ್ವಾತಿ ಮಳೆ ಮುತ್ತಿನ ಬೆಳೆ.
  • ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
  • ಹಟ್ಟಿ ತುಂಬಾ ಹಸು, ಹಾಲು ಮಾತ್ರ ತುಸು.
  • ಹಡಗಿನ ವ್ಯಾಪರ, ಉಪ್ಪಿಗೆ ಬಡತನ.
  • ಹಣದಲ್ಲಿ ಬಡವನಾದರೂ ಬುದ್ಧಿಯಲ್ಲಿ ಬಡವನಾಗಬಾರದು.
  • ಹಣವಿಲ್ಲದ ಮನುಷ್ಯ, ರೆಕ್ಕೆ ಇಲ್ಲದ ಪಕ್ಷಿಯಂತೆ.
  • ಹಣ ಹಾದರ ಬಿತ್ತು ಹೊನ್ನು ತೊನ್ನು ಮುತ್ತು.
  • ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
  • ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ.
  • ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
  • ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು.
  • ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
  • ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
  • ಹರಿದಿದ್ದೇ ಹಳ್ಳ, ನಿಂತಿದ್ದೇ ತೀರ್ಥ.
  • ಹಲ್ಲಿರುವ ತನಕ ಊಟ ಕಣ್ಣಿರುವ ತನಕ ನೋಟ.
  • ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
  • ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ.
  • ಹಸಿದವನಿಗೆ ಹಳಸಿದ್ದೇ ಪಾವನ.
  • ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ.
  • ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ.
  • ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
  • ಹಳೇ ಚಪ್ಪಲಿ ಆದ್ರೂ ಪರವಾಗಿಲ್ಲ, ಬರಿಗಾಲಲ್ಲಿ ನಡೀಬೇಡ.
  • ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
  • ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
  • ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
  • ಹಾಲು ಕುಡಿದು ಹಾಗಲಕಾಯಿ ತಿಂದಂತೆ.
  • ಹಿಡಿ ತುಂಬ ಹಣವಿದ್ದರು ಗುಡಿ ಚೆನ್ನಾಗಿರಬೇಕು.
  • ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ.
  • ಹಿರಿಯರ ಮಾತಿಗೆ ಕಿವಿಗೊಡು, ಚುಚ್ಚುಮಾತಿಗೆ ಬೆನ್ನು ಕೊಡು.
  • ಹಿರಿಯರಿಗೆ ಶಿರಬಾಗು, ಗುರುವಿಗೆ ತಲೆಬಾಗು.
  • ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
  • ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
  • ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
  • ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ.
  • ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
  • ಹುಲಿ ಹಸಿದಾಗ ಹುಲ್ಲು ತಿಂದೀತೆ?
  • ಹೂಡಿದರೆ ಒಲೆ, ಮಡಿದರೆ ಮನೆ.
  • ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
  • ಹೆಣ್ಮಕ್ಕಳಿಗೆ ತಾಯಿ ಶಿಕ್ಷೆ,, ಗಂಡ್ಮಕ್ಕಳ್ಳಿಗೆ ತಂದೆ ಶಿಕ್ಷೆ.
  • ಹೆತ್ತವರಿಗೆ ಹೆಗ್ಗಣ ಮುದ್ದು.
  • ಹೆಸರು ಸಂಪತ್ತು, ಕೂಳಿಗಿಲ್ಲ ಒಪ್ಪತ್ತು.
  • ಹೆಂಡತಿ ಮುಂದಿರಬೇಕು, ಮಗ ಹಿಂದಿರಬೇಕು.
  • ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
  • ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ
  • ಹೊರಗೆ ಝಗ ಝಗ, ಒಳಗೆ ಭಗ ಭಗ.
  • ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
  • ಹೊಳೆಗೆ ಸುರಿದರೂ ಅಳೆದು ಸುರಿ ಎಂದಂತೆ.
  • ಹೊಳೆಯುವುದೆಲ್ಲಾ ಚಿನ್ನವಲ್ಲ.
  • ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
  • ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
  • ಆಕಳ ಹೊಟ್ಟೆಯಲ್ಲಿ ಅಚ್ಚೇರು ಬ೦ಗಾರ.
  • ಆಕಳಿದ್ದವನಿಗೆ ವ್ಯಾಕುಲವಿಲ್ಲ.
  • ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
  • ಆಕಾಶಕ್ಕೆ ಏಣಿ ಹಾಕಿದ ಹಾಗೆ
  • ಆಕಾಶ ನೋಡೊದಕ್ಕೆ ನೂಕುನುಗ್ಗಲೆ ?
  • ಆಕಾಶ ಹರಿದು ಬೀಳುವಾಗ ಕೈ ಅಡ್ಡ ಹಿಡಿಯಬಹುದೇ ?
  • ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ,ಆತ ಆಕೇನ ಬಿಟ್ಟು ಆರು ವರ್ಷ ಆಗಿತ್ತಂತೆ.
  • ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
  • ಆಗ-ಭೋಗ ಸೂಳೆ ಪಾಲು , ಗೂರಲು ಉಬ್ಬಸ ಹೆಂಡತಿ ಪಾಲು.
  • ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
  • ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
  • ಆಗುವ (ಅಡುವ) ವರೆಗಿದ್ದು ಆರುವ ವರೆಗೆ ಇರಲಾರರೇ
  • ಆಗೊದೆಲ್ಲ ವೊಳ್ಳೆದಕ್ಕೆ
  • ಆಗೋದೆಲ್ಲಾ ಒಳ್ಳೇದಕ್ಕೆ
  • ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
  • ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
  • ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
  • ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
  • ಆಟ ಕೆಟ್ಟರೆ ದೀವಟಿಗೆಯವನ ಸುತ್ತ
  • ಆಟಕ್ಕುಂಟು,ಲೆಕ್ಕಕ್ಕಿಲ್ಲ
  • ಆಡಿ ಉಂಡ ಮೈ ಅಟ್ಟು ಉಂಡೀತೇ?
  • ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
  • ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
  • ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
  • ಆಡಿ ಪೋಕರಿ ಅನ್ನಿಸಿಕೊಳ್ಳುವುದಕಿಂತ ಆಡದೆ ಮೂಗ ಅನ್ನಿಸಿಕೊಳ್ಳುವುದು ಮೇಲು.
  • ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
  • ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
  • ಆಡು ಮುಟ್ಟದ ಸೊಪ್ಪಿಲ್ಲ
  • ಆಡೋಕಾಗಲ್ಲ,ಅನುಭವಿಸಕ್ಕಾಗಲ್ಲ
  • ಆಡೋಣ ಬಾ ಕೆಡಿಸೋಣ ಬಾ
  • ಆಡೋದು ಮಡಿ ಉಂಬೋದು ಮೈಲಿಗೆ
  • ಆಡೋದು ಮಡಿ ಉಂಬೋದು ಮೈಲಿಗೆ
  • ಆತುರಕ್ಕೆ ಅಜ್ಜಿ ಮೈನೆರೆದಳು
  • ಆತುರಗಾರನಿಗೆ ಬುದ್ಧಿ ಮಟ್ಟ
  • ಆದ ಕೆಲಸಕ್ಕೆ ಅತ್ತೆಗಳು ಬಂದಂತೆ
  • ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
  • ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
  • ಆನೆಗೂ ಅಡಿ ತಪ್ಪೀತು
  • ಆನೆಗೆ ಚಡ್ಡಿ ಹೊಲಿಸಿದ ಹಾಗೆ
  • ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
  • ಆನೆ ಬರುವುದಕ್ಕು ಮುನ್ನ ಗಂಟೆ ಸದ್ದು
  • ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
  • ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
  • ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ
  • ಆನೆಯಂಥದೂ ಮುಗ್ಗರಿಸ್ತದೆ
  • ಆನೆಯಂಥದೂ ಮುಗ್ಗರಿಸ್ತದೆ
  • ಆನೆ ಹೋದದ್ದು ದಾರಿ ಹಾವು ಹರಿದದ್ದು ಅಡ್ಡದಾರಿ
  • ಆಪತ್ತಿಗಾದವನೇ ನಿಜವಾದ ಗೆಳೆಯ.
  • ಆಪತ್ತಿಗಾದವನೇ ನೆಂಟ
  • ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
  • ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
  • ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
  • ಆಫೀಸಿನಲ್ಲಿ ಆಫೀಸರ್, ಮನೆಯಲ್ಲಿ ಕುಕ್ಕರ್.
  • ಆರಕ್ಕೆ ಏರಲಿಲ್ಲ ಮೂರಕ್ಕೆ ಇಳಿಯಲಿಲ್ಲ
  • ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ
  • ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
  • ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
  • ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
  • ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು
  • ಆರಿದ್ರಾ ಮಳೆ ಆರದೇ ಹುಯ್ಯುತ್ತೆ.
  • ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
  • ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
  • ಆರು ದೋಸೆ ಕೊಟ್ರೆ ಅತ್ತೆ ಕಡೆ, ಮೂರು ದೋಸೆ ಕೊಟ್ರೆ ಸೊಸೆ ಕಡೆ
  • ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ
  • ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
  • ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
  • ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
  • ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
  • ಆಲಸ್ಯಂ ಅಮೃತಂ ವಿಷಂ
  • ಆಲಸ್ಯಂ ಅಮೃತಂ ವಿಷಂ
  • ಆವು ಕಪ್ಪಾದ್ರೆ ಹಾಲು ಕಪ್ಪೇನು
  • ಆವು ಕಪ್ಪಾದ್ರೆ ಹಾಲು ಕಪ್ಪೇನು
  • ಆಶ್ಲೇಷ ಮಳೆ , ಈಸಲಾರದ ಹೊಳೆ.
  • ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
  • ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
  • ಆಸೆಗೆ ಕೊನೆಯಿಲ್ಲ
  • ಆಸೆ ಮಾತು ಕೊಟ್ಟು ಬಾಸೆ ತಪ್ಪಬಾರ್‍ದು
  • ಆಸೆಯಿ೦ದ ಅಳಿಯ ಬ೦ದ್ರೆ ಮಗಳು ಹೊರಗಾಗಿರೋದೇ?
  • ಆಸೆಯೇ ದು:ಖಕ್ಕೆ ಮೂಲ
  • ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
  • ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
  • ಆಳಾಗಬಲ್ಲವನು ಅರಸನಾಗಬಲ್ಲ.
  • ಆಳಾಗಬಲ್ಲವನು ಅರಸನಾಗಬಲ್ಲ.
  • ಆಳಾಗಬಲ್ಲವನು ಅರಸಾಗಬಲ್ಲ
  • ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು
  • ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
  • ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
  • ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
  • ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ
  • ಇಕ್ಕಲಾರದ ಕೈ ಎಂಜಲು
  • ಇಕ್ಕಲಾರದ ಕೈ ಎಂಜಲು
  • ಇಕ್ಕಲಾರದ ಕೈ ಎಂಜಲು
  • ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
  • ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
  • ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
  • ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
  • ಇಚ್ಚೆಯ ಅರಿತು ಕೊಟ್ಟ ನುಚ್ಚೊಂದು ಮಾಣಿಕ್ಯ
  • ಇಟ್ಟ ವಿಭೂತಿ ಪಟ್ಟದಂತೆ ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
  • ಇಟ್ಟ ಶಾಪ ಕೊಟ್ಟವನಿಗೆ ತಟ್ಟೀತು
  • ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
  • ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
  • ಇಡಿಯ ಮುಳುಗಿದವನಿಗೆ ಚಳಿಯೇನು?ಮಳೆಯೇನು?
  • ಇಡೀ ಮುಳುಗಿದರೂ ಮೂಗು ಮೇಲೆ
  • ಇಡೀ ಮುಳುಗಿದರೂ ಮೂಗು ಮೇಲೆ
  • ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
  • ಇತರೆ
  • ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
  • ಇತ್ತಿತ್ತ ಬಾ ಅಂದರೆ ಇದ್ದ ಮನೆ ಕಿತ್ತುಕೊಂಡರು.
  • ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
  • ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
  • ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
  • ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
  • ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು
  • ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
  • ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ
  • ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
  • ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
  • ಇದ್ದದ್ದು ಹೋಯಿತು ಮದ್ದಿನ ಗುಣದಿಂದ
  • ಇದ್ದದ್ದು ಹೋಯಿತು ಮದ್ದಿನ ಗುಣದಿಂದ
  • ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ
  • ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
  • ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
  • ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
  • ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
  • ಇದ್ದಾಗ ನವಾಬ ಸಾಬ, ಇಲ್ಲದಾಗ ಫಕೀರ ಸಾಬ.
  • ಇದ್ದಾಗ ಹಿರಿಯಣ್ಣ ಇಲ್ಲದಾಗ ತಿರಿಯಣ್ಣ
  • ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
  • ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು
  • ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
  • ಇಬ್ಬರ ಜಗಳ ಮೂರನೆಯವನಿಗೆ ಲಾಭ
  • ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
  • ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
  • ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)
  • ಇರಲಾರದೆ ಇರುವೆ ಬಿಟ್ಟುಕೊಂಡು ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ
  • ಇರುವೆಗೆ ಇರುವೆ ಮೈ ಭಾರ,ಆನೆಗೆ ಆನೆ ಮೈ ಭಾರ
  • ಇರುಳು ಕಂಡ ಭಾವೀಲಿ ಹಗಲು ಬಿದ್ದರು
  • ಇಲಿ ಬಂತು ಎಂದರೆ ಹುಲಿ ಬಂತು ಎಂದರು
  • ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
  • ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
  • ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
  • ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
  • ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
  • ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
  • ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
  • ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
  • ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
  • ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
  • ಇಲ್ಲು ಪೋಗಂಡ ಅಲ್ಲು ಪೋಗಂಡ
  • ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ,ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು
  • ಇಂಗು ತೆಂಗು ಇದ್ದರೆ ಮಂಗಮ್ಮನೂ ಅಡಿಗೆ ಮಾಡ್ತಾಳೆ.
  • ಇಂದಿನ ಸೋಲು ನಾಳಿನ ಗೆಲುವು.
  • ಇಂಬರಿತು ಕೊಡುವಳೆ ರಂಭೆ
  • ಇಂಬರಿದು ಕೊಡುವಳೆ ರಂಭೆ
  • ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
  • ಈರಣ್ಣನ ಮುಂದೆ ಬಸ್ಸಣ್ಣ ಕುಂತಂತೆ
  • ಈಸಿ ನೋಡು , ಇದ್ದು ಜೈಸಿ ನೋಡು
  • ಉ.. ಕುಡಿದರೂ ತನ್ನಿಚ್ಚೇಲಿರಬೇಕು
  • ಉಕ್ಕಿದರೆ ಸಾರಲ್ಲ ; ಸೊಕ್ಕಿದರೆ ಹೆಣ್ಣಲ್ಲ.
  • ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
  • ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
  • ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
  • ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
  • ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
  • ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
  • ಉಟ್ಟು ಉಡಲಾರ ಕೊಟ್ಟು ಸೈರಿಸಲಾರ
  • ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
  • ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
  • ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
  • ಉಣ್ಣು ಬಾ ಅಂದ್ರೆ,ಇರಿ ಬಾ ಅಂದ್ರಂತೆ
  • ಉಣ್ಣುವಾಗ ಎರಡು ತುತ್ತು ಕಡಿಮೆ ಉಣ್ಣು.
  • ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ; ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
  • ಉತ್ತಮನು ಎತ್ತ ಹೋದರೂ ಶುಭವೇ
  • ಉತ್ತಮನು ಎತ್ತ ಹೋದರೂ ಶುಭವೇ
  • ಉತ್ತಮವಾದ ನಗು ನೇಸರನ ಮಗು.
  • ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
  • ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
  • ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
  • ಉತ್ತರೆ ಹೊಲ ಚಂದ ಬಿತ್ತರೆ ಬೆಳೆ ಚಂದ
  • ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
  • ಉದ್ದರಿ ಕೊಟ್ಟು ಸೆಟ್ಟಿ ಕೆಟ್ಟ, ಕಡ ಸಿಕ್ಕು ಬಡವ ಕೆಟ್ಟ.
  • ಉದ್ದುದ್ದ ಮಾತಿನವರ ಮೊಳಕೈ ಮೊಂಡ.
  • ಉದ್ಯೋಗವೇ ಗಂಡಸಿಗೆ ಲಕ್ಷಣ
  • ಉದ್ಯೋಗವೇ ಗಂಡಸಿಗೆ ಲಕ್ಷಣ
  • ಉಪಕಾರಕ್ಕೋಗಿ ಉಪದ್ರ ಬಂತು
  • ಉಪವಾಸ ಇರಬಹುದು , ಉಪದ್ರವ ತಾಳಲಾರದು.
  • ಉಪಾಸ ಇದ್ರೂ ಉಪದ್ರ ಇರಬಾರ್‍ದು
  • ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು
  • ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
  • ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
  • ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ
  • ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು
  • ಉಪ್ಪು ತಿಂದವನು ನೀರು ಕುಡಿಯಲೇ ಬೇಕು
  • (ಉಪ್ಪು) ಹಪ್ಪಳಕ್ಕೆ ಊರಿತು ; ಸಂಡಿಗೆಗೆ ಏರಿತು.
  • ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ
  • ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
  • ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
  • ಉರಿಯೋ ಬೆಂಕಿಗೆ ತುಪ್ಪ ಸುರಿದ ಹಾಗೆ
  • ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
  • ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
  • ಉಸ್ ಎಂದರೆ ಉಸಳಿ ಬೇಡಿದ್ದನಂತೆ
  • ಉಳೋ ಎತ್ತಾದರೆ ಇರೋ ಊರಿನಲ್ಲಿ ಬೆಲೆಯಾಗದೇ.
  • ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
  • ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
  • ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ
  • ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.
  • ಉಂಡ ಮನೆ ಜಂತೆ ಎಣಿಸಬಾರದು
  • ಉಂಡ ಮನೆ ಜಂತೆ ಎಣಿಸಬಾರದು
  • ಉಂಡರೆ ಉಬ್ಬಸ, ಹಸಿದರೆ ಸಂಕಟ .
  • ಉಂಡರೆ ಉಬ್ಬಸ , ಹಸಿದಿದ್ದರೆ ಸಂಕಟ(ನಾಜೂಕು ದೇಹಸ್ಥಿತಿ)
  • ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
  • ಉಂಡೂ ಹೋದ; ಕೊಂಡೂ ಹೋದ
  • ಉಂಬಾಗ ಉಡುವಾಗ ಊರೆಲ್ಲ ನೆಂಟರು
  • ಉಂಬಾಗ ಉಡುವಾಗ ಊರೆಲ್ಲ ನೆಂಟರು
  • ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು
  • ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
  • ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
  • ಊಟಕ್ಕಿಲ್ಲದ ಉಪ್ಪಿನಕಾಯಿ ..ಕ್ಕೆ ಸಮಾನ
  • ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
  • ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
  • ಊಟ ತನ್ನಿಚ್ಚೆ,ನೋಟ ಪರರಿಚ್ಚೆ
  • ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
  • ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ
  • ಊಟವೆಂದರೆ ಊರು ಬಿಟ್ಟುಹೋದಂತೆ.
  • ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ
  • ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ
  • ಊರಿಗಾಗದ ಗೌಡ, ಮೇಲೆರಗುವ ಗಿಡುಗ
  • ಊರಿಗಾಗದ ಗೌಡ, ಮೇಲೆರಗುವ ಗಿಡುಗ
  • ಊರಿಗೆ ಅರಸನದರೂ ತಂದೆ ತಾಯಿಗೆ ಮಗನೇ.
  • ಊರಿಗೆ ಉಪಕಾರಿ, ಮನೆಗೆ ಮಾರಿ
  • ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
  • ಊರಿಗೆ ದಾರೀಯ ಯಾರು ತೋರಿದರೇನು
  • ಊರಿಗೆ ದೊರೆ ಆದರೂ ತಾಯಿಗೆ ಮಗನೆ.
  • ಊರಿಗೆ ದೊರೆ ಆದರೂ ತಾಯಿಗೆ ಮಗನೆ.
  • ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
  • ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
  • ಊರಿಗೆ ಬಂದವಳು ನೀರಿಗೆ ಬಾರದೇ ಇರುವಳೇ?
  • ಊರಿಗೆಲ್ಲಾ ಒಬ್ಬಳೇ ಪದ್ಮಾವತಿ
  • ಊರಿಗೊಂದು ದಾರಿಯಾದ್ರೆ,ಎಡವಟ್ಟಂಗೆ ಅವನದ್ದೇ ದಾರಿ
  • ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?
  • ಊರು ದೂರಾಯಿತು ಕಾಡು ಹತ್ತರಾಯಿತು
  • ಊರು ದೂರಾಯಿತು ಕಾಡು ಹತ್ತರಾಯಿತು
  • ಊರು ನೋಡಿ ಬಾ ಅಂದರೆ ತೋರಣ ಕಟ್ಟಿ ಬಂದ.
  • ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
  • ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
  • ಊರು ಸುಟ್ಟರೂ ಹನುಮಂತರಾಯ ಹೊರಗೆ
  • ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
  • ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ
  • ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
  • ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
  • ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
  • ಊರೇ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಮುಚ್ಚಿದಂತೆ.
  • ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
  • ಎಟ್ಟ್ (ಹಟಮಾರಿ) ಗಂಡಗೆ ಖೊಟ್ಟಿ ಹೆಂಡತಿ
  • ಎಡಗಣ್ಣು ಹೊಡೆದರೆ ನಾರಿಗೆ ಶುಭ.
  • ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
  • ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
  • ಎಡವಿದ ಕಾಲು ಎಡವುದು ಹೆಚ್ಚು
  • ಎಡವಿದ ಕಾಲು ಎಡವುದು ಹೆಚ್ಚು
  • ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
  • ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
  • ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
  • ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ
  • ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
  • ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
  • ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
  • ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಎಳೆದರಂತೆ
  • ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
  • ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
  • ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ
  • ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
  • ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
  • ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
  • ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ.
  • ಎತ್ತು ಮಾರಿದವಗೆ ಹಗ್ಗದ ಆಸೆಯೇ
  • ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
  • ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
  • ಎದೆಎದೆಯನು ಪಿಸು ಮಾತೊಳಗರಳಿಸಿ
  • ಎದೆ ಸೀಳಿದ್ರೆ ಮೂರಕ್ಷರಾನೂ ಇಲ್ಲ
  • ಎದ್ದರೆ ಆಳಲ್ಲ
  • ಎದ್ದವನು ಗೆದ್ದಾನು
  • ಎದ್ದೋಗೋ ಮಾತು ಬಿದ್ದೋಗಲಿ
  • ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
  • ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
  • ಎರಡೂ ಕೈ ತಟ್ಟಿದರೆ ಸದ್ದು
  • ಎರಡೂ ಕೈ ತಟ್ಟಿದರೆ ಸದ್ದು
  • ಎರಡೂ ಕೈ ಸೇರಿದರೆ ಚಪ್ಪಾಳೆ
  • ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು ಮೋರೆ
  • ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ
  • ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
  • ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
  • ಎಲ್ಲಮ್ಮನ ಗುಡ್ಡದಾಗ ಮುಲ್ಲಾಂದೇನು
  • ಎಲ್ಲರ ಮನೆ ದೋಸೇನೂ ತೂತೇ.
  • ಎಲ್ಲರ ಮನೆಯ ದೋಸೆಯೂ ತೂತೆ !
  • ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
  • ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
  • ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
  • ಎಲ್ಲರೂ ನಗ್ತಾರೆ ಅ೦ಥ ಕಿವುಡ ತಾನೂ ನಕ್ಕ.
  • ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
  • ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
  • ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ
  • ಎಲ್ಲಾ ಜಾಣ; ತುಸ ಕೋಣ
  • ಎಲ್ಲಾ ಜಾಣ,ತುಸಾ ಕೋಣ.
  • ಎಲ್ಲಾ ಬಣ್ಣ ಮಸಿ ನುಂಗಿತು
  • ಎಲ್ಲಾ ಬಣ್ಣ ಮಸಿ ನುಂಗಿತು
  • ಎಲ್ಲಾ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ
  • ಎಲ್ಲಾರ ಮನೇ ದೋಸೇನೂ ತೂತು
  • ಎಳ್ಳಿನಲ್ಲಿ ಎಣ್ಣೆ ಅಡಕ ಹಾಲಿನಲ್ಲಿ ಬೆಣ್ಣೆ ಅಡಕ
  • ಎಂಜಲ ತಿಂದರೂ ಅಂಜದೆ ತಿನ್ನು
  • ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
  • ಎಂಟು ವರ್ಷಕ್ಕೆ ನನ್ನ ಮಗ ದಂಟಾದ
  • ಎಂಟು ವರ್ಷಕ್ಕೆ ನನ್ನ ಮಗ ದಂಟಾದ
  • ಎಂಟು ಹೊನ್ನು ಘನವಾದ ನಂಟು ತಂತು
  • ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
  • ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
  • ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
  • ಏತಿ ಅಂದರೆ ಪ್ರೇತಿ
  • ಏತಿ ಅಂದರೆ ಪ್ರೇತಿ ಅಂದಂತೆ
  • ಏನಾದರೇನು ತಾನು ತಾನಾಗದ ವರೆಗೆ
  • ಏನೂ ಇಲ್ಲದವಗೆ ಭಯವಿಲ್ಲ
  • ಏರಿದವ ಇಳಿದಾನು
  • ಏರಿದವ ಇಳಿದಾನು
  • ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು
  • ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
  • ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
  • ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ
  • ಐದು ಬೆರಳೂ ಒಂದೇ ಸಮ ಇರೋಲ್ಲ
  • ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
  • ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ
  • ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
  • ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
  • ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
  • ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
  • ಒಡೆದ ಹಾಲು ಹೆಪ್ಪಿಗೆ ಬಂದೀತೇ
  • ಒಡೆಯನಿಗೆ ಹಾಲಿಲ್ಲವೆ೦ದು ಎಮ್ಮೆ ಈಯುತ್ಯೇ?
  • ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
  • ಒನಕೆ ಮುಂಡು ಚಿಗುರಿದಂತೆ
  • ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ
  • ಒಪ್ಪವಿಲ್ಲದ ಮಾತು ತುಪ್ಪವಿಲ್ಲದ ಊಟ
  • ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ
  • ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
  • ಒಬ್ಬರ ಕೂಳು ಇನ್ನೊಬ್ಬರ ಕುತ್ತು.
  • ಒಲಿದರೆ ನಾರಿ ಮುನಿದರೆ ಮಾರಿ
  • ಒಲಿದರೆ ನಾರಿ ಮುನಿದರೆ ಮಾರಿ
  • ಒಲುಮೆಗೆ ನೋಟಬೇಟವೇ ಮೊದಲು
  • ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
  • ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು.
  • ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು
  • ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
  • ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು
  • ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ
  • ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು
  • ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ
  • ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
  • ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
  • ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
  • ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
  • ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
  • ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
  • ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ
  • ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
  • ಒಂದು ದುಡ್ಡು ಕೊಡುವೆ ಹಾಡು ದಾಸಯ್ಯ ಎರಡು ದುಡ್ಡು ಕೊಡುವೆ ಬಿಡು ದಾಸಯ್ಯ
  • ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ
  • ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
  • ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
  • ಒಂದು ಹೊತ್ತು ತಿನ್ನೋವ್ನು ಯೋಗಿ, ಎರಡು ಹೊತ್ತು ತಿನ್ನೋವ್ನು ಭೋಗಿ, ಮೂರು ಹೊತ್ತು ತಿನ್ನೋವ್ನು ರೋಗಿ, ನಾಕು ಹೊತ್ತು ತಿನ್ನೋವ್ನ ಎತ್ಕೊಂಡು ಹೋಗಿ
  • ಒಂದೊಂದು ಕಾಲಕ್ಕೆ ಒಂದೊಂದು ಪರಿ
  • ಒಂದೊಂದು ಹನಿ ಬಿದ್ದು ನಿಂತಲ್ಲಿ ಮಡುವಾಯ್ತು
  • ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
  • ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
  • ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
  • ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
  • ಓಡ್ಹೋಗುವನ ಚಡ್ಡಿ ಹರಕಂಡಷ್ಟೆ ಲಾಭ.
  • ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
  • ಓದಿ ಓದಿ ಮರುಳಾದ ಕೂಚು ಭಟ್ಟ
  • ಓದಿ ಓದಿ ಮರುಳಾದ ಕೂಚು ಭಟ್ಟ
  • ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ
  • ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
  • ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು
  • ಓದುವಾಗ ಓದು; ಆಡುವಾಗ ಆಡು
  • ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
  • ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
  • ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
  • ಕ೦ಡವರ ಮನೇಲಿ ನೋಡು ನನ್ನ ಕೈ ಧಾರಾಳವ!
  • ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
  • ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
  • ಕಚ್ಚೋ ನಾಯಿ ಬೊಗಳುವುದಿಲ್ಲ
  • ಕಜ್ಜಿ ಹೋದರೂ ಕಡಿತ ಹೋಗಲಿಲ್ಲ
  • ಕಟ್ಟಲಿಲ್ಲ ಬಿಚ್ಚಲಿಲ್ಲ ಹಿ೦ಡಿಕೊಳ್ಳೋಕೆ ಹೊತ್ತಾಯ್ತು ಅ೦ದಳು.
  • ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
  • ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
  • ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
  • ಕಟ್ಟಿದ ಗೂಟ , ಹಾಕಿದ ಹಲ್ಲು.
  • ಕಡಗ ನೋಡಲಿ ಅ೦ತ ಗುಡಿಸಲು ಸುಟ್ಕೊ೦ಡ ಹಾಗೆ.
  • ಕಡಲಲ್ಲಿ ಪುಟಿದ ತೆರೆ ಕಡಲಲ್ಲೇ ಕರಗಿ ಹೋಯ್ತು
  • ಕಡು ಕೋಪ ಬಂದಾಗ ತಡಕೊಂಡವನೇ ಜಾಣ
  • ಕಡು ಕೋಪ ಬಂದಾಗ ತಡಕೊಂಡವನೇ ಜಾಣ
  • ಕಡ್ಡೀನ ಗುಡ್ಡ ಮಾಡು
  • ಕಡ್ಡೀನ ಗುಡ್ಡ ಮಾಡು.
  • ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
  • ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
  • ಕಣ್ಣರಿಯದಿದ್ದರೂ ಕರುಳರಿಯುತ್ತದೆ
  • ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
  • ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
  • ಕಣ್ಣಿಗೂ ಮೂಗಿಗೂ ಮೂರು ಗಾವುದ.
  • ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
  • ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
  • ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
  • ಕಣ್ಣು ಕುರುಡಾದರೆ ಬಾಯಿ ಕುರುಡೇ
  • ಕಣ್ಣೆರಡಾದರೂ ನೋಟ ಒಂದೇ
  • ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
  • ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
  • ಕತ್ತಿ ವೈರಿ ಕೈಯಲ್ ಕೊಟ್ಟು ಬೆನ್ನ ಮಾಡಿ ನಿಂತನಂತೆ
  • ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
  • ಕತ್ತೆ ತಪ್ಪಿಸಿಕೊ೦ಡರೆ ಹುಡುಕುತಾರ್‍ಯೇ?
  • ಕತ್ತೆಯ ಕಾಲು ಮುರಿದರೇನು ? ನಾಯಿಯ ಹಲ್ಲು ಮುರಿದರೇನು?
  • ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
  • ಕದ ತಿನ್ನೋವನಿಗೆ ಹಪ್ಪಳ ಈಡಲ್ಲ
  • ಕದ್ದ ರೊಟ್ಟಿ ಬೇರೆ ದೇವರ ಪ್ರಸಾದ ಬೇರೆ.
  • ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
  • ಕನಿಗೇಡಿಗೆ(ಸ್ವಾರ್ಥಿಗೆ) ಗತಿ ಇಲ್ಲ
  • ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
  • ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
  • ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
  • ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
  • ಕಬ್ಬಿಣ ಕಾದಿರುವಾಗಲೇ ಬಡಿಯಬೇಕು
  • ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
  • ಕಬ್ಬು ಡೊಂಕಾದ್ರೆ ಸವಿ ಡೊಂಕೇ
  • ಕಬ್ಬು ಡೊಂಕಾದ್ರೆ ಸವಿ ಡೊಂಕೇ
  • ಕಯ್ಯಾರೆ ಮಾಡುವ ಧರ್ಮ ಲೇಸು
  • ಕರಣಗಳ ತಡೆದು ನಿಲಬಾರದು
  • ಕರುಬಿದವರ ಮನೆ ಬರಿಮನೆ
  • ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
  • ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ.
  • ಕರೆಯದವರ ಮನೆಗೆ ಕಳಸಗಿತ್ತಿಯಾಗು
  • ಕರ್ಮ ಕಳೆಯುವವರೆಗೆ ಮರ್ಮದಲ್ಲಿರು
  • ಕಲಹವೇ ಕೇಡಿಗೆ ಮೂಲ.
  • ಕಲ್ತ ಕೈ ಕದ್ದಲ್ಲದೆ ಬಿಡದು
  • ಕಲ್ಲ ನಾಗರ ಕಂದರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು
  • ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ
  • ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
  • ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
  • ಕಷ್ಟ ಪಟ್ಟರೆ ಫಲವುಂಟು
  • ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
  • ಕಳ್ಳನ ಕಾವಲಿಟ್ಟ ಹಾಗೆ
  • ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ
  • ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
  • ಕಳ್ಳನ ನಂಬಿದ್ರು ಕುಳ್ಳನ ನಂಬಬೇಡ
  • ಕಳ್ಳನ ಮನಸ್ಸು ಹುಳ್ಳಗೆ
  • ಕಳ್ಳನ ಮನಸ್ಸು ಹುಳ್ಳಗೆ
  • ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ
  • ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
  • ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
  • ಕಳ್ಳನ ಹೆಂಡತಿ ಎಂದಿದ್ದರೂ ಮುಂ..
  • ಕಳ್ಳನ ಹೆಂಡತಿ ಎಂದಿದ್ದರೂ ...ಯೆ
  • ಕಳ್ಳನಿಗೊಂದು ಪಿಳ್ಳೆ ನೆವ
  • ಕಳ್ಳನಿಗೊಂದು ಪಿಳ್ಳೆ ನೆವ
  • ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
  • ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
  • ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
  • ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
  • ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
  • ಕಾಣದಿರೋ ದೇವರಿಗಿಂತ ಕಾಣೋ ಭೂತಾನೇ ವಾಸಿ
  • ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
  • ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
  • ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
  • ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ
  • ಕಾಯಕವೇ ಕೈಲಾಸ
  • (ಕಾಯಿಲೆ) ಬಿದ್ದಾಗಿನ ಅನ್ನ ಎದ್ದಾಗ ತೆಗೆ.
  • ಕಾರ್ಯವಾಸಿ ಕತ್ತೆ ಕಾಲು ಕಟ್ಟು
  • ಕಾರ್ಯವಾಸಿ ಕತ್ತೆ ಕಾಲು ಕಟ್ಟು
  • ಕಾರ್ಯವಾಸಿ ಕತ್ತೆ ಕಾಲು ಕಟ್ಟು
  • ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
  • ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
  • ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು
  • ಕಾಲಿಗೆ ಬಿದ್ದು ಕಾಲುಂಗರ ಉಚ್ಚಿಕೊಂಡರಂತೆ
  • ಕಾಲಿನದು ಕಾಲಿಗೆ; ತಲೆಯದು ತಲೆಗೆ
  • ಕಾವಿ ಉಟ್ಟವರೆಲ್ಲಾ ಸನ್ಯಾಸಿಗಳಲ್ಲ ಬೂದಿ ಬಳಿದವರೆಲ್ಲ ಬೈರಾಗಿಗಳಲ್ಲ
  • ಕಾಸಿಗೆ ತಕ್ಕ ಕಜ್ಜಾಯ.
  • ಕಾಸಿಗೊಂದು,ಕೊಸರಿಗೆರಡು
  • ಕಾಸಿದ್ರೆ ಕೈಲಾಸ
  • ಕಾಸು ಕೊಟ್ಟು ಬ್ರಹ್ಮೇತಿ ತಗೊಂಡರು
  • ಕಾಸೂ ಹಾಳು ತಲೆಯೂ ಬೋಳು.
  • ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ
  • ಕಿಡಿಯಿಂದ ಕಾಡ ಸುಡ ಬಹುದು
  • ಕಿಡಿಯಿಂದ ಕಾಡ ಸುಡ ಬಹುದು
  • ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
  • ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
  • ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
  • ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
  • ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
  • ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
  • ಕುಚುಕು ಬುದ್ಧಿ ಹೊಕ್ಕವನು ಕೆಟ್ಟ
  • ಕುಡಿಯೋದು ಅ೦ಬಲಿ ಮುಕ್ಕಳಿಸೋದು ಪನ್ನೀರು.
  • ಕುಡಿಯೋ ನೀರಿನಲ್ಲಿ ಬೆರಳಾಡಿಸೋ ಬುದ್ಧಿ (ಕುಡಿಯೋ ನೀರಿನಲ್ಲಿ ... ಅದ್ದುವ ಬುದ್ಧಿ)
  • ಕುಣಿಯಲಾರದವಳು ನೆಲ ಡೊಂಕು ಅಂದಳಂತೆ
  • ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ
  • ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
  • ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ
  • ಕುದುರೆ ಕಂಡರೆ ಕಾಲುನೋವು
  • ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
  • ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ
  • ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ
  • ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
  • ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
  • ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
  • ಕುರು ಮೇಲೆ ಬರೆ ಎಳೆದ ಹಾಗೆ
  • ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ
  • ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ
  • ಕುಂಟನಿಗೆ ಎಂಟು ಚೇಷ್ಟೆ, ಕುರುಡನಿಗೆ ನಾನಾಚೇಷ್ಟೆ
  • ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
  • ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
  • ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
  • ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
  • ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕಂಡನಂತೆ
  • ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
  • ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
  • ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
  • ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ
  • ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
  • ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
  • ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
  • ಕೂಡಿದ ಗಂಡನನ್ನಾದರೂ ಬಿಟ್ತೇನು ಕಲ್ತದ್ದ ಬಿಡಲಾರೆ
  • ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
  • ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
  • ಕೂತುಕೊಂಡು ಹೇಳುವವನ ಕೆಲಸ ಊರು ಮಾಡಿದರೂ ಸಾಲದು
  • ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು
  • ಕೂರೆಗೆ ಹೆದರಿ ಸೀರೆ ಬಿಚ್ಚೆಸೆದರು
  • ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ
  • ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
  • ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
  • ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
  • ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
  • ಕೂಳಿಗೆ ಕೇಡು ಭೂಮಿಗೆ ಭಾರ
  • ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
  • ಕೃಷಿತೋನಾಸ್ತಿ ದುರ್ಭಿಕ್ಷಂ
  • ಕೃಷಿತೋನಾಸ್ತಿ ದುರ್ಭಿಕ್ಷಂ
  • ಕೆಟ್ಟ ಅಡಿಗೆ ಅಟ್ಟವಳೇ ಜಾಣೆ
  • ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು
  • ಕೆಟ್ಟ ಮೇಲೆ ಬುದ್ಧಿ ಬಂತು
  • ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
  • ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
  • ಕೆಟ್ಟ ಮೇಲೆ ಲೊಟ್ಟ
  • ಕೆಟ್ಟು ಪಟ್ಟಣ ಸೇರು
  • ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
  • ಕೆಟ್ಟು ಬದುಕಬಹುದು ಬದುಕಿ ಕೆಡಬಾರದು
  • ಕೆಟ್ಟು ಸೈರಿಸಬಲ್ಲೆ ಕೊಟ್ಟು ಸೈರಿಸಲಾರೆ
  • ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
  • ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
  • ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು
  • ಕೆರೆಗೆ ತೊರೆ ಕೂಡಿ ಸರೋವರ ವಾಯ್ತು
  • ಕೆರೆಯ ನೀರ ಕೆರೆಗೆ ಚೆಲ್ಲಿ ವರ ಪಡೆದುಕೊಂಡಂತೆ
  • ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ
  • ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
  • ಕೆಲಸವಿಲ್ಲದ ಬಡಗಿ ಮಗುವಿನ ಕು೦ಡೆ ಕೆತ್ತಿದನ೦ತೆ.
  • ಕೆಲಸವಿಲ್ಲದ ಬಡಗಿ ಮಗುವಿನ ... ಕೆತ್ತಿದ
  • ಕೆಲಸವಿಲ್ಲದ ಶಾನುಭೋಗ ಹಳೆ ಲೆಕ್ಕ ನೋಡಿದ ಹಾಗೆ.
  • ಕೆಲಸಿಲ್ಲದ ಗಂಡು ಕರೀ ಒನಕೆ ತುಂಡು
  • ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
  • ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
  • ಕೈ ಕೆಸರಾದರೆ ಬಾಯಿ ಮೊಸರು
  • ಕೈ ಕೆಸರಾದರೆ ಬಾಯಿ ಮೊಸರು.
  • ಕೈ ಕೆಸರಾದರೆ ಬಾಯಿ ಮೊಸರು.
  • ಕೈ ಕೆಸರಾದರೆ ಬಾಯಿ ಮೊಸರು.
  • ಕೈ ಕೆಸರಾದ್ರೆ ಬಾಯಿ ಮೊಸರು
  • ಕೈ ಕೆಸರಾದ್ರೆ ಬಾಯಿ ಮೊಸರು
  • ಕೈಗೆಟುಕದ ದ್ರಾಕ್ಷಿ ಹುಳಿ
  • ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
  • ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
  • ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
  • ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
  • ಕೈಯೆತ್ತಿ ಕೊಡಲಿಲ್ಲ ಮೈಯ್ಯ ದಂಡಿಸಲಿಲ್ಲ ಪುಣ್ಯದ ಪಾಲು ನನಗಿರಲಿ ಅಂದ
  • ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
  • ಕೈಲಾಗದೋನು ಮೈ ಪರಚಿಕೊಂಡ
  • ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ
  • ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ
  • ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
  • ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
  • ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ
  • ಕೊಟ್ಟ ಹೆಣ್ಣು ಕುಲದಿಂದ ಹೊರಗೆ
  • ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
  • ಕೊಟ್ಟುಣ್ಣದ ಗಂಟು ಪರರಿಗೆ ಬಿಟ್ಟು ಹೋದಂತೆ
  • ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
  • ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ
  • ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
  • ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
  • ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
  • ಕೊಡಲಾರದ ಹೆಣ್ಣಿಗೆ ತೆರವು ಕೇಳಿದರಂತೆ
  • ಕೊಡಲಿ ಕಾವು ಕುಲಕ್ಕೆ ಸಾವು
  • ಕೊಡುವ ದೇವರು ಬಡವನೇ?
  • ಕೊಡುವವನ ಕೈ ಯಾವಾಲು ಮೇಲೆ
  • ಕೊಡುವವರದು ಕೊಟ್ಟರೆ ನನಗೇನು ಉಳಿಯಿತು ಅಂದನಂತೆ.
  • ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
  • ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
  • ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
  • ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು
  • ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
  • ಕೊಂಕಿಗೆ ಕೊಂಕೇ ಮದ್ದು
  • ಕೊಂಡಾಡುತ್ತ ಜಗದ ಇಚ್ಚೆಯನ್ನೆ ನುಡಿದರೆ ಜಗವೆಲ್ಲ ತನ್ನ ಮುದ್ದಾಡುತಿತ್ತು
  • ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ
  • ಕೊಂದ ಪಾಪ ತಿಂದು ಪರಿಹಾರ
  • ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)
  • 'ಕೋ' ಅನ್ನೋದು ಕುಲದಲ್ಲಿಲ್ಲ ,'ತಾ' ಅನ್ನೋದು ತಾತರಾಯನ ಕಾಲದ್ದು
  • ಕೋಟಿ ಕೊಟ್ಟರೂ ಕೂಟ ಕರ್ಮಿಯ ದುಂದುಗವೇ ಬೇಡ
  • ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು
  • ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
  • ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ
  • ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
  • ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು
  • ಕೋತಿ ಕಜ್ಜಾಯ ಹಂಚಿದ ಹಾಗೆ.
  • ಕೋತಿಗೆ ಹೆಂಡ ಕುಡಿಸಿದಂತೆ
  • ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ
  • ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
  • ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
  • ಕೋತಿ ಮೊಸರನ್ನ ತಿಂದು,ಮೇಕೆ ಬಾಯಿಗೆ ಒರೆಸಿದಂತೆ
  • ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
  • ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
  • ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
  • ಕೋಪ ಪಾಪ ತಂತು ಪಾಪ ತಾಪ ತಂತು
  • ಕೋಪ ಬೀವುದೇ ಸಮತೆ
  • ಕೋಮಟಿ ಕೊಡ;ಜೈನಿಗ ಬಿಡ
  • ಕೋರಿ (=ಚೆಂದುಳ್ಳಿ ಚೆಲುವೆ) ಒಲುಮೆ ತನಗೆ ಅನ್ನೋ ಮಾರನಿಗೆ (=ಚೆಲುವಾಂತನಿಗೆ) ಮಾರಿ ಹಿಡಿಯಿತು.
  • ಕೋಳಿಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆರೆಯದೆ ಇರುವುದೇ?
  • ಕೋಳೀ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರೋದು ಬಿಟ್ಟೀತೆ?
  • ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
  • ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ
  • ಕಂಗಾಲನ ಮನೀಗೆ ಕಂಗಾಲ ಹೋದರೆ ಗಂಗಾಳ ನೆಕ್ಕು ಅಂತಂತೆ
  • ಕಂಗಾಲಾದರೂ ಹಂಗಾಳಾಗಬಾರದು
  • ಕಂಡ ಕಳ್ಳ ಜೀವ ಸಹಿತ ಬಿಡ
  • ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
  • ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
  • ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
  • ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು
  • ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು
  • ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
  • ಕಂಡೋರ ಆಸ್ತಿಗೆ ನೀನೇ ಧಣಿ
  • ಕಂಡೋರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ
  • ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ
  • ಕಂತೆಗೆ ತಕ್ಕ ಬೊಂತೆ
  • ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
  • ಖಂಡಿತ ವಾದಿ,ಲೋಕ ವಿರೋಧಿ
  • ಗ೦ಡ ಪಟ್ಟೆ ಸೀರೆ ತರುತ್ತಾನೆ೦ದು ಇದ್ದ ಬಟ್ಟೆ ಸುಟ್ಟಳ೦ತೆ.
  • ಗಡ್ಡಕ್ಕೆ ಬೇರೆ ಸೀಗೇಕಾಯಿ
  • ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದಂತೆ
  • ಗದ್ದೆ ಸುಟ್ಟರೂ ಹಾಳಾಗದು ಗಾದೆ.
  • ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
  • ಗಳಕ್ಕನೇ ಉಂಡವ ರೋಗಿ ಗಳಿಗೆ ಉಂಡವ ಭೋಗಿ
  • ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
  • ಗಾಣವಾಡದೆ ಎಣ್ಣೆ ಬಂದೀತೇ
  • ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
  • ಗಾಯದ ಮೇಲೆ ಬರೆ ಕೊಟ್ಟಂತೆ
  • ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
  • ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
  • ಗಾಳಿ ಬಂದಾಗ ತೂರಿಕೋ
  • ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
  • ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
  • ಗುಡಿಸಿದ ಮೇಲೆ ಕಸವಿರಬಾರದು ಬಡಿಸಿದ ಮೇಲೆ ಹಸಿವಿರಬಾರದು
  • ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ
  • ಗುಡ್ಡದ ಮೇಲೆ ಕಪಿ ಸತ್ತರೆ ಊರಿಗೆಲ್ಲಾ ಸೂತಕ.
  • ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ
  • ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
  • ಗುರುವಿಗೆ ತಿರುಮಂತ್ರ
  • ಗುಂಪಿನಲ್ಲಿ ಗೋವಿಂದ
  • ಗೆದ್ದವ ಸತ್ತ ಸೋತವ ಸತ್ತ
  • ಗೆದ್ದೆತ್ತಿನ ಬಾಲ ಹಿಡಿದ ಹಾಗೆ
  • ಗೋರ್ಕಲ್ಲ ಮೇಲೆ ಮಳೆಗರೆದಂತೆ
  • ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ
  • ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ
  • ಗಂಜಿಯ ಕುಡಿದರೂ ಗಂಡನ ಮನೆ ಲೇಸು
  • ಗಂಟೂ ಹೋಯ್ತು;ನಂಟೂ ಹೋಯ್ತು
  • ಗಂಡನಿಗೆ ಹೊರಸು ಆಗದು , ಹೆಂಡತಿಗೆ ನೆಲ ಆಗದು!
  • ಗಂಡಸರ ಕೈಯಲ್ಲಿ ಕೂಸು ನಿಲ್ಲದು ಹೆಂಗಸರ ಕೈಯಲ್ಲಿ ಮಾತು ನಿಲ್ಲದು
  • ಗಂಡ ಸರಿಯಿದ್ರೆ ಗುಂಡೂ ಪಾವನ
  • ಗಂಡಸಿಗೇಕೆ ಗೌರಿ ದು:ಖ ?
  • ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
  • ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
  • ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ
  • ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
  • ಗಂಡ ಹೆಂಡಿರ ಜಗಳದಲ್ಲಿ ಮಕ್ಕಳು ಜಗಳ ಕಲಿತವು
  • ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ
  • ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ
  • ಗ್ರಾಮ ಶಾ೦ತಿಗೆ ತಳವಾರತಲೆ ಬೋಳಿಸಿಕೊ೦ಡನ೦ತೆ.
  • ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು.
  • ಚ೦ಡಾಲ ದೇವರಿಗೆ ಚಪ್ಪಲಿ ಪೂಜೆ.
  • ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
  • ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
  • ಚಿತ್ತದ ಕಳವಳ ನಿಲ್ಲಿಸಿದವರೇ ಉತ್ತಮರು
  • ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ
  • ಚಿತ್ತಾರದ ಅಂದವನ್ನು ಮಸಿ ನುಂಗಿತು
  • ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
  • ಚಿಂತೆ ಇಲ್ಲದವನಿಗೆ ಸ೦ತೇಯಲ್ಲೂ ನಿದ್ದೆ.
  • ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
  • ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
  • ಚಿಂತೆ ಮಾಡಿದರೆ ಸಂತೆ ಸಾಗೀತೆ?
  • ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ
  • ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ.
  • ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
  • ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
  • ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ
  • ಚೌಲದಾಗ ದೌಲು ಮಾಡು
  • ಚಂಡಾಲ ದೇವರಿಗೆ ಚಪ್ಪಲಿ ಸೇವೆ
  • ಛತ್ರದಲ್ಲಿ ಊಟ ಮಠದಲ್ಲಿ ನಿದ್ರೆ
  • ಛತ್ರದಲ್ಲಿ ಭೋಜನ , ಮಠದಲ್ಲಿ ನಿದ್ದೆ .
  • ಜಟ್ಟಿ ಜಾರಿದರೆ ಅದೂ ಒಂದು ಪಟ್ಟು
  • ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
  • ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
  • ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
  • ಜನಕ್ಕಂಜದಿದ್ದರೂ ಮನಕ್ಕಂಜಬೇಕು
  • ಜನ ಮರುಳೋ ಜಾತ್ರೆ ಮರುಳೋ
  • ಜನ ಮರುಳೋ ಜಾತ್ರೆ ಮರುಳೋ
  • ಜನ ಮರುಳೋ ಜಾತ್ರೆ ಮರುಳೋ
  • ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ
  • ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು
  • ಜಲ ನೋದಿ ಭಾವಿ ತೆಗೀಬೇಕು, ಕುಲ ನೋಡಿ ಹೆಣ್ಣು ತರ್ಬೇಕು.
  • ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
  • ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
  • ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
  • ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
  • ಜಿನ ಧರ್ಮವೇ ಜೀವಧರ್ಮ
  • ಜೀನ ಗಳಿಸಿದ ;ಜಾಣ ತಿಂದ
  • ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ
  • ಜೋಡಿದ್ದರೆ ನಾಡು ತಿರುಗಬಹುದು.
  • ಜ್ಯೋತಿಯ ನೆಲೆ ಅರಿತವನೇ ಯೋಗಿ
  • ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
  • ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
  • ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
  • ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
  • ತಕ್ಕಡಿ ಬಲ್ಲದೇ ಮನೆಯ ಬಡತನವ
  • ತಕ್ಕಡಿ ಸ್ವರೂಪ ತಕ್ಕವನೇ ಬಲ್ಲ
  • ತಕ್ಕವನಲ್ಲಿ ಹೊಕ್ಕಿದ್ದರೆ ತಕ್ಕಷ್ಟಾದರೂ ಸಿಕ್ಕುವುದು
  • ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
  • ತಕ್ರ (=ಮಜ್ಜಿಗೆ) ಶಕ್ರನಿಗೆ(=ಇಂದ್ರ) ಸಹಾ ದುರ್ಲಭ
  • ತಗಣೇ ಉಪದ್ರವ ಮಗಳಿಗೂ ಬಿಡಲಿಲ್ಲ
  • ತಗಲಿದವನಿಗೆ ಹಗಲಿರುಳೇನು?
  • ತಗಲುಗಾರನಿಗೆ (= ದಗಲ್ ಬಾಜ್) ಬಗಲ ಮೇಲೆ ಜ್ಞ್ಯಾನ
  • ತಗ್ಗಿದವ ಎಂದಿಗೂ ನುಗ್ಗಾಗ
  • ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ
  • ತಗ್ಗು ದವಸಕ್ಕಾಗಿ ಹಗ್ಗ ಕೊಂಡು ಕೊಂಡ
  • ತಟಕಿನಿಂದ ತಟಪಟವಾಯಿತು
  • ತಟಕು ಬಿದ್ದು ಮಠಾ ಕೆಡಿಸಿತು
  • ತಟದಲ್ಲಾಗಲೀ ಮಠದಲ್ಲಾಗಲೀ ಹಟದ ಜಂಗಮನ ಕಾಟ ತಪ್ಪುವುದಿಲ್ಲ
  • ತಟಸ್ಥನಾದವನಿಗೆ ತಂಟೆಯೇನು?
  • ತಟ್ಟನೆ ಆಡಿದರೆ ಕೊಟ್ಟಷ್ಟು ಫಲ
  • ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ
  • ತಟ್ಟಿನಲ್ಲಿ ಬಿದ್ದಾಗ್ಯೆ ಗಟ್ಟಿ ಆಗಲಾರ
  • ತಟ್ಟಿ ಬೈಸಿಕೊಂಡರೂ ತಟ್ಟೇ ಹುಳಿ ಚೆನ್ನಾಗಿದೆ
  • ತಟ್ಟು ಇದ್ದರ‍ೇ ತಟಾಯಿಸಿ ನಡದಾನು
  • ತಡವ ಮಾಡುವವನ ಗೊಡವೆ ಬೇಡ
  • ತಡವಿದರೆ ಮಡಿ ಸಹಾ ಕೆಡುವುದು
  • ತಡೇ ಕಟ್ಟುವವನ ಮುಂದೆ ಮುಡಿಯೇನು
  • ತಣ್ಣಗಿದ್ದರೆ ಮಣ್ಣಾದರೂ ಅಸಾಧ್ಯ
  • ತಣ್ಣೀರು ಆದರೂ ಪುಣ್ಯದಿಂದ ದೊರಕಬೇಕು
  • ತತ್ರಬಿತ್ರಿಯ (ತಂತ್ರಗಾರ) ಮುಂದೆ ಕತ್ತೆಯ ಹಾಗೆ ಆದ
  • ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
  • ತತ್ವಮಸಿ ಅಂತ ಅನ್ನೋದ್ ಕಲಿ ಅಂದ್ರೆ ತುತ್ತು ಸವಿ ಅಂತ ಉಣ್ನೋದ್ ಕಲ್ತ
  • ತನಗಿಲ್ಲದ್ದು ಎಲ್ಲಿದ್ದರೇನು
  • ತನಗೆ ಇಲ್ಲ ಕೂಸಿಗೇನು ಹೊದ್ದಿಸಲಿ
  • ತನಗೆ ಇಲ್ಲದ ಮಾರಿ ತಮ್ಮಡಿಗೆ (ತಮ್ಮಡಯ್ಯನಿಗೆ) ವರಾ ಕೊಟ್ಟೀತೇ?
  • ತನಗೆ ಇಲ್ಲದವಳು ಮಕ್ಕಳಿಗೆ ಏನು ಹೊದಿಸ್ಯಾಳು
  • ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು
  • ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು
  • ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು ಬೇರೆ
  • ತನುವರಿಯದ ನೋವಿಲ್ಲ ಮನವರಿಯದ ತಾಪವಿಲ್ಲ
  • ತನ್ನ ಅಕ್ಕನ ಅರಿಯದವಳು ನೆರೆಮನೆ ಬೊಮ್ಮಕ್ಕನ ಬಲ್ಲಳೇ?
  • ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ
  • ತನ್ನ ಓಣೀಲಿ ನಾಯಿಯೇ ಸಿಂಹ
  • ತನ್ನ ಕಾಲಿಗೆ ತಾನೇ ಶರಣು ಮಾಡಿ ಹರಸಿಕೊಂಡ ಹಾಗೆ
  • ತನ್ನ ತಾ ತನ್ನಿಂದಲೇ ಅರಿಯಬೇಕು
  • ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
  • ತನ್ನ ತಾನರಿತರೆ ತನ್ನರಿವೆ ಗುರು
  • ತನ್ನ ತಾನರಿತರೆ ತಾನ್‍ಆದಾನು ತನ್ನ ತಾ ಮರೆತರೆ ತಾ ಹೋದಾನು
  • ತನ್ನ ತಾನರಿತರೆ ಸುಜ್ಞ್ನಾನಿ
  • ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು
  • ತನ್ನ ತಾ ಬಲ್ಲವನೆ ಬಲ್ಲವ
  • ತನ್ನ ನೆರಳಿಗೆ ತಾನಂಜಿ ನಡೆಯಬೇಕು
  • ತನ್ನ ನೆರಳು ತಾ ಕಂಡು ನರಳುವವ ಮರುಳನಲ್ಲವೇ?
  • ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
  • ತನ್ನ ಮನೆ ಉಪ್ಪು ಇಲ್ಲ ಬೆನ್ನ ಹಿಂದೆ ಉರಿಯೋ
  • ತನ್ನ ಮರ‍್ಯಾದೆ ಕೆಟ್ಟವ ಪರರ ಮರ‍್ಯಾದೆ ಇಟ್ಟಾನೆ?
  • ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
  • ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ
  • ತನ್ನ ಹಲ್ಲು ತಾ ಮರಕೊಂಡು ಇನ್ನೊಬ್ಬನ ಮೇಲೆ ದೂರು ಹೇಳಿದ
  • ತನ್ನ ಹೊಟ್ಟೆ ತಾ ಹೊರೆಯದವ ಮುನ್ನಾರ ಸಲಹುವ?
  • ತನ್ನೂರಲಿ ರಂಗ, ಪರೂರಲಿ ಮಂಗ
  • ತನ್ನೂರಲಿ ರಂಗ, ಪರೂರಲಿ ಮಂಗ
  • ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ
  • ತಪಸ್ಸು ಇದ್ದವನೇ ಗಭಸ್ತಿ (=ಕಾಂತಿ) ಉಳ್ಳವನು
  • ತಪ್ಪನೆ ಬಾ (=ತಕ್ಷಣ ಬಾ ) ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ
  • ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ
  • ತಪ್ಪಿದವನಿಗೆ ಒಪ್ಪು ಇಲ್ಲ
  • ತಪ್ಪಿ ಬಿದ್ದವನಿಗೆ ತೆಪ್ಪ (=ದೋಣಿ) ಏನು ಮಾಡೀತು
  • ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು
  • ತಫಾವತುಗಾರ (=ಹಣ ತಿಂದು ಹಾಕುವವ) ತಪ್ಪಿದರೆ ತಿಪ್ಪಯ್ಯಗೆ ಏನು ಕೋಪ
  • ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ
  • ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?
  • ತಬ್ಬಳಿ ದೇವರಿಗೆ ತಂಗಳ ನೈವೇದ್ಯ
  • ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
  • ತಮ್ಮ ಕಲಹಕ್ಕೆ ಐವರು ಪರರ ಕಲಹಕ್ಕೆ ನೂರಾ ಐವರು
  • ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು. (ಸುಳಿವು ಪಾಂಡವಕೌರವರು)
  • ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು
  • ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ
  • ತಮ್ಮನ ಸಂಗಡ ತಿಮ್ಮ ಬಂದರೆ ತಂಗಳನ್ನವೇ ಗತಿ
  • ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು
  • ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
  • ತರಗು (=ಒಣಗಿದ ಎಲೆ) ತಿಂಬುವುದೇ ಪರಮ ಸುಖ
  • ತರಗು ತಿನ್ನುವವನ ಮನೆಗೆ ಹಪ್ಪಳಕ್ಕೆ ಹೋದರು
  • ತರಗು ತಿಂಬವನಿಗೆ ಒರಗೊಂದು ಕೇಡು
  • ತರಗು (ಮರದಿಂದ ಬಿದ್ದ ಒಣ ಎಲೆಗಳು)ಮೊರದಲ್ಲಿ ಹಿಡಿಯದು
  • ‍*ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
  • ತರಗೆಲೆ ಅಡಿಕೆ ತಿರಿದು ತಿನ್ನಬೇಕೆ
  • ತರತರವಾಗಿ ಹೇಳಿದ್ದು ಮರೆತರೆ ಮರಕ್ಕಿಂತಾ ಕಡೆ
  • ತರಬಲ್ಲವನ ಹೆಂಡತಿ ಅಡಜಾಣೆ (ಅಡಕವಾದ ಜಾಣ್ಮೆ ಉಳ್ಳವಳು)
  • ತರಲಿಲ್ಲ ಬರಲಿಲ್ಲ ಬರ ಹ್ಯಾಗೆ ಹಿಂಗೀತು
  • ತರಲೆ ಕೇಳುವವ ಮರುಳಗಿಂತ ಕಡೆ
  • ತರವಲ್ಲದ ಮಾತು ಮರ ಏರಿದರೆ ಆದೀತೇ
  • ತರಹರಿಸಾಳಾರದವಳು ಮರಣಕ್ಕೆ ಪಾತ್ರಳು
  • ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು ಕಷ್ಟ
  • ತರುಬಿಲ್ಲದ ಒಡ್ಡನು, ಬಿರಿಸಿಲ್ಲದ ಹುರಿಯು
  • ತರುಬಿ ಹೋಗುವನ್ನ ಕರುಬಿ (=ಅಸೂಯೆ) ಮಾಡುವುದೇನು?
  • ತರುಬು ಇದ್ದರೆ ಹರುಬು ನಿಂತೀತೇ
  • ತರುವವ ಮರೆತರೆ ಮೊರ ಏನು ಮಾಡೀತು
  • ತರುವವ ಹೋದಮೇಲೆ ಮರಗುವವರುಂಟೇ
  • ತರ್ಕಾ ಮಾಡುವವ ಮೂರ್ಕನಿಂದ ಕಡೆ
  • ತಲೆ ಗಟ್ಟಿ ಅಂತ ಕಲ್ಲ ಹಾಯಬಾರದು
  • ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
  • ತಲೆಗೆ ಎಣ್ಣೆ ಇಲ್ಲ ತನು ಮೃಗನಾಭಿ ಬೇಡಿತು
  • ತಲೆಗೆ ಒಂದು ಕಡ್ಡೀಯಾದರೆ ಒಂದು ತಲೆಯ ಹೊರೆ
  • ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?
  • ತಲೆಗೆಲ್ಲಾ ಒಂದೇ ಮಂತ್ರವಲ್ಲ
  • ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು
  • ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು
  • ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು
  • ತಲೆ ಸೀಳಿದರೆ ಎರಡಕ್ಷರ ಇಲ್ಲ
  • ತಲೆ ಹೋಗುವುದಕ್ಕೆ ಕಾಲು ಹೊಣೆಯಾದ ಹಾಗೆ
  • ತಲೇ ಒಡೆದವನೂ ಸಮ ಲೇಪ ಹಚ್ಚಿದವನೂ ಸಮ
  • ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು
  • ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ
  • ತಲೇ ಕೂದಲು ಉದ್ದವಿದ್ದವಳು ಹ್ಯಾಗೆ ಕಟ್ಟಿದರೂ ಚಂದ
  • ತಲೇ ಕೂದಲು ನೆರೆಯಾದ ಮೇಲೆ ತಬ್ಬಿಕೊಂಡ ತಬ್ಬಲಿ ಮುರವ (=ತಿರುಕ)
  • ತಲೇ ಮೂರು ಸುತ್ತು ತಿರುಗಿದರೂ ತುತ್ತು ಬಾಯಿಲೇ
  • ತಲೇ ಮೇಲಣ ಬರಹ ಎಲೆಯಿಂದ ಒರೆಸಿದರೆ ಹೋದೀತೇ
  • ತಲೇ ಸಿಡಿತಕ್ಕೆ ಮಲಶೋಧನೇ ಕೊಂಡ ಹಾಗೆ
  • ತವಕ ಪಟ್ಟವ ತಬ್ಬರಿಸಿ ಬಿದ್ದ
  • ತವಡು ತಿಂದರು ಮುರುಕು (ಬೆಡಗು, ಕೊಂಕು) ಘನ
  • ತವಡು ತಿಂಬುವನಿಗೆ ವಯ್ಯಾರ ಯಾಕೆ
  • ತವಡು ತಿಂಬುವವ ಹೋದರೆ ಉಮ್ಮಿ ತಿಂಬುವವ ಬತ್ತಾನೆ
  • ತವರೂರಿನ ದಾರೀಲಿ ಕಲಿಲ್ಲ ಮುಳ್ಳಿಲ್ಲ
  • ತಳಮಳ ತೀರಲಿಲ್ಲ, ಕಳವಳ ಕಳಿಯಲಿಲ್ಲ
  • ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು (ಒಕ್ಕಲಿಗರ ಸಮೂಹ) ಹೋದೀತೋ?
  • ತಳಾ ಬಿಟ್ಟು ಬಂಡಿ ಹಾರದು
  • ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ
  • ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ
  • ತಾ ಕಳ್ಳೆ ಪರರ ನಂಬಳು, ಹಾದರಗಿತ್ತಿ ಗಂಡನ ನಂಬಳು
  • ತಾ ಕಾಣದ ದೇವರು ಪೂಜಾರಿಗೆ ವರ ಕೊಟ್ಟೀತೇ?
  • ತಾ ಕೋಡಗ ಪರರ ಅಣಕಿಸಿತು
  • ತಾಗದೆ ಬಾಗದು ಬಿಸಿಯಾಗದೆ ಬೆಣ್ಣೆ ಕರಗದು
  • ತಾಟುಗಾರ (ಗರ್ವದ ಮನುಷ್ಯ) ಆಟಕ್ಕೆ ಹೋಗಿ ಮೋಟಗಾರನಾಗಿ (ತನ್ನಿಂದಲೇ ತಾ ಮೂರ್ಕನಾಗುವುದು) ಬಿದ್ದ
  • ತಾತಾಚಾರ‍್ಯರ ಮನೆಗೆ ಏನಪ್ಪಣೆ?
  • ತಾನಾಗಿ ಬೀಳುವ ಮರಕ್ಕೆ ಕೊಡಲಿ ಇಕ್ಕಿದ ಹಾಗೆ
  • ತಾನಾಗಿ ಬೀಳುವ ಮರಕ್ಕೆ ಕೊದಲಿ ಏಟು ಹಾಕಿದ ಹಾಗೆ .
  • ತಾನು ಕಳ್ಳ ,ಪರರ ನಂಬ
  • ತಾನು ಕೋತಿಯಾಗಿ ರತಿಯನ್ನು ಬಯಸುವುದೇ?
  • ತಾನು ಗರತಿ ಆದರೆ ಸೂಳೆಗೇರೀಲಿ ಮನೆ ಕಟ್ಟು
  • ತಾನು ಜಾರಿಬಿದ್ದು ಉಣ್ಣೆಯಂತ ನೆಲ ಅಂದ
  • ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
  • ತಾನು ತಿಂಬೋದು ಪಲ್ಲೆ ಸೊಪ್ಪು ಹಿರೇ ಕುದರೆ ಚೇಷ್ಟೆ
  • ತಾನು ನೆಟ್ಟ ಬೀಳು (ಬಳ್ಳಿ) ತನ್ನ ಎದೆಗೆ ಹಬ್ಬಿತು
  • ತಾನು ಬಾಳಲಾರದೆ ವಿಧಿಯ ಬೈದಂತೆ
  • ತಾನು ಮಾಡುವುದು ಉತ್ತಮ; ಮಗ ಮಾಡುವುದು ಮಧ್ಯಮ; ಆಳು ಮಾಡುವುದು ಹಾಳು
  • ತಾನು ಸಾಯಬೇಕು ಸ್ವರ್ಗಾ ಪಡೆಯಬೇಕು
  • ತಾನು ಸಾಯುವ ತನಕ ತನ್ನನ್ನು ಜೋಪಾನ ಮಾಡಿದರೆ ತತ್ತಿಯಷ್ಟು ಬ೦ಗಾರ ಕೊಟ್ಟೇನು ಅನ್ನುತ್ತ೦ತೆ ಕೋಳಿ.
  • ತಾನು ಹೋದರೆ ಮಜ್ಜಿಗೆ ಇಲ್ಲ ಮೊಸರಿಗೆ ಚೀಟು
  • ತಾನು ಹೋದರೆ ಮಜ್ಜಿಗೆ ಇಲ್ಲ ಹೇಳಿ ಕಳಿಸಿದರೆ ಮೊಸರು ಕೊಟ್ಟಾರೆ
  • ತಾನುಂಟೋ? ಮೂರು ಲೋಕವುಂಟೋ?
  • ತಾನೂ ಕುಡಿಯ ಕುಡಿಯಲೀಸ
  • ತಾನೂ ತಿನ್ನ, ಪರರಿಗೂ ಕೊಡ.
  • ತಾನೂ ತಿನ್ನ; ಪರರಿಗೂ ಕೊಡ
  • ತಾನೊಲಿದ ಮಂಕು ಮಾಣಿಕ್ಯ
  • ತಾನೊಂದೆಣಿಸಿದರೆ ದೈವವೊಂದೆಣಿಸಿತು
  • ತಾ ನೊಂದಂತೆ ಬೇರೇರ ನೋವನ್ನೂ ಅರಿಯಬೇಕು
  • ತಾಪತ್ರಯದವನಿಗೆ ತಾಪೆ/ಚಾಪೆ ಯಾಕೆ
  • ತಾ ಬಲವೋ ಜಗ ಬಲವೋ
  • ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು
  • ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
  • ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
  • ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
  • ತಾಯಿ ಒಂದಾದರೂ ಬಾಯಿ ಬೇರೆ
  • ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ
  • ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
  • ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ
  • ತಾಯಿಗೆ ಸೇರದ್ದು ನಾಯಿಗೂ ಸೇರದು
  • ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
  • ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ
  • ತಾಯಿ ಬೇಕು ಇಲ್ಲವೆ ಬಾಯಿ ಬೇಕು
  • ತಾಯಿ ಬೇಕು ಇಲ್ಲವೇ ಬಾಯಿ ಬೇಕು.
  • ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ
  • ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ
  • ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು
  • ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
  • ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ
  • ತಾಯಿಯಂತೆ ಮಗಳು ನೂಲಿನಂತೆ ಸೀರೆ
  • ತಾಯಿಲ್ಲದ ತವರು ಕಾಟಕದಿದ್ದ ಅಡವಿ
  • ತಾಯೀನೇ ತಿಂದೋಳು,ಅತ್ತೇನ ಬಿಟ್ಟಾಳೆಯೇ?
  • ತಾಯಂತೆ ಕರು ನಾಯಂತೆ ಬಾಲ
  • ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
  • ತಾರಕ್ಕೆ (ಎರಡು ಕಾಸಿನ ನಾಣ್ಯ) ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ
  • ತಾರಕ್ಕೊಂದು ಸೀರೆಯಾದರೂ ನಾಯಿ ತಿಕ ಬೆತ್ತಲೆ
  • ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ
  • ತಾರುಣ್ಯವೇ ರೂಪು ಕಾರುಣ್ಯವೇ ಗುಣ
  • ತಾರು ಮಾರು ಮಾಡುವವನಿಗೆ ಯಾರು ತಾನೆ ನಂಬ್ಯಾರು
  • ತಾರೇ ಬಡ್ಡೀ ನೀರಾ ಅಂದ್ರೆ ತರುವೆನು ನಿಲ್ಲೊ ತಿರುಕ ಮುರವ
  • ತಾರೇಮರದ ಕಾಯಾದರೂ ಕರೆದರೆ ಬಂದೀತೇ
  • ತಾವು ಮಾಡುವುದು ಗಂಧರ್ವರು ಮಾಡಿದರು
  • ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು
  • ತಾಸಿನ ಗೊತ್ತು ದಾಸಿಗೆ ತಿಳಿದೀತೇ?
  • ತಾಸಿನ ಬಟ್ಟಲು ನೀರ ಕುಡಿದರೆ ತಾಸಿಗೆ ಕೊಡತೀ ಪೆಟ್ಟು
  • ತಾಳಕ್ಕೆ ತಕ್ಕ ಮೇಳ
  • ತಾಳ ತಪ್ಪಿದ ಬಾಳು, ತಾಳಲಾರದ ಗೋಳು
  • ತಾಳ ತಪ್ಪಿದ ಬಾಳು, ತಾಳಲಾರದ ಗೋಳು
  • ತಾಳ ತಪ್ಪಿದರೆ ಕುಣಿಯೊದು ತಪ್ಪುವುದಿಲ್ಲ
  • ತಾಳದಲ್ಲಿ ಜಾಣನಾದರೆ ತಾಳಿಕೆ ಇದ್ದೀತೇ
  • ತಾಳಲಾರದ ವಿರಹ ತಿಣಕಿದರೆ ಹೋದೀತೇ?
  • ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು ಸಿಕ್ಕುವುದು
  • ತಾಳಿದವನು ಬಾಳಿಯಾನು
  • ತಾಳಿದವನು ಬಾಳಿಯಾನು
  • ತಾಳಿದವ ಬಾಳ್ಯಾನು
  • ತಾಳು ಬಡಿದರೆ ಕಾಳು ಸಿಕ್ಕೀತೇ
  • ತಾಳೆಮರ ಉದ್ದವಾದರೆ ಕೋಳಿಗೆ ಬಂದದ್ದೇನು
  • ತಾಳೆಮರ ದೊಡ್ಡದಾದರೂ ತಾಳೆ ಹೂವಿಗೆ ಸರಿಯಾದೀತೇ
  • ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು
  • ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು
  • ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು
  • ತಿಕ ಮಕ ಒಂಡೇ ತಿಪ್ಪಾಭಟ್ಟರಿಗೆ
  • ತಿಗಳಗಿತ್ತಿಯ ಬಾಯಿ ಕೆಣಕಬೇಡ ಬಗಳೊ ನಾಯಿ ಬಡಿಯಬೇಡ
  • ತಿಗಳಾ ತಾ ಕೆಡುತ್ತಾ ಏಳು ನೆರೆ ಕೆಡಿಸಿದ
  • ತಿಗುಳಗೆ ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ
  • ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
  • ತಿನ್ನೋದು ತವಡು ನಡೆಯೋದು ವೈಯಾರ
  • ತಿಪ್ಪಯ್ಯಗೆ ಸೂಜಿ ಮೇಲು ಕಳ್ಳಗೆ ಬಾಯಿ ಮೇಲು
  • ತಿಪ್ಪೆಯ ಮೇಲೆ ಕುಂಡ್ರುವವಗೆ ತಕ್ಯೆ ಯಾತಕ್ಕೆ
  • ತಿಪ್ಪೇ ಮೇಲಣ ಅರಿವೆಯಾದರೂ ಕಾಲಿಗೆ ಕಟ್ಟಿದರೆ ಬಿರುದು
  • ತಿಪ್ಪೇ ಮೇಲಣ ದೀಪ ಉಪ್ಪರಿಗೆಯ ಮೇಲೆ ಬಂದೀತೋ?
  • ತಿಪ್ಪೇ ಮೇಲೇ ಮುಪ್ಪಾದ ಕುಂಬಾರ ತಿಪ್ಪ
  • ತಿಪ್ಪೇ ಮ್ಯಾಲೆ ಮಲಗಿ ಉಪ್ಪರಿಗೆ ಕನಸು ಕಂಡ ಹಾಗೆ
  • ತಿಮರು (=ಕಡಿತ, ನವೆ) ತುರಿಸಿದರೆ ಅರಸಿನ ಹಾಗೆ
  • ತಿರಿಚಿನಾಪಳ್ಳಿಗೆ ತಿರಿದುಂಬೊದಕ್ಕೆ ಇಲ್ಲಿಂದ ಕೈ ಸವರಿಸಬೇಕೆ
  • ತಿರಿತಿರಿಗಿ ಗೋಕರ್ಣಕ್ಕೆ ಹೋಗಿ ತುರಕನಿಂದ ದೆಬ್ಬೆ ತಿಂದ
  • ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
  • ತಿರಿದುಂಬುವ ಭಟ್ಟ ದಕ್ಷಿಣೆಯಾದರೂ ಬಿಟ್ಟಾನು ಭೊಜನ ಸಿಕ್ಕಿದರೆ ಬಿಡಲೊಲ್ಲ
  • ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?
  • ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು
  • ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
  • ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ
  • ತಿರುಪದ ಪುಟ್ಟಿಯಲ್ಲಿ ಶನೀಶ್ವರ ಕೂತ
  • ತಿರುಪಿನಂತೆ ಇರಬೇಕು ತಿಳಿದವ
  • ತಿರುಳು ತಿಂದರೂ ಮರುಳು ಹೋಗಲಿಲ್ಲ
  • ತಿರುಳು ಹೋಗಿ ಬೆಂಡು ಉಳೀತು
  • ತಿರೋಕಲ್ಲು ಗಾಳಿಯಿಂದ ಹಾರುವುದೋ
  • ತಿರೋಕಲ್ಲು ಮಳೇಲಿ ಬಿದ್ದರೆ ಮರಕ್ಕಿಂತಾ ಕಡೆಯಾದೀತೇ
  • ತಿವಾಸಿ ಯಾತಕ್ಕೆ ತಿಪ್ಪೇ ಮೇಲಣವಗೆ
  • ತಿವಿದುಕೊಂಡರೆ ಬಂದೀತೇ ತಿಮ್ಮಪ್ಪನ ದಯೆ
  • ತಿಳಿದ ಕಳ್ಳ ತಿರಿಗಿದರೂ ಬಿಡ
  • ತಿಳಿದವನಾದರೂ ಮಲಮೂತ್ರ ಬಿಟ್ಟೀತೇ?
  • ತಿಳಿದವ ಮಾಡ್ಯಾನು ನಳಪಾಕವ
  • ತಿಳಿದು ಒಡ್ಡೋ ತೀರು ಬಾಣವ
  • ತಿಳಿಯಕ್ಕಿಲ್ಲ ನೋಡಕ್ಕಿಲ್ಲ ಹುಚ್ಚು ಮೂಕನ ಆಟ
  • ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
  • ತೀಟೆ ಆದರೆ ತಾನೆ ಬರುತ್ತಾನೆ
  • ತೀಟೆಗೆ ಮಕ್ಕಳ ಹೆತ್ತು ತಿರುಮಲ ದೇವರ ಹೆಸರಿಟ್ಟ ಹಾಗೆ
  • ತೀರಕ್ಕೆ ಬಂದ ಮೇಲೆ ತೆರೆಯ ಭಯವೇ
  • ತೀರದ ಕಾರ್ಯ ಹಾರಿದರೂ ಆಗದು
  • ತೀರದಲ್ಲಿರುವ ಮರಕ್ಕೆ ನೀರು ಯಾತಕ್ಕೆ
  • ತೀರ್ಥಕ್ಕೆ ಥಂಡಿ, ಪ್ರಸಾದಕ್ಕೆ ಅಜೀರ್ಣ , ಮಂಗಳಾರತಿಗೆ ಉಷ್ಣ (ನಾಜೂಕು ದೇಹಸ್ಥಿತಿ)
  • ತುಟಿ ಸುಮ್ಮನಿದ್ದರೂ ಹೊಟ್ಟೆ ಸುಮ್ಮನಿರದು
  • ತುಟ್ಟಿಯಾದರೂ ಹೊಟ್ಟೆ ಕೇಳದು
  • ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
  • ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
  • ತುಂತುರು ಮಳೆಯಿಂದ ತೂಬು ಒಡೆದೀತೆ?
  • ತುಂಬಿದ ಕೊಡ ತುಳುಕುವುದಿಲ್ಲ
  • ತುಂಬಿದ ಕೊಡ ತುಳುಕುವುದಿಲ್ಲ
  • ತುಂಬಿದ ಕೊಡ ತುಳುಕುವುದಿಲ್ಲ
  • ತುಂಬಿದ ಕೊಡ ತುಳುಕುವುದಿಲ್ಲ.
  • ತುಂಬಿದ ಕೊಡ ತುಳುಕುವುದಿಲ್ಲ.
  • ತುಂಬಿದ ಕೊಡ, ತುಳುಕೋದಿಲ್ಲ
  • ತುಂಬಿದ ಕೊಡ, ತುಳುಕೋದಿಲ್ಲ
  • ತುಂಬೆ ಗಿಡಕ್ಕೆ ಏಣಿ ಹಾಕಿದಂತೆ
  • ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
  • ತೂತು ಗತ್ತಲೇಲಿ ತಾತನ ಮದುವೆ
  • ತೂತು ಗತ್ತಲೇಲಿ ತಾತನ ಮದುವೆ
  • ತೇಗಿ ತೇಗಿ ಬೀಗಿ ಬಿದ್ದ
  • ತೇಗಿ ತೇಗಿ ಬೀಗಿ ಬಿದ್ದ
  • ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
  • ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
  • ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು
  • ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು
  • ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು
  • ತೋಟದ ಬೇಲಿಯನ್ನು ದಾಟಿ ನೋಡದವರಾರು
  • ತೋಟ ಶೃಂಗಾರ, ಒಳಗೆ ಗೋಣಿ ಸೊಪ್ಪು
  • ತೋಳ ಬಿದ್ದರೆ ಆಳಿಗೊಂದು ಕಲ್ಲು
  • ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
  • ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
  • ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ
  • ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
  • ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
  • ದನ ತಿನ್ನುವವನಿಗೆ ಗೊಬ್ಬರದ ಆಣೆ
  • ದನಿಯಿದ್ದವರೂ ಅತ್ತರೂ ಚಂದ ನಕ್ಕರೂ ಚಂದ
  • ದಾಕ್ಷಿಣ್ಯಕ್ಕೆ ಬಸಿರಾಗೋದು
  • ದಾಕ್ಷಿಣ್ಯವ೦ತ ದೇಶಕ್ಕೆ ಹೋದರೆ ದಕ್ಷಿಣೆ ಸಿಕ್ಕೀತೇ!
  • ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
  • ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ
  • ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
  • ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು
  • ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
  • ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ
  • ದಿನಾ ಸಾಯೋರಿಗೆ ಅಳೋರ್ ‍ಯಾರು?
  • ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
  • ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
  • ದೀಪದ ಕೆಳಗೆ ಯಾವತ್ತೂ ಕತ್ತಲೇ
  • ದುಡಿದದ್ದು ಉಂಡೆಯೋ ಪಡೆದದ್ದು ಉಂಡೆಯೋ
  • ದುಡಿಮೆಯೇ ದುಡ್ಡಿನ ತಾಯಿ
  • ದುಡಿಮೆಯೇ ದೇವರು
  • ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
  • ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
  • ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
  • ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ
  • ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ
  • ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
  • ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
  • ದುಷ್ಟರಿಂದ ದೂರವಿರು
  • ದೂಫ ಹಾಕಿದರೆ ಪಾಪ ಹೋದೀತೇ
  • ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
  • ದೇವನೊಬ್ಬ ನಾಮ ಹಲವು
  • ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ
  • ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
  • ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
  • ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ
  • ದೇವಸ್ಥಾನದಲ್ಲಿ ಊದಿನ ಕಡ್ಡಿ ಹಚ್ಚದಿದ್ದರೂ ಚಿಂತೆಯಿಲ್ಲ; ... ಬಿಡಬೇಡ
  • ದೇಶ ಸುತ್ತು ; ಕೋಶ ಓದು.
  • ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು
  • ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ
  • ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
  • ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ
  • ದೊಡ್ಡ ಗೌಡನ ಮನೇಲಿ ದೊಡ್ಡ ಗುಡಾಣ ಎತ್ತಿದರೆ ಏನೂ ಇಲ್ಲ.
  • ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ
  • ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಇನ್ನು ನಿನ್ನ ಗಳಗಂಟೆಗೆ
  • ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು
  • ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
  • ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ
  • ಧೈರ್ಯವಿದ್ದವನಿಗೆ ದೈವವೂ ಅನುಕೂಲ.
  • ನಕ್ಕು ನುಡಿದವರು ಕಡೆಗೆ ಅಡವಿಯಲಿಕ್ಕಿ ಬರುವರು
  • ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು
  • ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ
  • ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ
  • ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
  • ನಡೆವರ್ ಎಡವದೇ ಕುಳಿತವರ್ ಎಡವುವರೇ
  • ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ
  • ನನ್ನ ಮಗ ಎಂಟು ವರ್ಷಕ್ಕೆ ದಂಟು ಎಂದ
  • ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
  • ನಮಾಜು ಮಾಡಲು ಹೋಗಿ ಮಸೀದಿ ಕೆಡವಿಕೊಂಡ ಹಾಗೆ
  • ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
  • ನಮ್ಮ ದೇವರ ಸತ್ಯ ನಮಗೆ ಗೊತ್ತು.
  • ನಯಶಾಲಿ ಆದವನು ಜಯಶಾಲಿ ಆದಾನು
  • ನರಿ ಕೂಗು ಗಿರಿ ಮುಟ್ಟುತ್ತದೆಯೆ ?
  • ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ
  • ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು
  • ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ
  • ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
  • ನಾಡಳಿದು ನಾಡೊಡೆಯನಿಗೆ ಕೇಡು ನಾಡೊಡೆಯ ಅಳಿದು ನಾಡಿಗೆಲ್ಲ ಕೇಡು
  • ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
  • ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
  • ನಾ ಬಡವ ವಾಲಗ ಸಾವಕಾಶ ಊದು ಅಂದಂತೆ
  • ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು
  • ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
  • ನಾಯಿಗೆ ವಯಸ್ಸಾದ್ರೆ ಅಜ್ಜ ಅಂತಾರಾ?
  • ನಾಯಿಗೆ ಹೊಡೆಯಲು ಬಣ್ಣದ ಕೋಲೇ.
  • ನಾಯಿಗೆ ಹೊತ್ತಿಲ್ಲ;ನಿಲ್ಲಕ್ಕೆ ನೆಲೆಯಿಲ್ಲ
  • ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
  • ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ
  • ನಾಯಿ ಬಾಲ ಡೊಂಕು
  • ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
  • ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
  • ನಾಯಿ ಬೊಗಳಿದರೆ ದೇವಲೋಕ ಹಾಳೇನು
  • ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
  • ನಾಯಿಯ ಕನಸೆಲ್ಲ ಮೂಳೇನೇ.
  • ನಾಯಿಯನ್ನು ಹೊಡೆಯಲು ಬಣ್ಣದ ಕೋಲೇ ?
  • ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
  • ನಾಯಿ ಹೆಸರು'ಸಂಪಿಗೆ'ಅಂತ
  • ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ ... ಕಂಡು ಇಳಿಬಿತ್ತು
  • ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
  • ನಾವೂ ನೀವೂ ನೆಂಟರು , ಗಂತಿಗೆ ಮಾತ್ರ ಕೈ ಹಚ್ಚಬೇಡಿ.
  • ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
  • ನಾಳೆ ಯಾರೋ ನಾನು ಯಾರೋ!
  • ನಿಜ ಆಡಿದರೆ ನಿಷ್ಠೂರ
  • ನಿಜವ ಹಿಡಿ ಘಟವ ನೆಚ್ಚದಿರು
  • ನಿದ್ದೆ ಗೈಯೋನ ಹೊತ್ತು ನುಂಗ್ತು
  • ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
  • ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
  • ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
  • ನಿನ್ನ ಹಿತು(ಮುದ್ದು),ನನ್ನ ತಿಂತು
  • ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು
  • ನಿಷ್ಠೆ ಇಲ್ಲದವನಿಗೆ ದೈವ ಬಟ್ಟಬಯಲು
  • ನಿಷ್ಠೆ ಇಲ್ಲದೆ ಎಷ್ಟು ಪೂಜೆ ಮಾಡಿದರೂ ನಷ್ಟ
  • ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ
  • ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
  • ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
  • (ನೀನು)ಮೊಳ ಬಿಟ್ಟರೆ,(ನಾನು) ಮಾರು ಬಿಡುತ್ತೇನೆ
  • ನೀರಿನಲ್ಲಿ ಹೋಮ ಮಾಡಿದಂತೆ
  • ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ
  • ನೀರಿಳಿಯದ ಗಂಟಲೊಳ್ ಕಡುಬಂ ತುರುಕಿದಂತಾಯ್ತು (ಮುದ್ದಣ)
  • ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
  • ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು
  • ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಕಾದಡಿತು
  • ನುಡಿಯಲಿ ಸಲ್ಲನದಾವುದಕೂ.
  • ನುಡಿಯಿರದವನಿಗೆ ಇಲ್ಲವು ನಾಡೂ
  • ನುಡಿಯೊಳು ಕ೦ಪಿಡುವುದು ಬದುಕು
  • ನುಡಿಯೊಳು ಹೊಳೆವುದು ನಾಡಿನ ನಡವಳಿ.
  • ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
  • ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
  • ನೂಲಿನಂತೆ ಸೀರೆ; ತಾಯಿಯಂತೆ ಮಗಳು
  • ನೆಚ್ಚಿನೆಮ್ಮೆ ಕೋಣನನ್ನೀಯಿತು
  • ನೆತ್ತರು ಉಕ್ಕಿದರೆ ಜೀವ ತೊಡಕೀತು
  • ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ
  • ನೆರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ
  • ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
  • ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
  • ನೆಂಟ ನೆರವಲ್ಲ ಕುಂಟ ಜೊತೆಯಲ್ಲ
  • ನೆಂಟರಿಗೆ ದೂರ ; ನೀರಿಗೆ ಹತ್ತಿರ
  • ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
  • ನೇಮ ಉಳ್ಳವನ ಕಂಡರೆ ಯಮನಿಗೂ ಭಯ
  • ನೋಡಿ ನಡೆದವರಿಗೆ ಕೇಡಿಲ್ಲ.
  • ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
  • ಪಡುವಣ ಮನೆಗೆ ಮೂಡಣ ದೀಪ
  • ಪದದೊಳಿಲ್ಲ ತಾನರ್ಥದೊಳಿಲ್ಲವು
  • ಪದಾರ್ಥ ಸ೦ಘಾತದೊಳಿಲ್ಲ
  • ಪರರ ಹಂಗಿಸಿ ಮಂಗ ಅನಿಸಿಕೊಂಡ
  • ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು
  • ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು
  • ಪಾಪ ಅಂದ್ರೆ ಕರ್ಮ ಬರ್ತದೆ
  • ಪಾಪಿ ಚಿರಾಯು
  • ಪಾಪಿ ಚುನಾವಣೆಗೆ ನಿ೦ತರೆ ಮೂರೇ ಓಟು.
  • ಪಾಪಿ ಧನ ಪ್ರಾಯಶ್ಚಿತ್ತಕ್ಕೆ
  • ಪಾಪಿ ಸಮುದ್ರ ಹೊಕ್ಕರು ಮೊಣಕಾಲುದ್ದ ನೀರು
  • ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು
  • ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು
  • ಪಾಯಸ ಮಾಡಿ ನಾಯಿ ಬಾಲದಲ್ಲಿ ತೊಳಸಿದ ಹಾಗೆ
  • ಪಾಲಿಗೆ ಬಂದದ್ದು ಪಂಚಾಮೃತ
  • ಪಾಲಿಗೆ ಬಂದದ್ದೆ ಪರಮಾನ್ನ.
  • ಪಾಂಡವರು ಪಗಡೆಯಾಡಿ ಕೆಟ್ಟರು ; ಹೆಣ್ಣುಮಕ್ಕಳು ಕವಡೆಯಾಡಿ ಕೆಟ್ಟರು
  • ಪಿಶಾಚಿ ಬಿಟ್ಟರೂ ನಿಶಾಚರ ಬಿಡ
  • ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
  • ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು
  • ಪುರಾಣ ಹೇಳೊಕೆ; ಬದನೆಕಾಯಿ ತಿನ್ನೋಕೆ
  • ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ
  • ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
  • ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
  • ಪ್ರಥಮ ಚುಂಬನೇ ದಂತ ಭಗ್ನಮ್
  • ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
  • ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
  • ಪ್ರಸ್ತಕ್ಕಿಲ್ಲದ ಮಾತು ಹತ್ತುಸಾವಿರವಿದ್ದೇನು
  • ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
  • ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು
  • ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
  • ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು
  • ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ 'ಭುಸ್' ಅಂತಂತೆ
  • ಬಡವನ ಸಿಟ್ಟು ದವಡೆಗೆ ಮೂಲ
  • ಬಡವನಿಗೆ ಉಳಿದಷ್ಟೆ ಅಭಿಮಾನ
  • ಬಡವ ನೀ ಮಡಗಿದ ಹಾಗಿರು
  • ಬಡವ ನೀ ಸೆಣಸಿ ಕೆಡಬೇಡ
  • ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
  • ಬಡವರ ಮನೆ ಊಟ ಚೆನ್ನ, ದೊಡ್ಡವರ ಮನೆ ನೋಟ ಚೆನ್ನ
  • ಬಡವರ ಮಾತು ನುಡಿನುಡಿಗೂ ಬೇಸರ
  • ಬಡವೆ ಸೀರೆ ಉಡದೆ ಮಾಸಿತು
  • ಬಡ್ಡಿ ಬಾಯಿಗಂಜ್ತೀಯೋ,ದೊಡ್ಡೆತ್ತಿನ ಕೋಡಿಗಂಜ್ತೀಯೋ
  • ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ
  • ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು
  • ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
  • ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು
  • ಬರಿಗೈಯವರ ಬಡಿವಾರ ಬಹಳ.
  • ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
  • ಬರೀ ಮಾತಾಡಿ ಬೈಯ್ಯಿಸಿಕೊಂಡ
  • ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
  • ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯ್ತು
  • ಬಲ್ಲವನೇ ಬಲ್ಲ ಬೆಲ್ಲದ ರುಚಿಯ
  • ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು
  • ಬಸವನ ಹಿಂದೆ ಬಾಲ,ಸೂಜಿ ಹಿಂದೆ ದಾರ
  • ಬಸುರಲ್ಲಿ ಬಂದ ಕೂಸು ಮುದ್ದು
  • ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ
  • ಬಳ್ಳಿಗೆ ಕಾಯಿ ಭಾರವೇ
  • ಬಾಡಿಗೆ ಎತ್ತೆಂದು ಬಡಿದು ಬಡಿದು ಹೂಡಬೇಕೆ
  • ಬಾಣಲೆಯಿಂದ ಬೆಂಕಿಗೆ
  • ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
  • ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
  • ಬಾಯಲ್ಲಿ ಬೆಣ್ಣೆ;ಬಗಲಲ್ಲಿ ದೊಣ್ಣೆ.
  • ಬಾಯಲ್ಲಿ ಬೆಲ್ಲ ಕರುಳು ಕತ್ತರಿ
  • ಬಾಯಲ್ಲಿ ಬೆಲ್ಲ ಕರುಳು ಕತ್ತರಿ
  • ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
  • ಬಾಯಿ ಬಿಟ್ಟರೆ ಬಣ್ಣಗೇಡು
  • ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
  • ಬಾಲ ಸುಟ್ಟ ಬೆಕ್ಕಿನ ಹಾಗೆ
  • ಬಾಲೇರ ಮನಸ್ಸು ನೆಲೆಯಿಲ್ಲ
  • ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ
  • ಬಾಳಿಬದುಕಿದವ ಕಲಿ(=ವಿದ್ಯೆ)ಕಲಿತ, ಬಾಳಲಾರದವ ಪಾಠ ಕಲಿತ
  • ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ
  • ಬಿಟ್ಟವರ ಕಂಡು ಬಿಟ್ಟು ಬಾಳುಗೆಟ್ಟ
  • ಬಿಟ್ಟಿ ಬಂದದ್ದಾದರೆ ನನಗೂ ಇರಲಿ,ನಮ್ಮ ತಾತಂಗೂ ಇರಲಿ.
  • ಬಿಡಿಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
  • ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
  • ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು.
  • ಬಿದ್ದರೂ ಮೀಸೆ ಮಣ್ಣಾಗಲಿಲ್ಲ
  • ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
  • ಬಿದ್ದಿನ (=ಅತಿಥಿ, ನೆಂಟ) ಬಂದು ಹಾಳು ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
  • ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
  • ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ
  • ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ
  • ಬಿಳಿ ಆನೆ ಸಾಕಿದ ಹಾಗೆ
  • ಬೀಜ ಸಣ್ಣದಾದರೆ ಮರ ಸಣ್ಣದೋ
  • ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
  • ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
  • ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
  • ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು
  • ಬೀಳು ಭೂಮಿಗೆ ಬೀಜ ದಂಡ
  • ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
  • ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
  • ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
  • ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ
  • ಬೆಕ್ಕಿನ ಕನಸಿನಲ್ಲಿ ಬರೀ ಇಲಿಗಳೇ
  • ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
  • ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
  • ಬೆಟ್ಟ ಅಗೆದು ಇಲಿ ಹಿಡಿದಂತೆ
  • ಬೆಟ್ಟ ಮಹಮ್ಮದನ ಬಳಿ ಬರಲ್ಲ,ಮಹಮ್ಮದನೇ ಬೆಟ್ಟದ ಬಳಿ ಹೋಗಬೇಕು
  • ಬೆಣ್ಣೆಯೊಳಗಿನ ಕೂದಲು ತೆಗೆದಂತೆ
  • ಬೆಣ್ಣೇಲಿ ಕೂದಲು ತೆಗೆದ ಹಾಗೆ
  • ಬೆನ್ನಹಿಂದೆ ಬಿದ್ದು (ಓಡಿ)ಬನ್ನ ಪಟ್ಟ
  • ಬೆರಳು ತೋರಿಸಿದರೆ ಅಂಗೈ ನುಂಗಿದಂತೆ.
  • ಬೆರಳು ತೋರಿಸಿದರೆ ಹಸ್ತ ನುಂಗಿದರಂತೆ
  • ಬೆರಳು ತೋರುದ್ರೆ ಅಂಗೈನೇ ನುಂಗಿದಂತೆ
  • ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
  • ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ
  • ಬೆಲ್ಲವಿಲ್ಲದಿದ್ದರೆ ಬೆಲ್ಲದಂಥ ಮಾತೂ ಇಲ್ಲವೇ?
  • ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
  • ಬೆಳೆಯುವ ಪೈರು ಮೊಳಕೆಯಲ್ಲಿ
  • ಬೆಳ್ಳಗಿರೋದೆಲ್ಲ ಹಾಲಲ್ಲ
  • ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
  • ಬೆಳ್ಳಗಿರೋದೆಲ್ಲಾ ಹಾಲಲ್ಲ
  • ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
  • ಬೆಂಕಿ ಇಲ್ಲದೆ ಹೊಗೆ ಏಳಲ್ಲ
  • ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ
  • ಬೆಂದ ಮನೆಗೆ ಹಿರಿದದ್ದೇ ಲಾಭ
  • ಬೆಂದ ಮನೇಲಿ ಹಿರಿದದ್ದೇ ಲಾಭ
  • ಬೇಕೆಂಬುದು ಬಾಳು ಸಾಕೆಂಬುದು ಸಾವು
  • ಬೇಡಿದರೆ ಇಲ್ಲ ಅನ್ನೋದ್ ಕಷ್ಟ ನೀಡುವರ ಬೇಡ ಅನ್ನೋದ್ ಕಷ್ಟ
  • ಬೇಲಿನೆ ಎದ್ದು ಹೊಲ ಮೇಯಿತಂತೆ
  • ಬೇಲಿಯೇ ಎದ್ದು ಹೊಲ ಮೇದಂತೆ
  • ಬೇಲಿಯೇ ಎದ್ದು ಹೊಲ ಮೇಯ್ದಂತೆ
  • ಬೇವು ಕಾಗೆಗೆ ಇಷ್ಟ , ಮಾವು ಕೋಗಿಲೆಗೆ ಇಷ್ಟ
  • ಬೇವು ಕಾಗೆಗೆ ಇಂಪು ಮಾವು ಕೋಗಿಲೆಗೆ ಇಂಪು
  • ಬೇಸರವಿರಬಾರದು, ಅವಸರ ಮಾಡಬಾರದು.
  • ಬೈದು ಹೇಳಿದವರು ಬದುಕಕ್ಕೆ ಹೇಳಿದರು
  • ಬೊಗಳುವ ನಾಯಿ ಕಚ್ಚುವುದಿಲ್ಲ
  • ಬೋನದ ಬುತ್ತಿ ತಪ್ಪಿ ಚಿತ್ತವಲ್ಲಭೆಯನ್ನು ಮರೆಸಿತ್ತು
  • ಬಂಗಾರಕ್ಕೆ ಕುಂದಣವಿಟ್ಟಂತೆ
  • ಬಂಟರ ಅಬ್ಬರ ಸೇವಿನ ಗೊಬ್ಬರ
  • ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
  • ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ
  • ಬಂದ ದಾರಿಗೆ ಸುಂಕವಿಲ್ಲ
  • ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ
  • ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ
  • ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ
  • ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ
  • ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್‌ತಂತೆ
  • ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ
  • ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
  • ಭಂಗಿ ರಸ ನೆತ್ತಿಗೇರಿ ಬಿಂಗಿಯಂತಾದ
  • ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
  • ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ
  • ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
  • ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ
  • ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ)
  • ಮಗೂನ ಚಿವುಟೋದು, ತೊಟ್ಟಿಲು ತೂಗೋದು
  • ಮಘಾ ಮಳೆ ಬಂದಷ್ಟು ಒಳ್ಳೇದು ; ಮನೆ ಮಗ ಉಂಡಷ್ಟು ಒಳ್ಳೇದು.
  • ಮದುವೆ ಆಗೋ ಗ೦ಡಿಗೆ ಅದೇ ಇಲ್ಲ ಅ೦ದ೦ಗೆ.
  • ಮದುವೆ ಮಡಿನೋಡು ಮನೆ ಕಟ್ಟಿ ನೋಡು
  • ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
  • ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ
  • ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
  • ಮದುವೇಲಿ ಗಂಡು, ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
  • ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
  • ಮನಸಿದ್ದರೆ ಮಾರ್ಗ.
  • ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ
  • ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
  • ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
  • ಮನೆಗೆ ಮಾರಿ, ಊರಿಗೆ ಉಪಕಾರಿ.
  • ಮನೆಗೆ ಮಾರಿ, ಪರರಿಗೆ ಉಪಕಾರಿ
  • ಮನೆ ತುಂಬ ಮುತ್ತಿದ್ದರೆ ...ಗೂ ಪೋಣಿಸಿಕೊಂಡರಂತೆ
  • ಮನೆ ದೇವರನ್ನ ಮೂಲೆಗಿಟ್ಟು ಬೆಟ್ಟದ ದೇವರಿಗೆ ಬುತ್ತಿ ಹೊತ್ತಂತೆ.
  • ಮನೆ ಮಗ ಉ೦ಡಷ್ಟೂ ಒಳ್ಳೇದು, ಮಗೆ ಮಳೆ ಬ೦ದಷ್ಟೂ ಒಳ್ಳೇದು.
  • ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
  • ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
  • ಮನೇಲಿ ಇಲಿ,ಬೀದೀಲಿ ಹುಲಿ
  • ಮರ ಕಡಿದು ಮೈಮೇಲೆ ಹಾಕಿಕೊಂಡ್ರಂತ
  • ಮರಗಿಣಿಯ ಕೂಡೆ ಆಡಿ ಅರಗಿಣಿ ಕೇಟ್ಟಿತು
  • ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
  • ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ
  • ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ
  • ಮಳೆಗಾಲದ ಮಳೆ ನಂಬಲಾಗದು ; ಮನೆ ಹೆಂಡ್ತಿ ನಗೆ ನಂಬಲಾಗದು.
  • ಮಳೆಗಾಲದೇಲಿ ಚಿಗಿಯೂದಿಲ್ಲ ಬೇಸಿಗೇಲಿ ಒಣಗೂದಿಲ್ಲ
  • ಮಳೆ ಹುಯ್ದರೆ ಕೇಡಲ್ಲ; ಮಗ ಉಂಡರೆ ಕೇಡಲ್ಲ
  • ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
  • ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ
  • ಮಾಘ ಕಾವ್ಯ ಮಗನಿಗೆ ಬೇಡ
  • ಮಾಟ ಮಾಡಿದೋನ ಮನೆ ಹಾಳು.
  • ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ
  • ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
  • ಮಾಡಿದ ಕರ್ಮ ಬೆನ್ನಾಡಿ ಬಂತು
  • ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು
  • ಮಾಡಿದ ಪಾಪ ದಾನದಿಂದ ಹೋದೀತೆ
  • ಮಾಡಿದರೆ ಮನೆ ; ಹೂಡಿದರೆ ಒಲೆ
  • ಮಾಡಿದುಣ್ಣೊ ಮಾರಾಯ
  • ಮಾಡಿದೋರ ಪಾಪ ಆಡಿದೋರ ಬಾಯಲ್ಲಿ
  • ಮಾಡಿದ್ದುಣ್ಣೋ ಮಹರಾಯ
  • ಮಾಡಿದ್ದುಣ್ಣೋ ಮಾರಾಯ
  • ಮಾಡುವವ ಉತ್ತಮ ಆಡಿ ಮಾಡದವ ಅಧಮ
  • ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
  • ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
  • ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
  • ಮಾತಿಗೆ ಮಾತುಗಳ ಓತು ಸಾಸಿರ ಉಂಟು
  • ಮಾತಿಗೆ ಸಾಯದೇ ಇದ್ದೋನೂ ಏಟಿಗೂ ಸಾಯುವುದಿಲ್ಲ.
  • ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
  • ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು
  • ಮಾತಿನ ಬೊಮ್ಮ ತೂತಾದ ಮಡಕೆಯ ಪರಿ
  • ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
  • ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ
  • ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು
  • ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯ್ತು.
  • ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
  • ಮಾತು ಬೆಳ್ಳಿ, ಮೌನ ಬಂಗಾರ.
  • ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು
  • ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
  • ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
  • ಮಾನಿಷ್ಟರು ಮಾನಕ್ಕೆ ಅಂಜಿದರೆ ಮಾನಗೇಡಿ ತನಗೇ ಅಂಜಿದರು ಅಂದನಂತೆ
  • ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ್ ಕಣ್ಣು ಕುರಿ ಮ್ಯಾಲೆ.
  • ಮಾರಿಯ ಹೋತ ತೋರಣದ ಚಿಗುರು ಬಯಸಿತಂತೆ
  • ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
  • ಮಿಂಚಿಹೋದ ಕಾರ್ಯಕ್ಕೆ ಚಿಂತಿಸಿ ಫಲವೇನು ?
  • ಮಿಂದರೆ ಮೈಯ ಕೊಳೆ ಹೋಯ್ತು
  • ಮಿಂದು ಮೈಲಿಗೆ ಉಡೊದಾದ್ರೆ ಜಳಕದ ದಂದುಗವೇಕೆ
  • ಮೀಸೆ ಬ೦ದವಗೆ ದೇಶ ಕಾಣದು, ಮೊಲೆ ಬ೦ದವಳಿಗೆ ನೆಲ ಕಾಣದು.
  • ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು
  • ಮು೦ಡೆಯ ಮದುವೆಯಲ್ಲಿ ಉ೦ಡೋನೆ ಜಾಣ.
  • ಮುಖ ನೋಡಿ ಮಣೆ ಹಾಕು
  • ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು
  • ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ
  • ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
  • ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು
  • ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.
  • ಮುದ ಹರಡುವ ಕಲೆ ಋಷಿ ಬಲ್ಲ.
  • ಮುದಿ ... ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
  • ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
  • ಮುದುಕೀ ನಿನ್ನಾಟ ಮುಂದೈತಿ
  • ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
  • ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
  • ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
  • ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
  • ಮುಸುಕಿನೊಳಗೆ ಗುದ್ದಿಸಿಕೊಂಡಂತೆ
  • ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ
  • ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
  • ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
  • ಮುಂದೆ ಬರೋ ಕೋಡಿಗಿಂತ ಹಿಂದೆ ಬರೋ ಬಾಲಾನೇ ವಾಸಿ
  • ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
  • ಮೂಗಿಗಿಂತ ಮೂಗುತಿ ಭಾರ
  • ಮೂಗು ಹಿಡಿದರೆ ಬಾಯಿ ತಾನೇ ತೆರೆಯುವುದು
  • ಮೂರು ವರ್ಷಕ್ಕೆ ಬಂದಿದ್ದು ಮೂವತ್ತು ವರ್ಷಕ್ಕೆ ಬಂತು
  • ಮೂರೂ ಬಿಟ್ಟೋನು,ಊರಿಗೆ ದೊಡ್ಡೋನು
  • ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು
  • ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
  • ಮೃತ್ಯು ಬಂದ ಮೇಲೆ ವೈದ್ಯ ಬಂದ.
  • ಮೆತ್ತಗಿದ್ದಲ್ಲಿ ಮತ್ತೊಂದು ಗುದ್ದಲಿ
  • ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
  • ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು
  • ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
  • ಮೇಲೆ ಬಸಪ್ಪ ಒಳಗೆ ವಿಷಪ್ಪ
  • ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ
  • ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
  • ಮೊದಲಿದ್ದವಳೇ ವಾಸಿ ಎಬ್ಬಿಸಿದರೆ ಉಣ್ಣೋಳು
  • ಮೊಲ ಎಬ್ಬಿಸಿ ...ಕ್ಕೆ ಕೂತರು
  • ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
  • ಮೊಂಡ ಕೊಡಲಿ ರಟ್ಟೆಗೆ ಮೂಲ
  • ಮೊಂಡ ಮಾವನಿಗೊಬ್ಬ ಭಂಡ ಅಳಿಯ
  • ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು
  • ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?
  • ಮೋಟಾಳಿಗೊಂದು ಚೋಟಾಳು
  • ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
  • ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
  • ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ
  • ಮಂತ್ರಕ್ಕಿಂತ ಉಗುಳೇ ಜಾಸ್ತಿ
  • ಮಂತ್ರಕ್ಕಿಂತ ಉಗುಳೇ ಹೆಚ್ಚು.
  • ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
  • ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
  • ಮಂತ್ರಿಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ
  • ಮಂದಾಳಿಗೊಂದು ಮುಂದಾಳು
  • ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು
  • ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
  • ಯಥಾ ರಾಜಾ ತಥಾ ಪ್ರಜಾ
  • ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
  • ಯಾರ ತೋಟದ ಹುಲ್ಲು ಮೇದಾದ್ರೂ ನಮ್ಮ ಕರು ದೊಡ್ಡದಾಗಲಿ.
  • ಯಾರದೊ ದುಡ್ಡಿನಲ್ಲಿ ಯೆಲ್ಲಮನ್ನ ಜಾತ್ರೆ
  • ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
  • ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
  • ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
  • ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
  • ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
  • ಯಾರನ್ನ ನಂಬಿದರು ಆರೈದು ನಂಬಬೇಕು
  • ಯಾರ ಹೆ೦ಡ್ತಿ ಎಲ್ಲಿಯಾದರೂ ಹೋಗಲಿ ನಮ್ಮ ಹೆ೦ಡ್ತಿ ನಮ್ಮನೇಲಿರಲಿ
  • ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು
  • ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
  • ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
  • ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
  • ಯಾವ ದೇವರು ವರ ಕೊಟ್ಟರೂ ಗ೦ಡನಿಲ್ಲದೆ ಮಕ್ಕಳಾಗದು.
  • ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ
  • ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
  • ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ
  • ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
  • ಯೋಗ ಇದ್ದಷ್ಟೇ ಭೋಗ
  • ಯೋಗವಿದ್ದಷ್ಟು ಭೋಗ .
  • ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
  • ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
  • ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
  • ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
  • ಯಂಕ,ಸೀನ,ನೊಣ ಅಂತ ಮನೇಲಿ ಮೂರೇ ಜನ
  • ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
  • ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
  • ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದರು
  • ರವಿ ಕಾಣದ್ದನ್ನು ಕವಿ ಕಂಡ
  • ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
  • ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
  • ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ
  • ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ
  • ರಸಿಕನ ನುಡಿ ತಿಂಗಳ ಬೆಳಕಿನಂತೆ
  • ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
  • ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
  • ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
  • ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
  • ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
  • ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
  • ರಾಜ ಇರೋತನಕ ರಾಣಿ ಭೋಗ
  • ರಾಜ ಇರೋತನಕ ರಾಣಿ ಭೋಗ
  • ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
  • ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
  • ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
  • ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
  • ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
  • ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
  • ರಾಮಾಯ ಸ್ವಸ್ತಿ, ರಾವಣಾಯ ಸ್ವಸ್ತಿ .
  • ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
  • ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
  • ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲಿಲ್ಲ
  • ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ .
  • ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
  • ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
  • ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
  • ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
  • ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು
  • ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
  • ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
  • ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
  • ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
  • ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ
  • ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?
  • ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
  • ಲ೦ಚ ಕೊಡದವನಿಗೆ ಕೊ೦ಚವೂ ಸಿಗದು.
  • ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
  • ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
  • ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
  • ಲಕ್ಷ್ಮಿ ಚಂಚಲೆ
  • ಲಲನೆಯರ ಒಲುಮೆ ತೊಲಗಿದರೆ ಇಲ್ಲ
  • ಲಲನೆಯರ ಒಲುಮೆ ತೊಲಗಿದರೆ ಇಲ್ಲ
  • ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
  • ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
  • ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
  • ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು
  • ಲಾಲಿಸಿದರೆ ಮಕ್ಕಳು ಪೂಜಿಸಿದರೆ ದೇವರು
  • ಲಿಂಗ ಹರಿದ ಮೇಲೆ ಜಂಗಮನ ಹಂಗೇನು
  • ಲಿಂಗ ಹರಿದ ಮೇಲೆ ಜಂಗಮನ ಹಂಗೇನು
  • ಲೇ ಅನ್ನಲು ಅವಳೇ ಇಲ್ಲ ಮಗನ ಹೆಸರು ಮುದ್ದುರ೦ಗ.
  • ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
  • ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
  • ಲಂಘನಮ್ ಪರಮೌಷಧಮ್
  • ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
  • ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
  • ವಜ್ರಕ್ಕೆ ಸಾಣಿ ಹಿಡಿದಂತೆ
  • ವರಕವಿಗಳ ಮುಂದೆ ನರಕವಿಗಳು ವಿದ್ಯೆ ತೋರಬಾರದು
  • ವಶಗೆಡದೆ ಹಸಗೆಡಲ್ಲ
  • ವಶಗೆಡದೆ ಹಸಗೆಡಲ್ಲ
  • ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ
  • ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
  • ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
  • ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ
  • ವಿಧಿ ಕಾಣದ ಎಡೆಗಳಿಲ್ಲ
  • ವಿಧಿ ಮುನಿದರೆ ಸರಿ ಬೆಸವಾಯ್ತು
  • ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
  • ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
  • ವಿನಾಶ ಕಾಲೇ ವಿಪರೀತ ಬುದ್ಧಿ
  • ವಿರೂಪಾಕ್ಷ ಹ೦ಪೆ ಬಿಡ, ವಿಘ್ನೇಶ್ವರ ಕೊ೦ಪೆ ಬಿಡ.
  • ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
  • ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
  • ವೇದ ಸುಳ್ಳಾದರು ಗಾದೆ ಸುಳ್ಳಾಗದು.
  • ವೇದ ಸುಳ್ಳಾದರು ಗಾದೆ ಸುಳ್ಳಾಗದು.
  • ವೇದ ಸುಳ್ಳಾದರೂ ಗಾದೆ ಸುಳ್ಳಾಗದು
  • ವೇದ ಸುಳ್ಳಾದ್ರು ಗಾದೆ ಸುಳ್ಳಲ್ಲ.
  • ವೈದ್ಯರ ಹತ್ತಿರ, ವಕೀಲರ ಹತ್ತಿರ ಸುಳ್ಳು ಹೇಳಬೇಡ
  • ವೈರವಿದ್ದವನ ಕರೆದು ಮುಖಕ್ಷೌರ ಮಾಡಿಸಿಕೊ೦ಡಹಾಗೆ.
  • ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
  • ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
  • ವ್ರತ ಕೆಟ್ಟರೂ ಸುಖ ಪಡಬೇಕು
  • ಶರಣರ ಬದುಕನ್ನು ಅವರ ಮರಣದಲ್ಲಿ ನೋಡು
  • ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
  • ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
  • ಶಿವಪೂಜೇಲಿ ಕರಡಿ/ಕರಡಿಗೆ ಬಿಟ್ಟ ಹಾಗೆ
  • ಶಿವ ಪೂಜೇಲಿ ಕರಡಿ ಬಿಟ್ಟಂಗೆ
  • ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
  • ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
  • ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
  • ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
  • ಶಿಸ್ತುಗಾರ ಪುಟ್ಟಶಾಮಿ
  • ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
  • ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
  • ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
  • ಶೆಟ್ಟಿ ಬಿಟ್ಟಲ್ಲೆ ಪಟ್ಣ
  • ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು
  • ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
  • ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
  • ಶಂಖದಿಂದ ಬಿದ್ದರೆ ತೀರ್ಥ
  • ಶಂಖದಿಂದ ಬಂದರೇ ತೀರ್ಥ
  • ಶ್ಯಾನುಭೋಗರ ಸ೦ಬಳ ಸ೦ತೋಷ ಕೇಳಬೇಡಾ.
  • ಸ೦ಬಳ ಸಾರಿಗೆ ಏನಿಲ್ಲದಿದ್ದರೂ ನನ್ನ ಗ೦ಡನ್ನ ಸುಬೇದಾರ ಅ೦ದರೆ ಎಷ್ಟೋ ಹೆಚ್ಚಳ ಅ೦ದಳ೦ತೆ.
  • ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
  • ಸಗಣಿಯವನೊಡನೆ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು
  • ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
  • ಸಜ್ಜನರ ಸಂಗ ಹೆಜ್ಜೇನು ಸವಿದಂತೆ
  • ಸಜ್ಜನರ ಸಂಗ ಹೆಜ್ಜೇನು ಸವಿದಂತೆ
  • ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
  • ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
  • ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ
  • ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
  • ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
  • ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
  • ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
  • ಸತ್ತು ಕೊಳ್ಳೋ ಸೊರ್‍ಗಕ್ಕಿಂತ ಬದುಕಿ ಕೊಳ್ಳೋ ನರಕ ಲೇಸು
  • ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
  • ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
  • ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
  • ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
  • ಸದಾಶಿವನಿಗೆ ಅದೇ ಧ್ಯಾನ
  • ಸನ್ಯಾಸಿಗೆ ಯಾತರ ಕಳವಳ ಅಂದ್ರೆ ಅನ್ನದ್ದೊಂದೇ ಕಳವಳ.
  • ಸನ್ಯಾಸಿ ಬೆಕ್ಕು ಸಾಕಿದ ಹಾಗೆ
  • ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
  • ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು
  • ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
  • ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
  • ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
  • ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
  • ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
  • ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
  • ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
  • ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
  • ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
  • ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
  • ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
  • ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
  • ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
  • ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
  • ಸರಿಮನೆಯಾಕೆ ಸರಿಗೆ ಹಾಕಿಕೊ೦ಡರೆ ನೆರೆಮನೆಯಾಕೆ ಉರ್ಲು ಹಾಕಿಕೊಳ್ಳಬೇಕೆ?
  • ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ
  • ಸರಿಸರಿಯಾಗಿದ್ರೆ,ಪರಿಪರಿ ನೆಂಟರು
  • ಸರಿಸುಮಾರಾಗಿ ಸಮಾನಾರ್ಥಕ ಗಾದೆಗಳು
  • ಸಲಿಗೆ ಕೊಟ್ಟ ಸೊಣಗ ಸಟ್ಟುಗ ನೆಕ್ಕಿತಂತೆ
  • ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
  • ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
  • ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
  • ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ
  • ಸಾದೆತ್ತಿಗೆ ಎರಡು ಹೇರು (ಹೊರೆ)
  • ಸಾದೆತ್ತಿಗೆ ಎರಡು ಹೇರು (ಹೊರೆ)
  • ಸಾಮವೇದದ ಗಾನ ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
  • ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
  • ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
  • ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
  • ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
  • ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
  • ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
  • ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ.
  • ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
  • ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
  • ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ
  • ಸಾಲ ಕೊಳ್ಳುವಾಗ ಹಾಲು ಕುಡಿದಂತೆ, ಸಾಲ ತಿರುಗಿ ಕೊಡುವಾಗ ಕಿಬ್ಬದಿ ಕೀಲು ಮುರಿದಂತೆ
  • ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
  • ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
  • ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
  • ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
  • ಸಾವಿರ ಉಳಿ ಪೆಟ್ಟು,ಒಂದು ಚಿತ್ತಾರ
  • ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
  • ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
  • ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
  • ಸಾವಿರ ಕೊಟ್ಟರೂ ಸವತಿ ಮನೆ ಬೇಡ
  • ಸಾವಿರ ಕೊಟ್ಟರೂ ಸವತಿ ಮನೆ ಬೇಡ
  • ಸಾವಿರ ಚಿತ್ತಾರ ಮಸಿ ನುಂಗಿತು
  • ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
  • ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
  • ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
  • ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
  • ಸಾವಿರ ಸುಳ್ಳು ಹೇಲಿ ಒಂದು ಮದುವೆ ಮಾಡು
  • ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
  • ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
  • ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
  • ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
  • ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
  • ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.
  • ಸಾವಿರ ಸುಳ್ಳು ಹೇಳಿ ಮದುವೆ ಮಾಡು
  • ಸಿಟ್ಟು ಬಂದರೆ ಪಡಿ ಹಿಟ್ಟು ಮುಕ್ಕು
  • ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ
  • ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
  • ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ
  • ಸಿರಿತನ ಇರೂತನ ಹಿರಿತನ ಘನ
  • ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
  • ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು
  • ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
  • ಸಿರಿಯವ್ವನದ ಹೆಣ್ಣು ಸಕ್ಕರೆ ಬೊಂಬೆಯಂತೆ
  • ಸಿರಿ ಸೋಂಕಿದವರ ಪರಿ ಬೇರೆ
  • ಸಿರಿ ಸೋಂಕಿದವರ ಪರಿ ಬೇರೆ
  • ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
  • ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
  • ಸು೦ದರ ಪುರುಷನೆಲ್ಲೆ ಸುಪಣಾತಿ ಅ೦ದ್ರೆ ಸೂಳೆ ಮನೇಲಿ ಸುಖನಿದ್ರೇಲವ್ರೆ ಎ೦ದಳು.
  • ಸುಖೀವಂತ್ಗೆ ದುಕ್ಕ ಹೇಳುವತ್ಗೆ ಅಳೂದು ಬುಟ್ಬುಟ್ಟು ನನ್ನ ಕೂಡ್ಕೊ ಅಂದನಂತೆ
  • ಸುಡುವ ಮನೆಯ ಗಳ ಹಿರಿದಂತೆ
  • ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ
  • ಸುಳ್ಳು ದೇವರಿಗೆ ಕಳ್ಳ ಪೂಜಾರಿ
  • ಸುಳ್ಳು ದೇವರಿಗೆ ಕಳ್ಳ ಪೂಜಾರಿ
  • ಸುಳ್ಳು ದೇವರಿಗೆ ಕಳ್ಳ ಪೂಜಾರಿ.
  • ಸುಳ್ಳು ಹೇಳಿದರೂ ನಿಜದ ತಲೆಯ ಮೇಲೆ ಹೊಡೆದಂಗೆ ಹೇಳಬೇಕು
  • ಸುಂಕದವನ ಮುಂದೆ ಸುಖದುಃಖವೇ
  • ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
  • ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
  • ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
  • ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
  • ಸೂಳೆ ಕೈಯಲ್ಲಿ ಜೋಳ ಕುಟ್ಟಿಸಿದ ಹಾಗೆ
  • ಸೂಳೆ ಕೈಲಿ ಜೋಳ ಕುಟ್ಟಿಸಿದ ಹಾಗೆ
  • ಸೂಳೆಗೆ ಮದುವೆ ಮಾಡಿದ ಹಾಗೆ
  • ಸೂಳೆ ಪಾಪ ಸನ್ಯಾಸಿಗೆ
  • ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
  • ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
  • ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
  • ಸೇರಿಗೆ ಸವ್ವಾಸೇರು
  • ಸೇರಿಗೆ ಸವ್ವಾ ಸೇರು
  • ಸೊಕ್ಕಿದ್ದವನಿಗೆ ಯಾಣ, ರೊಕ್ಕಿದ್ದವನಿಗೆ ಪಟ್ಟಣ.
  • ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
  • ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
  • ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ
  • ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
  • ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
  • ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
  • ಸೊಸೆಗೆ ಮನೆವಾಸ, ಅತ್ತೆಗೆ ಪರವಾಸ
  • ಸೋದರ ಮಾವನ ಚಾಳು ತುಂಡಪುಂಡರ ಪಾಲು
  • ಸಂಕಟ ಬಂದಾಗ ವೆಂಕಟರಮಣ
  • ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
  • ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
  • ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ
  • ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ.
  • ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
  • ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
  • ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
  • ಸಂತೇಲಿ ಮನೇ ಮಾಡಿ ಸದ್ದಿಗಂಜೂದೇ
  • ಸಂತೇಲಿ ಮಂತ್ರ ಹೇಳಿದಂಗೆ
  • ಸಂತೇಲಿ ಮಂತ್ರ ಹೇಳಿದಂಗೆ
  • ಸಂದೀಲಿ ಸಮಾರಾಧನೆ
  • ಸಂದೀಲಿ ಸಮಾರಾಧನೆ ಮಾಡ್ದಂಗೆ
  • ಸಂದೀಲಿ ಸಮಾರಾಧನೆ ಮಾಡ್ದಂಗೆ
  • ಸಂಸಾರ ಗುಟ್ಟು; ವ್ಯಾಧಿ ರಟ್ಟು
  • ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
  • ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
  • ಸ್ಟ್ಯಾ೦ಪಿರುವಷ್ಟು ನಾಲಗೆ ಚಾಚು.
  • ಸ್ವತಂತ್ರವೋ,ಸ್ವರ್ಗಲೋಕವೋ
  • ಸ್ವಧರ್ಮ ತಪ್ಪುದ್ರೂ ಅಧರ್ಮ ಮಾಡಬಾರ್ದು
  • ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
  • ಸ್ವರ್ಗವೂ ತಪ್ಪಿತು ದುರ್ಗವೂ ತಪ್ಪಿತು
  • ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
  • ಹ೦ಪೆಗೆ ಹೋಗದಿದ್ದರೆ ಸ೦ಪಿಗೆ ನೋಡಲಿಲ್ಲವೇ?
  • ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು
  • ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
  • ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
  • ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ
  • ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
  • ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
  • ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
  • ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
  • ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
  • ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
  • ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
  • ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
  • ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
  • ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
  • ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
  • ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
  • ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
  • ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
  • ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
  • ಹಣ ಇಲ್ಲದವ ಹೆಣಕ್ಕಿಂತ ಕಡೆ
  • ಹಣ ಇಲ್ಲದವ ಹೆಣಕ್ಕಿಂತ ಕಡೆ
  • ಹಣ ಎರವಲು ತಂದು ಮಣ ಉರುವಲು ಕೊಂಡ
  • ಹಣ ಎರವಲು ತಂದು ಮಣ ಉರುವಲು ಕೊಂಡ
  • ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ
  • ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
  • ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
  • ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
  • ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
  • ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
  • ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
  • ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
  • ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೊಲ್ಲ
  • ಹತ್ತಿರಕ್ಕೆ ಬಂದರೆ ಹಡಿಕ್ ನಾತ
  • ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
  • ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
  • ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
  • ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
  • ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
  • ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
  • ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
  • ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
  • ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
  • ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
  • ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
  • ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ
  • ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
  • ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
  • ಹದರಿದವರ ಮೇಲೆ ಕಪ್ಪೆ ಎಸೆದರು
  • ಹನಿಹನಿಗೂಡಿದರೆ ಹಳ್ಳ; ತೆನೆತೆನೆಗೂಡಿದರೆ ಬಳ್ಳ
  • ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
  • ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
  • ಹನುಮಂತನೇ ಹಗ್ಗ ತಿನ್ನುವಾಗ ಪೂಜಾರಿಗೆ ಶ್ಯಾವಿಗೆ ಬೇಕಂತೆ
  • ಹನುಮಂತರಾಯ ಹಗ್ಗ ತಿನ್ನುವಾಗ ಪೂಜಾರಿ ಶಾವಿಗೆ ಬೇಡಿದನಂತೆ
  • ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
  • ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
  • ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ
  • ಹಬ್ಬದ ದಿನವೂ ಹಳೇ ಗಂಡನೇ ?
  • ಹರಕಿನಲ್ಲಿ ಇಲಿ ಕಡಿಯಿತು
  • ಹರ ಮುನಿದರೆ ಗುರು ಕಾಯ್ವ
  • ಹರಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
  • ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
  • ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
  • ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
  • ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
  • ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
  • ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
  • ಹರೆಯಕ್ಕೆ ಬಂದಾಗ ಹಂದಿನೂ ಚಂದ
  • ಹರೆಯಕ್ಕೆ ಬಂದಾಗ ಹಂದಿನೂ ಚಂದ
  • ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
  • ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
  • ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
  • ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ
  • ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
  • ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
  • ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
  • ಹಸನಾದ ಮಾತಿಗೆ ಜೀವ ಬೆಸನಾಯ್ತು
  • ಹಸಿ ಗೋಡೆ ಮೇಲೆ ಹರಳು ಎಸೆದಂತೆ
  • ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
  • ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
  • ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
  • ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
  • ಹಸಿದು ಹಲಸು, ಉಂಡು ಮಾವು
  • ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
  • ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
  • ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
  • ಹಳೇ ಗಂಡನ ಪಾದವೇ ಗತಿ
  • ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
  • ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
  • ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
  • ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
  • ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
  • ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
  • ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
  • ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
  • ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
  • ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
  • ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
  • ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
  • ಹಾಡಿದ್ದೇ ಹಾಡಿದ ಕಿಸಬಾಯಿ ದಾಸ
  • ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ
  • ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
  • ಹಾದರ ಹಾಲು ಸಕ್ಕರೆಯಂತೆ,ಬಯಲಾದರೆ, ಬೇವಿನ ಸಾರದಂತೆ
  • ಹಾದಿ ತಪ್ಪಿದವನಿಗೆ ಹದಿನೆಂಟು ಹಾದಿ
  • ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು.
  • ಹಾದೀಲಿ ಹೋಗುವವನ ಕೆಣಕ ಅವನು ಬಂದು ನಿನ್ನ ತದಕ
  • ಹಾಯೋ ಎತ್ತು ಹಾಯ್ದರೂ ಬಂತು ಬಿಟ್ಟರೂ ಬಂತು
  • ಹಾಯ್ದೆ ಇದ್ದರೂ ಎತ್ತಿನ ಕೊಂಬು ಉದ್ದ
  • ಹಾರದ ಕೋತಿಗೆ ಮುಪ್ಪಾಗ ಬೆಲ್ಲ ತಿನ್ನಿಸಿದರಂತೆ
  • ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ
  • ಹಾರುವ ಆಳಲ್ಲ, ಬಾಳೆ ದಡಿಯಲ್ಲ
  • ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
  • ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ
  • ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
  • ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
  • ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ.
  • ಹಾರೋ ಹಕ್ಕಿಗೆ ಹಾದರ ಕಟ್ಟಿದರು.
  • ಹಾರೋ ಹಕ್ಕಿ ಪುಕ್ಕ ಎಣಿಸಿದಂತೆ
  • ಹಾರ‍್ಸೋನೋ ತೀರ‍್ಸೋನೋ.
  • ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
  • ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
  • ಹಾಲಲ್ಲಾದ್ರೂ ಅದ್ದು, ನೀರಲ್ಲಾದ್ರೂ ಅದ್ದು.
  • ಹಾಲಿಗಿಂತ ಕೆನೆ ರುಚಿ
  • ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
  • ಹಾಲಿದ್ದ ಕ೦ಡಲ್ಲಿ ಬೆಕ್ಕು ಹೇಲು ಕ೦ಡಲ್ಲಿ ನಾಯಿ
  • ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
  • ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
  • ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
  • ಹಾಲಿನ ದುಡ್ಡು ಹಾಲಿಗೆ;ನೀರಿನ ದುಡ್ಡು ನೀರಿಗೆ
  • ಹಾಲಿನಲ್ಲಿ ಹುಳಿ ಹಿಂಡಿದಂತೆ
  • ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
  • ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
  • ಹಾಲು ಕಾಯಿಸ್ಕೊಂಡು ನಾನಿದ್ದೆ ಹಲ್ಲು ಕಿರ‍್ಕೊಂಡು ನೀ ಬಂದೆ.
  • ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
  • ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
  • ಹಾಲು ಕುಡಿದ ಮಕ್ಕಳೇ ಬದುಕೊಲ್ಲ; ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೇ ?
  • ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
  • ಹಾಲು ಬಿಟ್ಟವರ ಮನೆಗೆ ಸೀಬಿ ಅಂದಂಗೆ.
  • ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
  • ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
  • ಹಾವಿಗೆ ಹಾಲೆರೆದರೇನು ಫಲ
  • ಹಾವು ಸಾಯಬಾರದು ;ಕೋಲು ಮುರಿಯಬಾರದು
  • ಹಾವು ಸಾಯಬಾರದು , ಕೋಲು ಮುರೀಬಾರದು
  • ಹಾವು ಸಾಯಬಾರದು, ಕೋಲು ಮುರೀಬಾರದು.
  • ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
  • ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
  • ಹಾಸಿಗೆ ಇದ್ದಷ್ಟು ಕಾಲು ಚಾಚು
  • ಹಾಸಿಗೆ ಇದ್ದಷ್ಟು ಕಾಲು ಚಾಚು
  • ಹಾಸಿಗೆ ಇದ್ದಷ್ಟು ಕಾಲು ಚಾಚು
  • ಹಾಳೂರಿಗೆ ಉಳಿದವನೇ ಗೌಡ
  • ಹಾಳೂರಿಗೆ ಉಳಿದವನೇ ಗೌಡ
  • ಹಾಳೂರಿಗೆ ಉಳಿದವನೇ ಗೌಡ
  • ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
  • ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
  • ಹಿಟ್ಟು ಹಳಸಿತ್ತು;ನಾಯಿ ಹಸಿದಿತ್ತು
  • ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
  • ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
  • ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
  • ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
  • ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
  • ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
  • ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
  • ಹಿತ್ತಲ ಗಿಡ ಮದ್ದಲ್ಲ
  • ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
  • ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
  • ಹಿತ್ತಿಲ ಗಿಡ ಮದ್ದಲ್ಲ
  • ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
  • ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
  • ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
  • ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
  • ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
  • ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
  • ಹಿರೀಮಗ ಆಗಬೇಡ,ಹಿತ್ತಿಲ ಕದ ಆಗಬೇಡ
  • ಹಿಂದಲ ಮಾತು ಮರಿ ಮುಂದಲ ಬಾಳು ಅರಿ
  • ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ
  • ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
  • ಹುಚ್ಚಲ್ಲ,ಬೆಪ್ಪಲ್ಲ,ಶಿವಲೀಲೆ
  • ಹುಚ್ಚು ಬಿಟ್ಟ ಹೊರತು ಮದುವೆ ಆಗೋಲ್ಲ; ಮದುವೆ ಆದ ಹೊರತು ಹುಚ್ಚು ಬಿಡಲ್ಲ
  • ಹುಚ್ಚು ಮನಸಿಗೆ ಹತ್ತು ಹಲವು ಮುಖಗಳು
  • ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
  • ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ
  • ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
  • ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
  • ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
  • ಹುಟ್ಟಿದವಗೆ ಸಾವು ತಪ್ಪದು
  • ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
  • ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
  • ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
  • ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
  • ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
  • ಹುಟ್ಟು ಗುಣ ಸುಟ್ಟರೂ ಹೋಗಲ್ಲ
  • ಹುಟ್ಟುವವನ ಅಣ್ಣ ಬೆಳೆಯುವವನ ತಮ್ಮ
  • ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ
  • ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು
  • ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
  • ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
  • ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
  • ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
  • ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
  • ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ? ಆಕಳು ಕಪ್ಪಾದರೂ ಹಾಲು ಕಪ್ಪೆ ?
  • ಹುಣ್ಣಿನ ಮೇಲೆ ಉಪ್ಪು ಸವರಿದಂತೆ
  • ಹುಣ್ಣಿಮೆ ಬರುವನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
  • ಹುಣ್ಣು ಮಾದರೂ ಕಲೆ ಮಾದೀತೇ
  • ಹುತ್ತ ಬಡಿದರೆ ಹಾವು ಸಾಯುವುದೇ
  • ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
  • ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.
  • ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ
  • ಹುಲಿಗೆ ಹುಣ್ಣು ಎದ್ದ ಹಾಗೆ
  • ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
  • ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
  • ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
  • ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
  • ಹೂ-ದವರು ‌ಯಾರು ಅಂದರೆ ಮಾಸಿದ ಸೀರೆಯವರು.
  • ಹೂವ ತರುವ ಮನೆಗೆ ದೇವ ಹುಲ್ಲು ಹೊರುವ
  • ಹೂವಿನ ಜೊತೆ ದಾರ ಮುಡಿಯೇರಿತು
  • ಹೂವಿನಿಂದ ನಾರಿಗೂ ಸ್ವರ್ಗ
  • ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು
  • ಹೆ೦ಗಸಿನ ಬುದ್ಧಿ ಮೊಣಕಾಲ ಕೆಳಗೆ
  • ಹೆಡ್ಡಾಳಾದ್ರೂ ದೊಡ್ಡಾಳು ಮೇಲು
  • ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
  • ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
  • ಹೆಣ್ಣಿಗೆ ಹೆಣ್ಣೇ ವೈರಿ
  • ಹೆಣ್ಣಿದ್ದ ಮನೆಗೆ ಎಡತಾಕಿ ಅಣ್ಣಯ್ಯ ಮಣ್ಣಾಗಿ ಹೋದ
  • ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
  • ಹೆಣ್ಣಿನ ಬಾಳು ಕಣ್ಣೀರಿನ ಗೋಳು
  • ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು
  • ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ
  • ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು
  • ಹೆಣ್ಣು ಚಂದ,ಕಣ್ಣು ಕುರುಡು
  • ಹೆಣ್ಣು ಚಂದ ಕಣ್ಣು ಕುರುಡು ಅಂದಂಗೆ
  • ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
  • ಹೆಣ್ಣು ಜಲ್ಮಕ್ಕೆ ಹೆಜ್ಜೆಗೊಂದು ಮುಳ್ಳು
  • ಹೆಣ್ಣು ತಿರುಗಿ ಕೆಟ್ಟಳು, ಗಂಡು ಕೂತು ಕೆಟ್ಟನು.
  • ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
  • ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
  • ಹೆಣ್ಣು ಹೊನ್ನು ಮಣ್ಣು ಇನ್ನೊಬರ ಕೈ ಸೇರಿದರೆ ಹೋದಂತೆ
  • ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
  • ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
  • ಹೆತ್ತವರಿಗೆ ಹೆಗ್ಗಣ ಮುದ್ದು.
  • ಹೆತ್ತವರು ಹೆಸರಿಕ್ಕ ಬೇಕು
  • ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
  • ಹೆದರುವವರ ಮೇಲೆ ಕಪ್ಪೆ ಎಸೆದಂತೆ
  • ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
  • ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
  • ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
  • ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
  • ಹೆಸರು ಸರಸ್ವತಿ, ಎಡಗೈ ಹೆಬ್ಬೆಟ್ಟಿನ ಸಹಿ.
  • ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ
  • ಹೆಂಗಸರ ಬುದ್ಧಿ ಸೊಂಟದಿಂದ ಕೆಳಗೆ
  • ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
  • ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ
  • ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
  • ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ
  • ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
  • ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
  • ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
  • ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
  • ಹೆಂದತಿಯಿಲ್ಲದ ಮನೆ ದೇವರಿಲ್ಲದ ಗುಡಿ
  • ಹೇಮಗೇಡಿ ನೇಮ ಬೆಳಗಿದ
  • ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
  • ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
  • ಹೇಳೊದು ವೇದ ಹಾಕೊದು ಗಾಳ
  • ಹೇಳೊದು ವೇದ ಹಾಕೊದು ಗಾಳ
  • ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ
  • ಹೇಳೋದು ಶಾಸ್ತ್ರ, ಹಾಕೋದು ಗಾಣ
  • ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
  • ಹೊಕ್ಕು ಬಳಸಿದರೆ ನಂಟು
  • ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
  • ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
  • ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
  • ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
  • ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
  • ಹೊಟ್ಟೆ ತುಂಬಿದ ಮೇಲೆ ಹಿಟ್ಟೂ ಕಲ್ಲು
  • ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
  • ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
  • ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
  • ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
  • ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
  • ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು
  • ಹೊತ್ತಿಗಿಲ್ಲದ ಗಾದೆ, ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ.
  • ಹೊತ್ತಿರುವಾಗಲೇ ಗೊತ್ತು ಸೇರಬೇಕು
  • ಹೊತ್ತು ಕಳೆದರೆ ಮತ್ತೆ ಬಾರದು
  • ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
  • ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು
  • ಹೊರಗೆ ಥಳುಕು, ಒಳಗೆ ಹುಳುಕು
  • ಹೊರಗೆ ಬೆಳಕು ಒಳಗೆ ಕೊಳಕು
  • ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
  • ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
  • ಹೊಲಬನರಿತು ನುಡಿದ ಮಾತು ಫಲ ಪಕ್ವವಾದಂತೆ
  • ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ
  • ಹೊಸ ಡಾಕ್ಟರ್‌ಗಿಂತ ಹಳೇ ಕಾಂಪೌಂಡರ್ ವಾಸಿ
  • ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ
  • ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು
  • ಹೊಳೆಗೆ ಸುರಿದರೂ ಅಳೆದು ಸುರಿ
  • ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
  • ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
  • ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ
  • ಹೊಳೆಯುವುದೆಲ್ಲಾ ಚಿನ್ನವಲ್ಲ.
  • ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
  • ಹೋದ ಪುತ್ತ ಬಂದ ಪುತ್ತ ಪುಟ್ಟನ ಕಾಲಿಗೆ ನೀರಿಲ್ಲ
  • ಹೋದ ಬದುಕಿಗೆ ಹನ್ನೆರಡು ದೇವರು
  • ಹೋದರೆ ಶಾಟ, ಬ೦ದರೆ ಬೆಟ್ಟ.
  • ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
  • ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
  • ಹೋದೆಯಾ ಪಿಶಾಚಿ ಅಂದ್ರೆ ಬಂದೆಯಾ ಗವಾಕ್ಷೀಲಿ
  • ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
  • ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?
  • ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
  • ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
  • ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
  • ಹಂಗು ತೊರೆದ ಮೇಲೆ ಲಿಂಗದ ಪರಿವೆ ಏನು
  • ಹಂಚಿದವರಿಗೆ ಹಲ್ಲು ಬಾಯಿ
  • ಹಂಚು ಕಾಣದ ಕೈ ಕಂಚು ಕಾಣ್ತು
  • ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
  • ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
  • ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು
  • 'ಹೊಸಾ ಎಲೆಕ್ಟ್ರಾನಿಕ್ ಗಾದೆಗಳು!'
  • * ಆಫೀಸಿಂದ ಮನೆಗೆ ಬಂದ್ರೂ ಪ್ರಾಕ್ಸಿ ಸರ್ವರ್ ಹುಡ್ಕೋದು ಬಿಡ್ಲಿಲ್ಲ.
  • * ಎದೆ ಬಗೆದರೆ ಮೂರು ಅಕ್ಷರ ಇಲ್ಲಾ.. ಕಾರ್ಡ್ ಸುಗದ್ರೆ ಮೂರು ಕಾಸಿಲ್ಲ.
  • * ಗೂಗಲ್ ಟಾಕ್ ಗೆ ಬಾ ಪ್ರೈವೇಟಾಗಿ ಮಾತಾಡ್ಬೇಕು ಅಂದ್ರೆ ಆರ್ಕುಟ್ಟಿಗೆ ಬರ್ತೀನಿ ಅಂದಂತೆ.
  • * ಪೆನ್ ಡ್ರೈವ್ ಕಳ್ಳ ಅಂದ್ರೆ ಯೂಎಸ್ ಬಿ ಮುಟ್ಟಿ ನೊಡ್ಕೊಂಡ್ರಂತೆ..(ಮೊನ್ನೆ ಗೆಳೆಯ ಹೇಳಿದ್ದು).
  • * ಬಾಯಲ್ಲಿ ಬಿಳಿ ಹಲ್ಲು(Tooth) ಇಲ್ಲದೆ ಹೋದರೂ ಪರವಾಗಿಲ್ಲ, ಮೊಬೈಲಿಗೆ ನೀಲಿ ಹಲ್ಲು (Blue Tooth) ಇರಲೇಬೇಕು.
  • * ಭ್ರಾಡ್ ಬ್ಯಾಂಡಲ್ಲಿ ಆಗದ್ದು ಡಯಲ್ ಅಪ್ ಅಲ್ಲಿ ಆಗುತ್ತಾ?.
  • * ಸಾಪ್ಟ್ ವೇರ್ ಗೆ ಹೋದ ಮಾನ ಹಾರ್ಡ್ ವೇರ್ ಕೊಟ್ಟರು ಬಾರದು.
  • * ಹಳೆಯ ಪಿಲ್ಮ್ ಹಾಕೋ ಕ್ಯಾಮರಾಕ್ಕೆ ಎಷ್ಟು ಜೀಬಿ ಮೆಮೊರಿ ಕಾರ್ಡ ಇದೆ ಹುಡ್ಕಿದಂತೆ.
  • ಸಿಟಿ ಗಾದೆಗಳು.
  • *"ಉಪಗ್ರಹ ಕೇಂದ್ರದಲ್ಲಿದ್ದರು, ಶನಿಗ್ರಹ ಕಾಟ ತಪ್ಪಲಿಲ್ಲ"
  • *"ಕಳ್ಳ ಮಂತ್ರಿಗೆ ಸುಳ್ಳ ಅಧಿಕಾರಿ ಕಾರ್ಯದರ್ಶಿಯಂತೆ "
  • *"ಕೆಳಸೇತುವೆ ಕಟ್ಟಿಸಿ ಮೇಲ್ಸೇತುವೆ ಬಿಲ್ ತಿಂದ "
  • *"ಕೈಯಲ್ಲಿ ಉರಿಯೋ ಸಿಗರೇಟ್ ಹಿಡ್ಕೊಂಡು ಬೆಂಕಿಕಡ್ಡಿಗೆ ಊರೆಲ್ಲ ಅಲೆದಾಡಿದರಂತೆ"
  • *"ಕಂಟ್ರಿ ಕ್ಲಬ್ಬಿಗೆ ಹೋಗಿ ಕಂಟ್ರಿ ಸಾರಾಯಿ ಕೇಳಿದಂಗಾಯ್ತು"
  • *"ಖರ್ಗೆ ನಗೋಲ್ಲ ಧರ್ಮಸಿಂಗ್ ಅಳೋನಲ್ಲ"
  • *"ಗಂಡನಿಗೆ ನಿಕ್ಕರ್ ಇಲ್ಲದಿದ್ರು ಹೆಂಡತಿಗೆ ಕುಕ್ಕರ್ ಬೇಕು"
  • *"ಚನ್ನಮ್ಮನ ಕೆರೆ ಒಣಗಿಸಿ ಅಚ್ಚುಕಟ್ಟಾಗಿ ಮನೆ ಕಟ್ಟಿಸಿದಂಗಾಯ್ತು"
  • *"ಜೈಲು ಹೋಗು ಅಂತಿದೆ ರಾಜಕಾರಣ ಬಾ ಅಂತಿದೆ"
  • *"ದುಡ್ಕೊಂಡು ತಿನ್ನೋ ಅಂದ್ರೆ ರಾಜಕಾರಣ ಸೇರತಿನಿ ಅಂದನಂತೆ"
  • *"ನೆಟ್ ನಲ್ಲಿ ಸಿಗದಿದದ್ದು ಅಟ್ಟದಲ್ಲಿ ಸಿಗುತ್ತಾ?"
  • *"ನಂದಿನಿಯವರ ನೆಂಟಸ್ತನ, ಹಾಲಿಗೆ ಬಡತನ"
  • *"ಮೊಬೈಲ್ ಕಳ್ಳನನ್ನು ಮಹಾದೇವನು ಹಿಡಿಯಲಾರ"
  • *"ಲೋಕಾಯುಕ್ತ ದಾಳಿನೂ ಆಗಬೇಕು ಜೊತೆಗೆ ಬಡ್ತಿನೂ ಸಿಗಬೇಕು"
  • *"ಲಂಚದಲ್ಲಿ ಬಂದಿದ್ದು ಮಂಚದಲ್ಲಿ ಹೋಯಿತು"
  • *"ಶ್ರೀರಾಮಪುರದಲ್ಲಿ ಇರೋರೆಲ್ಲ ಏಕ ಪತ್ನಿವ್ರಸ್ತರಲ್ಲ"
  • *"ಸಮ್ಮಿಶ್ರ ಸರ್ಕಾರಕ್ಕೆ ವರ್ಷ ಎಲ್ಲರಿಗೂ ಕೊಳ್ಳೆ ಹೊಡೆದಿದ್ದೆ ಹರ್ಷ "
  • *"ಸಿಸೇರಿಯನ್ ಆದವಳಿಗೇನು ಗೊತ್ತು ಹೆತ್ತವಳ ಕಷ್ಟ"
  • *"ಹತ್ತೂರಲ್ಲಿ ವಾಸಿಯಾಗದ ಕಾಯಿಲೆ ಜಕ್ಕೂರಲ್ಲಿ ವಾಸಿಯಾಗುತ್ತಾ?"( ಬೆನ್ ಹಿನ್ ಎಂಬ ಮಾಂತ್ರಿಕನ ಬಗ್ಗೆ)
  • *"ಹೆಂಡ್ತಿ ಮೇಲೆ ಆಸೆ, ಪಕ್ಕದ ಮನೆಯವಳ ಮೇಲೆ ಪ್ರೀತಿ"
  • *"ಹೊಡೆದರೆ ಟೈಸನಗೆ ಹೊಡಿಬೇಕು ಮದುವೆಯಾದರೆ ಐಶ್ವರ್ಯ ರೈಯನ್ನೇ ಮದುವೆಯಾಗಬೇಕು"
  • ಟಿ.ವಿ. ಗಾದೆಗಳು!
  • *ಟಿ.ವಿ. ಚಿಕ್ಕದಾದರೂ, ಫಿಲಂ ಚಿಕ್ಕದೆ?
  • *ಬಿಟ್ಟಿ ಟಿ.ವಿ. ಕೊಟ್ಟರೆ, ಆಂಟೆನಾ ಎಲ್ಲಿ ಅಂದನಂತೆ!
  • *ಪಾಪಿ ಕಲರ್ ಟಿ.ವಿ. ತಂದರೂ, ಫಿಲಂ ಬ್ಲಾಕ್ ಅಂಡ್ ವೈಟ್ ಬರತ್ತಂತೆ
  • *ಹೊಟ್ಟೆಗೆ ಹಿಟ್ಟಿಲ್ಲದಿದ್ರೂ, ಮನೆಗೆ ಕಲರ್ ಟಿ.ವಿ. ಬೇಕಂತೆ
  • ಹೊಸ ಗಾದೆಗಳು...
  • *ಅಪ್ರೈಸಲ್‌ಗೆ ವರುಷ, ರಿಸೈನ್‌ಗೆ ನಿಮಿಷ
  • *ಟೈಪಿಂಗ್ ಬಾರದವನು ಕೀಬೋರ್ಡ್ ಸರಿಯಿಲ್ಲ ಎಂದನಂತೆ!
  • *ಡಿಸ್ಕ್‌ ಸ್ಪೇಸ್ ಇದ್ದಷ್ಟೇ ಫೈಲ್ ಸೇವ್ ಮಾಡು
  • *ಪಿಸಿಗೆ ಒಂದು ಕಾಲ ಲ್ಯಾಪ್‌ಟಾಪ್‌ಗೆ ಒಂದು ಕಾಲ
  • *ಫ್ಲಾಪಿ ಕದ್ದರೂ ಕಳ್ಳ, ಡಿಸ್ಕ್ ಕದ್ದರೂ ಕಳ್ಳ

  • ದಯವಿಟ್ಟು ವಿಷಯ-ಪೋಣಿಕೆಗೆ ಅನುಗುಣವಾಗಿ ಗಾದೆಗಳನ್ನು ಪಟ್ಟಿ ಮಾಡಿರಿ...

  • Please try to list the kannada proverbs(kannada gadegalu) as per the Index (ವಿಷಯ-ಪೋಣಿಕೆ)...

  • ವಿಷಯ-ಪೋಣಿಕೆಗೆ ಹಿಂತಿರುಗಿ/back to index

  • *೨೦ ಕ್ಕೆ ಯಜಮಾನಿಕೆ ಸಿಕ್ಕಬಾರದು ೭೦ ಕ್ಕೆ ಕೆಮ್ಮ ಬರಬಾರದು.
  • *ಅಲ್ಪನಿಗೆ ಐಶ್ವರ್ಯ ಬಂದರೆ ಅರ್ದರಾತ್ರಿಲೀ ಕೊಡೆ ಹಿಡಿದ ಹಾಗೆ
  • *ಅಹಂಕಾರಕ್ಕೆ ಉದಾಸೀನವೇ ಮದ್ದು
  • *ಇಂಗು,ತೆಂಗು ಇದ್ದರೆ ಮಂಗವು ಅಡುಗೆ ಮಾಡುತ್ತೆ
  • *ಉಪದೇಶಕ್ಕಿಂತ ಉದಾಹರಣೆ ಆಗಿರುವುದು ಉತ್ತಮ
  • *ಊಟಕ್ಕೆ ಉಪ್ಪಿನಕಾಯಿ ಇರಬೇಕೆ ಹೊರತು ,ಉಪ್ಪಿನಕಾಯಿಯೇ ಊಟ ಆಗಬಾರದು
  • *ಕಷ್ಟಕ್ಕೆ ಕರೆಯಬೇಡ...ಊಟಕ್ಕೆ ಮರೆಯಬೇಡ
  • *ಕಳಿತರೆ ಬಾಳೆ ರುಚಿ.ಹುಳಿತರೆ ಜೇನು ರುಚಿ.
  • *ಗುಡಿಸಿದ ಮೇಲೆ ಕಸ ಇರಬಾರದು . .ಬಡಿಸಿದ ಮೇಲೆ ಹಸಿವಿರಬಾರದು
  • *ತಾಯಿ ನೋಡಿ ಮಗಳ ತರಬೇಕು. ಹಾಲು ನೋಡಿ ಎಮ್ಮೆ ತರಬೇಕು.
  • *ತೋಡಿದ ಬಾವಿಗೆ ನೀರೇ ಸಾಕ್ಷಿ ...ಮಾಡಿದ ತಪ್ಪಿಗೆ ಮನವೇ ಸಾಕ್ಷಿ
  • *ಬುಟ್ಟಿಯಷ್ಟು ಬುದ್ಧಿಗಿಂತ ಮುಷ್ಠಿಯಷ್ಟು ತಾಳ್ಮೆ ಲೇಸು
  • *ಮಗಳನ್ನು ಹೊಗಳಿ ಬೆಳಸಬೇಕು.ಮಗನನ್ನು ಶಿಸ್ತಿನಲ್ಲಿ ಬೆಳಸಬೇಕು
  • *ಮನೆ ದೀಪ ಅಂತ ಮುತ್ತಿಟ್ಟರೆ ಸುಡದೇ ಇರುತ್ತಾ
  • *ಮರ ಹುಟ್ಟಿದಲ್ಲೇ ಮರಣ. ಮನುಷ್ಯ ಹೋದಲ್ಲೇ ಮರಣ
  • *ಮಾಡಿದ್ದುಣ್ಣೋ ಮಹರಾಯ
  • *ಸಾರು ಉಕ್ಕಬಾರದು ಹೆಣ್ಣು ಸೊಕ್ಕಬಾರದು.
  • *ಸುರಿದು ಊಟ ಮಾಡು ಗೊರೆದು ನಿದ್ದೆ ಮಾಡು
  • *ಹಣ ಇದ್ದವನ ಕೈ ಹಿಡಿದರೂ ಋಣ ಇದ್ದಷ್ಟೇ ಸಿಕ್ಕುವುದು.
  • *ಹಲಸಿನ ಹಣ್ಣು ಬೇಕು ಅಂಟು ಬೇಡ ಅಂದ್ರೆ ಹೇಗೆ
  • *ಹೆಣ್ಣಿನ ತಂದೆ ಹಣ್ಣಾಗ್ತಾನೆ .ಗಂಡಿನ ತಂದೆ ಗುಂಡಾಗ್ತಾನೆ
  • *ಹೆಣ್ಣು ಪಂಜರ ಜೀವಿ. ಗಂಡು ಅಂಬರ ಜೀವಿ

  • ವಿಷಯ-ಪೋಣಿಕೆಗೆ ಹಿಂತಿರುಗಿ
  • ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
  • ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ
  • ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು
  • ಅಂದು ಬಾ ಅಂದ್ರೆ ಮಿಂದು ಬಂದ
  • ಅಂಬಲಿಗೆ ಗತಿ‌ಇಲ್ಲದವ ಕಟ್ಟಾಣಿ ರಂಬೆಯ ಬಯಸಿದ
  • ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
  • ಅಕ್ಕ ಬರಬೇಕು ಅಕ್ಕಿ ಮುಗೀಬಾರದು
  • ಅಕ್ಕನ ಹಗೆ ಬಾವನ ನೆಂಟು
  • ಅಕ್ಕರ ಕಲ್ತು ತನ್ನ ಒಕ್ಕಲನ್ನೇ ತಿನ್ನೊದ್ ಕಲ್ತ
  • ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
  • ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ
  • ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
  • ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
  • ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
  • ಅಕ್ಕಿಲ್ಲ ಬ್ಯಾಳಿಲ್ಲ ಅಕ್ಕನ್ನ ಕರತರಬೇಕು
  • ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
  • ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
  • ಅಜ್ಜ ಮದುವೆ ಅಂದ್ರೆ ನನಗೋ ಅಂದ
  • ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
  • ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
  • ಅಟ್ಟ ಹತ್ತಲು ಹೋದವ ಏಣಿಯ ಮೋಹಕ್ಕೆ ಬಿದ್ದಂತೆ
  • ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
  • ಅಡವಿಯ ದೊಣ್ಣೆ ಪರದೇಸಿಯ ತಲೆ
  • ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ
  • ಅಣ್ಣಿಗೇರ‍್ಯಾಗ ಎಣ್ಣೆ ಮೊಣಕಾಲ ಮಟ್ಟ
  • ಅತಿ ಆಸೆ ಗತಿಗೇಡು
  • ಅತಿ ಸ್ನೇಹ ಗತಿ ಕೇಡು
  • ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
  • ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ
  • ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು
  • ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
  • ಅಧರಕ್ಕೆ ಕಹಿ ಉದರಕ್ಕೆ ಸಿಹಿ
  • ಅನುಭವಿಗೆ ಬೇರೆ ಮತವಿಲ್ಲ
  • ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
  • ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
  • ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
  • ಅಪ್ಪ ಗುಡಿ ಕಟ್ಟಿದರೆ ಮಗ ಕಳಸ ಇಟ್ಟ
  • ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
  • ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ
  • ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ
  • ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
  • ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
  • ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
  • ಅಯ್ಯೋ ಅಂದರೆ ಅರೆ ವಯಸ್ಸು
  • ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
  • ಅರಗಿನಂತೆ ತಾಯಿ, ಮರದಂತೆ ಮಕ್ಕಳು
  • ಅರಣೆ (= ಹಾವು ರಾಣಿ) ಕಡಿದರೆ ಭರಣಿ (=ಪಿಂಗಾಣಿ ಮಡಿಕೆ) ಮದ್ದು ಸಾಲದು
  • ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
  • ಅರವಲ್ಲದ್ದು (ಧರ್ಮವಲ್ಲದ್ದು) ಮಾಡಿದರೂ ತರವಲ್ಲದ್ದು ಮಾಡಬಾರದು
  • ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
  • ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
  • ಅರಸು ಒಲಿದರೆ ಸಿರಿ ದೆಸೆಯಾಯ್ತು
  • ಅರಿತು ಮಾಡದ ದಾನ ತೆರೆದು ನೋಡದ ಕಣ್ಣಂತೆ
  • ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ
  • ಅರಿತೂ ಮಾಡಿದ ಪಾಪ ವಜ್ರಲೇಪ
  • ಅರಿವಿನ ಹಾದಿ ಬೇರೆ
  • ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ
  • ಅರೆಪಾವಿನವರ ಅಬ್ಬರ ಬಹಳ
  • ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
  • ಅಲಗಿನ ಗಾಯಕ್ಕಿಂತ ಗಲಗಿನ ಗಾಯ ಹೆಚ್ಚು
  • ಅಲಾ ಬಲಾ ಪಾಪಿ ತಲೀ ಮ್ಯಾಲೆ
  • ಅಲ್ಪರ ಸಂಗ ಅಭಿಮಾನ ಭಂಗ
  • ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
  • ಅವರವರ ತಲೆಗೆ ಅವರವರದೇ ಕೈ
  • ಅಳಿವುದೇ ಕಾಯ ಉಳಿವುದೇ ಕೀರ್ತಿ
  • ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
  • ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
  • ಆಗುವ (ಅಡುವ) ವರೆಗಿದ್ದು ಆರುವ ವರೆಗೆ ಇರಲಾರರೇ
  • ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
  • ಆಗೋದೆಲ್ಲಾ ಒಳ್ಳೇದಕ್ಕೆ
  • ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
  • ಆಟ ಕೆಟ್ಟರೆ ದೀವಟಿಗೆಯವನ ಸುತ್ತ
  • ಆಡಿ ಉಂಡ ಮೈ ಅಟ್ಟು ಉಂಡೀತೇ?
  • ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
  • ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
  • ಆಡೋಣ ಬಾ ಕೆಡಿಸೋಣ ಬಾ
  • ಆಡೋದು ಮಡಿ ಉಂಬೋದು ಮೈಲಿಗೆ
  • ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
  • ಆನೆ ಬರುವುದಕ್ಕು ಮುನ್ನ ಗಂಟೆ ಸದ್ದು
  • ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
  • ಆನೆ ಹೋದದ್ದು ದಾರಿ ಹಾವು ಹರಿದದ್ದು ಅಡ್ಡದಾರಿ
  • ಆನೆಗೂ ಅಡಿ ತಪ್ಪೀತು
  • ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ
  • ಆನೆಯಂಥದೂ ಮುಗ್ಗರಿಸ್ತದೆ
  • ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
  • ಆಪತ್ತಿಗಾದವನೇ ನೇಂಟ
  • ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು
  • ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
  • ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
  • ಆಲಸ್ಯಂ ಅಮೃತಂ ವಿಷಂ
  • ಆವು ಕಪ್ಪಾದ್ರೆ ಹಾಲು ಕಪ್ಪೇನು
  • ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
  • ಆಸೆ ಮಾತು ಕೊಟ್ಟು ಬಾಸೆ ತಪ್ಪಬಾರ‍್ದು
  • ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
  • ಆಸೆಗೆ ಕೊನೆಯಿಲ್ಲ
  • ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
  • ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು
  • ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
  • ಆಡೋಕಾಗಲ್ಲ,ಅನುಭವಿಸಕ್ಕಾಗಲ್ಲ
  • ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
  • ಆಡು ಮುಟ್ಟದ ಸೊಪ್ಪಿಲ್ಲ
  • ಆಳಾಗಬಲ್ಲವನು ಅರಸಾಗಬಲ್ಲ
  • ಆಟಕ್ಕುಂಟು,ಲೆಕ್ಕಕ್ಕಿಲ್ಲ
  • ಆದ ಕೆಲಸಕ್ಕೆ ಅತ್ತೆಗಳು ಬಂದಂತೆ
  • ಆಗೊದೆಲ್ಲ ವೊಳ್ಳೆದಕ್ಕೆ
  • ಆಕಾಶ ನೋಡೊದಕ್ಕೆ ನೂಕುನುಗ್ಗಲೆ ?
  • ಆಕಾಶಕ್ಕೆ ಏಣಿ ಹಾಕಿದ ಹಾಗೆ
  • ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
  • ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ,ಆತ ಆಕೇನ ಬಿಟ್ಟು ಆರು ವರ್ಷ ಆಗಿತ್ತಂತೆ.
  • ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
  • ಆಪತ್ತಿಗಾದವನೇ ನೆಂಟ
  • ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
  • ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ
  • ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ
  • ಆರು ದೋಸೆ ಕೊಟ್ರೆ ಅತ್ತೆ ಕಡೆ, ಮೂರು ದೋಸೆ ಕೊಟ್ರೆ ಸೊಸೆ ಕಡೆ
  • ಆಸೆಯೇ ದು:ಖಕ್ಕೆ ಮೂಲ
  • ಆತುರಗಾರನಿಗೆ ಬುದ್ಧಿ ಮಟ್ಟ
  • ಆತುರಕ್ಕೆ ಅಜ್ಜಿ ಮೈನೆರೆದಳು
  • ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ
  • ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ನ !
  • ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
  • ಅಡುಗೆ ಮಾಡಿದವಳಿಗಿಂತ ಬಡಿಸಿದವಳೇ ಮೇಲು
  • ಅಳೋ ... ಮೇಲೆ ಗಳು ಬಿತ್ತು
  • ಅಳಿದೂರಿಗೆ ಉಳಿದವನೇ ಗೌಡ
  • ಅಳಿಲ ಸೇವೆ, ಮಳಲ ಭಕ್ತಿ
  • ಅಳಿಯ ಅಲ್ಲ,ಮಗಳ ಗಂಡ
  • ಅಳಿಯ ಮನೆ ತೊಳಿಯ
  • ಅಳಿಯನ ಕುರುಡು ಬೆಳಗಾದರೆ ಗೊತ್ತಾಗತ್ತೆ
  • ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ
  • ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
  • ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ
  • ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
  • ಅಂಕೆಯಲ್ಲಿದ್ದ ಹೆಣ್ಣು, ಮಜ್ಜಿಗೆಯಲ್ಲಿದ್ದ ಬೆಣ್ಣೆ ಕೆಡೊಲ್ಲ
  • ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ
  • ಅಟ್ಟ ಮೇಲೆ ಒಲೆ ಉರಿಯಿತು, ಕೆಟ್ಟ ಮೇಲೆ ಬುದ್ಧಿ ಬಂತು
  • ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತಗೊಂಡು ಹೇರಿದರಂತೆ
  • ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು.
  • ಅದ್ನೇ ಉಂಡೇನ್ ಅತ್ತೆಮ್ನೋರೇ,ಕದ ತೆಗೀರಿ ಮಾವ್ನೋರೇ ಅಂದ್ರಂತೆ
  • ಅಗ್ಗದ ಆಸೆಗೆ ಗೊಬ್ಬರ ತಗೊಂಡರು
  • ಅಗ್ಗದ ಮಾಲು;ಮುಗ್ಗಿದ ಜೋಳ
  • ಅಹಂಕಾರಕ್ಕೆ ಉದಾಸೀನವೇ ಮಟ್ಟು.
  • ಐದು ಬೆರಳೂ ಒಂದೇ ಸಮ ಇರೋಲ್ಲ
  • ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ
  • ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
  • ಅಜ್ಜಿಗೆ ಅರಿವೆ ಚಿಂತೆ ಮೊಮ್ಮಗಳಿಗೆ ಮಿಂ..ನ ಚಿಂತೆ
  • ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೆ ?
  • ಅಕ್ಕಸಾಲಿ ಅಕ್ಕನ ಚಿನ್ನಾನೂ ಬಿಡ
  • ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ
  • ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ.
  • ಅಲ್ಪ ವಿದ್ಯಾ ಮಹಾಗರ್ವಿ
  • ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದನಂತೆ
  • ಅಲ್ಪರ ಸಂಗ ಅಭಿಮಾನ ಭಂಗ
  • ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
  • ಅನ್ನ ಹಾಕಿದ ಮನೆಗೆ ಕನ್ನ ಹಕಬೇಡ
  • ಅನುಕೂಲ ಸಿಂಧು; ಅಭಾವ ವೈರಾಗ್ಯ
  • ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
  • ಅಪ್ಪನ್ನೇ ಅಪ್ಪ ಅನ್ನದೋನು,ಚಿಕ್ಕಪ್ಪನ್ನ ಅಪ್ಪಾ ಅಂತ ಕರೀತಾನಾ?
  • ಅರವತ್ತಕ್ಕೆ ಅರಳು ಮರಳು
  • ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ
  • ಅತಿ ಆಸೆ ಗತಿ ಕೇಡು
  • ಅತಿ ಸ್ನೇಹ ಗತಿ ಕೆಡಿಸಿತು
  • ಅತಿಯಾದರೆ ಅಮೃತವೂ ವಿಷ
  • ಅತ್ತೂ ಕರೆದೂ ಔತಣ ಹೇಳಿಸಿಕೊಂಡರು
  • ಅತ್ತೂ ಕರೆದೂ ಔತಣ ಮಾಡಿಸಿಕೊಂಡಂತೆ
  • ಅತ್ತ ದರಿ; ಇತ್ತ ಪುಲಿ
  • ಅತ್ತೆ ಆಸ್ತೀನ ಅಳಿಯ ದಾನ ಮಾಡಿದ
  • ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ
  • ಅತ್ತೆ ಒಡೆದ ಪಾತ್ರೆಗೆ ಬೆಲೆಯಿಲ್ಲ
  • ಅತ್ತೆಗೊಂದು ಕಾಲ; ಸೊಸೆಗೊಂದು ಕಾಲ
  • ಅತ್ತು ಹೆದರಿಸೋನೊಬ್ಬ ;ಹೇ.. ಹೆದರಿಸೋನೊಬ್ಬ
  • ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ
  • ಅಯ್ಯೋ ಪಾಪ ಅಂದ್ರೆ ಅರ್ಧ ಆಯುಸ್ಸು
  • ಆನೆಗೆ ಚಡ್ಡಿ ಹೊಲಿಸಿದ ಹಾಗೆ
  • ಆಡೋದು ಮಡಿ ಉಂಬೋದು ಮೈಲಿಗೆ
  • ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
  • ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
  • ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
  • ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
  • ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
  • ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
  • ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
  • ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
  • ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
  • ಆಲಸ್ಯಂ ಅಮೃತಂ ವಿಷಂ
  • ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
  • ಆನೆಯಂಥದೂ ಮುಗ್ಗರಿಸ್ತದೆ
  • ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
  • ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
  • ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
  • ಆಸೆಗೆ ಕೊನೆಯಿಲ್ಲ
  • ಆವು ಕಪ್ಪಾದ್ರೆ ಹಾಲು ಕಪ್ಪೇನು
  • ಅಡವಿಯ ದೊಣ್ಣೆ ಪರದೇಸಿಯ ತಲೆ
  • ಅಡಿಗೆ ಬಿದ್ಫರೂ ಮೀಸೆ ಮೇಲೆ
  • ಅಳಿವುದೇ ಕಾಯ ಉಳಿವುದೇ ಕೀರ್ತಿ
  • ಅಂದು ಬಾ ಅಂದ್ರೆ ಮಿಂದು ಬಂದ
  • ಅಂಗೈ ಹುಣ್ಣಿಗೆ ಕನ್ನಡಿ ಯಾಕೆ
  • ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
  • ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
  • ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
  • ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
  • ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
  • ಅಜ್ಜ! ಮದುವೆ ಅಂದ್ರೆ ನನಗೋ ಅಂದ
  • ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
  • ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
  • ಅಕ್ಕ ಬರಬೇಕು ಅಕ್ಕಿ ಮುಗೀಬಾರದು
  • ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
  • ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
  • ಅಕ್ಕನ ಹಗೆ ಬಾವನ ನೆಂಟು
  • ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
  • ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
  • ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
  • ಅಲ್ಪರ ಸಂಗ ಅಭಿಮಾನ ಭಂಗ
  • ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
  • ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
  • ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
  • ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
  • ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
  • ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
  • ಅರಗಿನಂತೆ ತಾಯಿ, ಮರದಂತೆ ಮಕ್ಕಳು
  • ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
  • ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
  • ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
  • ಅರೆಪಾವಿನವರ ಅಬ್ಬರ ಬಹಳ
  • ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
  • ಅತಿ ಆಸೆ ಗತಿಗೇಡು
  • ಅತಿ ಸ್ನೇಹ ಗತಿ ಕೇಡು
  • ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
  • ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
  • ಅವರವರ ತಲೆಗೆ ಅವರವರದೇ ಕೈ
  • ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
  • (ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು.
  • ಅಳೀಮಯ್ಯ ನಾಚ್ಕಂಡ್ ನಾಚ್ಕಂಡು ನಾಲ್ಕು ಮುದ್ದೆ ತಿಂದ್ನಂತೆ, ಸೇರಲ್ಲ ಸೇರಲ್ಲ ಅಂತ ಸೇರಕ್ಕಿ ತಿಂದ್ನಂತೆ.


ವಿಷಯ-ಪೋಣಿಕೆಗೆ ಹಿಂತಿರುಗಿ

  • ಇಂಬರಿತು ಕೊಡುವಳೆ ರಂಭೆ
  • ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ
  • ಇಕ್ಕಲಾರದ ಕೈ ಎಂಜಲು
  • ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
  • ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
  • ಇಚ್ಚೆಯ ಅರಿತು ಕೊಟ್ಟ ನುಚ್ಚೊಂದು ಮಾಣಿಕ್ಯ
  • ಇಟ್ಟ ವಿಭೂತಿ ಪಟ್ಟದಂತೆ ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
  • ಇಟ್ಟ ಶಾಪ ಕೊಟ್ಟವನಿಗೆ ತಟ್ಟೀತು
  • ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
  • ಇಡೀ ಮುಳುಗಿದರೂ ಮೂಗು ಮೇಲೆ
  • ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
  • ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
  • ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು
  • ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ
  • ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
  • ಇದ್ದದ್ದು ಹೋಯಿತು ಮದ್ದಿನ ಗುಣದಿಂದ
  • ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
  • ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
  • ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
  • ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು
  • ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
  • ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)
  • ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
  • ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
  • ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
  • ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
  • ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
  • ಇಲ್ಲು ಪೋಗಂಡ ಅಲ್ಲು ಪೋಗಂಡ
  • ಈರಣ್ಣನ ಮುಂದೆ ಬಸ್ಸಣ್ಣ ಕುಂತಂತೆ
  • ಇಡಿಯ ಮುಳುಗಿದವನಿಗೆ ಚಳಿಯೇನು?ಮಳೆಯೇನು?
  • ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ,ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು
  • ಇಬ್ಬರ ಜಗಳ ಮೂರನೆಯವನಿಗೆ ಲಾಭ
  • ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
  • ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
  • ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ
  • ಇಲಿ ಬಂತು ಎಂದರೆ ಹುಲಿ ಬಂತು ಎಂದರು
  • ಇರಲಾರದೆ ಇರುವೆ ಬಿಟ್ಟುಕೊಂಡು ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ
  • ಇರುಳು ಕಂಡ ಭಾವೀಲಿ ಹಗಲು ಬಿದ್ದರು
  • ಇರುವೆಗೆ ಇರುವೆ ಮೈ ಭಾರ,ಆನೆಗೆ ಆನೆ ಮೈ ಭಾರ
  • ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
  • ಇಡೀ ಮುಳುಗಿದರೂ ಮೂಗು ಮೇಲೆ
  • ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
  • ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
  • ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
  • ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
  • ಇದ್ದದ್ದು ಹೋಯಿತು ಮದ್ದಿನ ಗುಣದಿಂದ
  • ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
  • ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
  • ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
  • ಇಕ್ಕಲಾರದ ಕೈ ಎಂಜಲು
  • ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
  • ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
  • ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
  • ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
  • ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
  • ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
  • ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
  • ಈಸಿ ನೋಡು , ಇದ್ದು ಜೈಸಿ ನೋಡು


ವಿಷಯ-ಪೋಣಿಕೆಗೆ ಹಿಂತಿರುಗಿ

  • ಉಂಡ ಮನೆ ಜಂತೆ ಎಣಿಸಬಾರದು
  • ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
  • ಉಂಬಾಗ ಉಡುವಾಗ ಊರೆಲ್ಲ ನೆಂಟರು
  • ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು
  • ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
  • ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
  • ಉಟ್ಟು ಉಡಲಾರ ಕೊಟ್ಟು ಸೈರಿಸಲಾರ
  • ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
  • ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
  • ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
  • ಉತ್ತಮನು ಎತ್ತ ಹೋದರೂ ಶುಭವೇ
  • ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
  • ಉದ್ಯೋಗವೇ ಗಂಡಸಿಗೆ ಲಕ್ಷಣ
  • ಉಪಕಾರಕ್ಕೋಗಿ ಉಪದ್ರ ಬಂತು
  • ಉಪಾಸ ಇದ್ರೂ ಉಪದ್ರ ಇರಬಾರ‍್ದು
  • ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
  • ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು
  • ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ
  • ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
  • ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
  • ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ
  • ಊರಿಗಾಗದ ಗೌಡ, ಮೇಲೆರಗುವ ಗಿಡುಗ
  • ಊರಿಗೆ ದಾರೀಯ ಯಾರು ತೋರಿದರೇನು
  • ಊರು ದೂರಾಯಿತು ಕಾಡು ಹತ್ತರಾಯಿತು
  • ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
  • ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
  • ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ
  • ಊಟ ತನ್ನಿಚ್ಚೆ,ನೋಟ ಪರರಿಚ್ಚೆ
  • ಊಟಕ್ಕಿಲ್ಲದ ಉಪ್ಪಿನಕಾಯಿ ..ಕ್ಕೆ ಸಮಾನ
  • ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ
  • ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
  • ಊರಿಗೆ ಬಂದವಳು ನೀರಿಗೆ ಬಾರದೇ ಇರುವಳೇ?
  • ಊರಿಗೆ ಉಪಕಾರಿ, ಮನೆಗೆ ಮಾರಿ
  • ಊರಿಗೆಲ್ಲಾ ಒಬ್ಬಳೇ ಪದ್ಮಾವತಿ
  • ಊರಿಗೊಂದು ದಾರಿಯಾದ್ರೆ,ಎಡವಟ್ಟಂಗೆ ಅವನದ್ದೇ ದಾರಿ
  • ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?
  • ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ
  • ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
  • ಊರು ಸುಟ್ಟರೂ ಹನುಮಂತರಾಯ ಹೊರಗೆ
  • ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
  • ಉಂಡೂ ಹೋದ; ಕೊಂಡೂ ಹೋದ
  • ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ
  • ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ; ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
  • ಉಣ್ಣು ಬಾ ಅಂದ್ರೆ,ಇರಿ ಬಾ ಅಂದ್ರಂತೆ
  • ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
  • ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
  • ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
  • ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು
  • ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ
  • ಉಪ್ಪು ತಿಂದವನು ನೀರು ಕುಡಿಯಲೇ ಬೇಕು
  • ಉರಿಯೋ ಬೆಂಕಿಗೆ ತುಪ್ಪ ಸುರಿದ ಹಾಗೆ
  • ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
  • ಉಸ್ ಎಂದರೆ ಉಸಳಿ ಬೇಡಿದ್ದನಂತೆ
  • ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
  • ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
  • ಉಂಡ ಮನೆ ಜಂತೆ ಎಣಿಸಬಾರದು
  • ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
  • ಉಂಬಾಗ ಉಡುವಾಗ ಊರೆಲ್ಲ ನೆಂಟರು
  • ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
  • ಉದ್ಯೋಗವೇ ಗಂಡಸಿಗೆ ಲಕ್ಷಣ
  • ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
  • ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
  • ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
  • ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
  • ಉತ್ತಮನು ಎತ್ತ ಹೋದರೂ ಶುಭವೇ
  • ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
  • ಊರಿಗಾಗದ ಗೌಡ, ಮೇಲೆರಗುವ ಗಿಡುಗ
  • ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
  • ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
  • ಊರು ದೂರಾಯಿತು ಕಾಡು ಹತ್ತರಾಯಿತು


ವಿಷಯ-ಪೋಣಿಕೆಗೆ ಹಿಂತಿರುಗಿ

  • ಎಂಜಲ ತಿಂದರೂ ಅಂಜದೆ ತಿನ್ನು
  • ಎಂಟು ವರ್ಷಕ್ಕೆ ನನ್ನ ಮಗ ದಂಟಾದ
  • ಎಂಟು ಹೊನ್ನು ಘನವಾದ ನಂಟು ತಂತು
  • ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
  • ಎಟ್ಟ್ (ಹಟಮಾರಿ) ಗಂಡಗೆ ಖೊಟ್ಟಿ ಹೆಂಡತಿ
  • ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
  • ಎಡವಿದ ಕಾಲು ಎಡವುದು ಹೆಚ್ಚು
  • ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ
  • ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
  • ಎತ್ತು ಮಾರಿದವಗೆ ಹಗ್ಗದ ಆಸೆಯೇ
  • ಎದ್ದವನು ಗೆದ್ದಾನು
  • ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
  • ಎರಡೂ ಕೈ ತಟ್ಟಿದರೆ ಸದ್ದು
  • ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು ಮೋರೆ
  • ಎಲ್ಲಮ್ಮನ ಗುಡ್ಡದಾಗ ಮುಲ್ಲಾಂದೇನು
  • ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
  • ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
  • ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
  • ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ
  • ಎಲ್ಲಾ ಬಣ್ಣ ಮಸಿ ನುಂಗಿತು
  • ಎಲ್ಲಾ ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ
  • ಏನಾದರೇನು ತಾನು ತಾನಾಗದ ವರೆಗೆ
  • ಏನೂ ಇಲ್ಲದವಗೆ ಭಯವಿಲ್ಲ
  • ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು
  • ಏರಿದವ ಇಳಿದಾನು
  • ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
  • ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
  • ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
  • ಎದ್ದೋಗೋ ಮಾತು ಬಿದ್ದೋಗಲಿ
  • ಎದ್ದರೆ ಆಳಲ್ಲ
  • ಎದೆ ಸೀಳಿದ್ರೆ ಮೂರಕ್ಷರಾನೂ ಇಲ್ಲ
  • ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ
  • ಎಲ್ಲಾ ಜಾಣ,ತುಸಾ ಕೋಣ.
  • ಎಲ್ಲಾ ಜಾಣ; ತುಸ ಕೋಣ
  • ಎಲ್ಲಾರ ಮನೇ ದೋಸೇನೂ ತೂತು
  • ಎಲ್ಲರ ಮನೆ ದೋಸೇನೂ ತೂತೇ.
  • ಎಲ್ಲರ ಮನೆಯ ದೋಸೆಯೂ ತೂತೆ !
  • ಎರಡೂ ಕೈ ಸೇರಿದರೆ ಚಪ್ಪಾಳೆ
  • ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
  • ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಎಳೆದರಂತೆ
  • ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
  • ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ
  • ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
  • ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
  • ಎಡವಿದ ಕಾಲು ಎಡವುದು ಹೆಚ್ಚು
  • ಎಂಟು ವರ್ಷಕ್ಕೆ ನನ್ನ ಮಗ ದಂಟಾದ
  • ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
  • ಎಲ್ಲಾ ಬಣ್ಣ ಮಸಿ ನುಂಗಿತು
  • ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
  • ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
  • ಎರಡೂ ಕೈ ತಟ್ಟಿದರೆ ಸದ್ದು
  • ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
  • ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
  • ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
  • ಏತಿ ಅಂದರೆ ಪ್ರೇತಿ
  • ಏತಿ ಅಂದರೆ ಪ್ರೇತಿ ಅಂದಂತೆ
  • ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
  • ಏರಿದವ ಇಳಿದಾನು


ವಿಷಯ-ಪೋಣಿಕೆಗೆ ಹಿಂತಿರುಗಿ

  • ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
  • ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
  • ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
  • ಒಂದು ದುಡ್ಡು ಕೊಡುವೆ ಹಾಡು ದಾಸಯ್ಯ ಎರಡು ದುಡ್ಡು ಕೊಡುವೆ ಬಿಡು ದಾಸಯ್ಯ
  • ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
  • ಒಂದೊಂದು ಕಾಲಕ್ಕೆ ಒಂದೊಂದು ಪರಿ
  • ಒಂದೊಂದು ಹನಿ ಬಿದ್ದು ನಿಂತಲ್ಲಿ ಮಡುವಾಯ್ತು
  • ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
  • ಒಡೆದ ಹಾಲು ಹೆಪ್ಪಿಗೆ ಬಂದೀತೇ
  • ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ
  • ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ
  • ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
  • ಒಬ್ಬನೇ ಉಂಡ ಊಟ ಹಬ್ಬವಲ್ಲ; ಒಬ್ಬನೇ ಸವಿದ ರುಚಿ, ರುಚಿಯಲ್ಲ
  • ಒಲುಮೆಗೆ ನೋಟಬೇಟವೇ ಮೊದಲು
  • ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
  • ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು
  • ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು
  • ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ
  • ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ
  • ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
  • ಓದಿ ಓದಿ ಮರುಳಾದ ಕೂಚು ಭಟ್ಟ
  • ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
  • ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
  • ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
  • ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ
  • ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು
  • ಓದುವಾಗ ಓದು; ಆಡುವಾಗ ಆಡು
  • ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
  • ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
  • ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
  • ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ
  • ಒಂದು ಹೊತ್ತು ತಿನ್ನೋವ್ನು ಯೋಗಿ, ಎರಡು ಹೊತ್ತು ತಿನ್ನೋವ್ನು ಭೋಗಿ, ಮೂರು ಹೊತ್ತು ತಿನ್ನೋವ್ನು ರೋಗಿ, ನಾಕು ಹೊತ್ತು ತಿನ್ನೋವ್ನ ಎತ್ಕೊಂಡು ಹೋಗಿ
  • ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ
  • ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
  • ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ
  • ಒಲಿದರೆ ನಾರಿ ಮುನಿದರೆ ಮಾರಿ
  • ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
  • ಒನಕೆ ಮುಂಡು ಚಿಗುರಿದಂತೆ
  • ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
  • ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
  • ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
  • ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
  • ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
  • ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
  • ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
  • ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
  • ಓದಿ ಓದಿ ಮರುಳಾದ ಕೂಚು ಭಟ್ಟ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಕಂಗಾಲನ ಮನೀಗೆ ಕಂಗಾಲ ಹೋದರೆ ಗಂಗಾಳ ನೆಕ್ಕು ಅಂತಂತೆ
  • ಕಂಗಾಲಾದರೂ ಹಂಗಾಳಾಗಬಾರದು
  • ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
  • ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು
  • ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು
  • ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
  • ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
  • ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
  • ಕಡಲಲ್ಲಿ ಪುಟಿದ ತೆರೆ ಕಡಲಲ್ಲೇ ಕರಗಿ ಹೋಯ್ತು
  • ಕಡು ಕೋಪ ಬಂದಾಗ ತಡಕೊಂಡವನೇ ಜಾಣ
  • ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
  • ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
  • ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
  • ಕಣ್ಣೆರಡಾದರೂ ನೋಟ ಒಂದೇ
  • ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
  • ಕತ್ತಿ ವೈರಿ ಕೈಯಲ್ ಕೊಟ್ಟು ಬೆನ್ನ ಮಾಡಿ ನಿಂತನಂತೆ
  • ಕನಿಗೇಡಿಗೆ(ಸ್ವಾರ್ಥಿಗೆ) ಗತಿ ಇಲ್ಲ
  • ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
  • ಕಬ್ಬು ಡೊಂಕಾದ್ರೆ ಸವಿ ಡೊಂಕೇ
  • ಕಯ್ಯಾರೆ ಮಾಡುವ ಧರ್ಮ ಲೇಸು
  • ಕರಣಗಳ ತಡೆದು ನಿಲಬಾರದು
  • ಕರುಬಿದವರ ಮನೆ ಬರಿಮನೆ
  • ಕರ್ಮ ಕಳೆಯುವವರೆಗೆ ಮರ್ಮದಲ್ಲಿರು
  • ಕಲ್ತ ಕೈ ಕದ್ದಲ್ಲದೆ ಬಿಡದು
  • ಕಲ್ಲ ನಾಗರ ಕಂದರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು
  • ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ
  • ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
  • ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು
  • ಕಳ್ಳನ ಕಾವಲಿಟ್ಟ ಹಾಗೆ
  • ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ
  • ಕಳ್ಳನ ನಂಬಿದರೂ ಕುಳ್ಳನ್ನ ನಂಬಬೇಡ
  • ಕಳ್ಳನ ಮನಸ್ಸು ಹುಳ್ಳಗೆ
  • ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
  • ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
  • ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
  • ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ
  • ಕಾರ್ಯವಾಸಿ ಕತ್ತೆ ಕಾಲು ಕಟ್ಟು
  • ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು
  • ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
  • ಕಾಲಿಗೆ ಬಿದ್ದು ಕಾಲುಂಗರ ಉಚ್ಚಿಕೊಂಡರಂತೆ
  • ಕಾವಿ ಉಟ್ಟವರೆಲ್ಲಾ ಸನ್ಯಾಸಿಗಳಲ್ಲ ಬೂದಿ ಬಳಿದವರೆಲ್ಲ ಬೈರಾಗಿಗಳಲ್ಲ
  • ಕಿಡಿಯಿಂದ ಕಾಡ ಸುಡ ಬಹುದು
  • ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
  • ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
  • ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
  • ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
  • ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
  • ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
  • ಕುಚುಕು ಬುದ್ಧಿ ಹೊಕ್ಕವನು ಕೆಟ್ಟ
  • ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ
  • ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
  • ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ
  • ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
  • ಕೂಡಿದ ಗಂಡನನ್ನಾದರೂ ಬಿಟ್ತೇನು ಕಲ್ತದ್ದ ಬಿಡಲಾರೆ
  • ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
  • ಕೂತುಕೊಂಡು ಹೇಳುವವನ ಕೆಲಸ ಊರು ಮಾಡಿದರೂ ಸಾಲದು
  • ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
  • ಕೂಳಿಗೆ ಕೇಡು ಭೂಮಿಗೆ ಭಾರ
  • ಕೃಷಿತೋನಾಸ್ತಿ ದುರ್ಭಿಕ್ಷಂ (ಸಂಸ್ಕೃತ)
  • ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
  • ಕೆಟ್ಟ ಮೇಲೆ ಲೊಟ್ಟ
  • ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
  • ಕೆಟ್ಟು ಬದುಕಬಹುದು ಬದುಕಿ ಕೆಡಬಾರದು
  • ಕೆಟ್ಟು ಸೈರಿಸಬಲ್ಲೆ ಕೊಟ್ಟು ಸೈರಿಸಲಾರೆ
  • ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
  • ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು
  • ಕೆರೆಗೆ ತೊರೆ ಕೂಡಿ ಸರೋವರ ವಾಯ್ತು
  • ಕೆರೆಯ ನೀರ ಕೆರೆಗೆ ಚೆಲ್ಲಿ ವರ ಪಡೆದುಕೊಂಡಂತೆ
  • ಕೆಲಸಿಲ್ಲದ ಗಂಡು ಕರೀ ಒನಕೆ ತುಂಡು
  • ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
  • ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
  • ಕೈ ಕೆಸರಾದ್ರೆ ಬಾಯಿ ಮೊಸರು
  • ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
  • ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
  • ಕೈಯೆತ್ತಿ ಕೊಡಲಿಲ್ಲ ಮೈಯ್ಯ ದಂಡಿಸಲಿಲ್ಲ ಪುಣ್ಯದ ಪಾಲು ನನಗಿರಲಿ ಅಂದ
  • ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ
  • ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
  • ಕೊಂಕಿಗೆ ಕೊಂಕೇ ಮದ್ದು
  • ಕೊಂಡಾಡುತ್ತ ಜಗದ ಇಚ್ಚೆಯನ್ನೆ ನುಡಿದರೆ ಜಗವೆಲ್ಲ ತನ್ನ ಮುದ್ದಾಡುತಿತ್ತು
  • ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ
  • ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)
  • ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
  • ಕೊಟ್ಟುಣ್ಣದ ಗಂಟು ಪರರಿಗೆ ಬಿಟ್ಟು ಹೋದಂತೆ
  • ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
  • ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
  • ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
  • ಕೊಡಲಾರದ ಹೆಣ್ಣಿಗೆ ತೆರವು ಕೇಳಿದರಂತೆ
  • ಕೊಡಲಿ ಕಾವು ಕುಲಕ್ಕೆ ಸಾವು
  • ಕೊಡುವ ದೇವರು ಬಡವನೇ?
  • ಕೊಡುವವನ ಕೈ ಯಾವಾಲು ಮೇಲೆ
  • ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
  • ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
  • ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
  • ಕೋಟಿ ಕೊಟ್ಟರೂ ಕೂಟ ಕರ್ಮಿಯ ದುಂದುಗವೇ ಬೇಡ
  • ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
  • ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
  • ಕೋತಿ ಮೊಸರು ಕುಡಿದು ಮೇಕೆ ಬಾಯಿಗೆ ಒರೆಸಿತಂತೆ
  • ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
  • ಕೋಪ ಪಾಪ ತಂತು ಪಾಪ ತಾಪ ತಂತು
  • ಕೋಪ ಬೀವುದೇ ಸಮತೆ
  • ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
  • ಕೋರಿ (=ಚೆಂದುಳ್ಳಿ ಚೆಲುವೆ) ಒಲುಮೆ ತನಗೆ ಅನ್ನೋ ಮಾರನಿಗೆ (=ಚೆಲುವಾಂತನಿಗೆ) ಮಾರಿ ಹಿಡಿಯಿತು.
  • ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
  • ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
  • ಕಾರ್ಯವಾಸಿ ಕತ್ತೆ ಕಾಲು ಕಟ್ಟು
  • ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
  • ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
  • ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
  • ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
  • ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
  • ಕೃಷಿತೋನಾಸ್ತಿ ದುರ್ಭಿಕ್ಷಂ
  • ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
  • ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
  • ಕಡು ಕೋಪ ಬಂದಾಗ ತಡಕೊಂಡವನೇ ಜಾಣ
  • ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
  • ಕಳ್ಳನ ಮನಸ್ಸು ಹುಳ್ಳಗೆ
  • ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
  • ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
  • ಕಂಗಾಲಾದರೂ ಹಂಗಾಳಾಗಬಾರದು
  • ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
  • ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
  • ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
  • ಕಬ್ಬು ಡೊಂಕಾದ್ರೆ ಸವಿ ಡೊಂಕೇ
  • ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
  • ಕೈ ಕೆಸರಾದ್ರೆ ಬಾಯಿ ಮೊಸರು
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
  • ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
  • ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
  • ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
  • ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
  • ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
  • ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
  • ಕಿಡಿಯಿಂದ ಕಾಡ ಸುಡ ಬಹುದು
  • ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
  • ಕೊಡಲಿ ಕಾವು ಕುಲಕ್ಕೆ ಸಾವು
  • ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
  • ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
  • ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
  • ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
  • ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
  • ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
  • ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
  • ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
  • ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
  • ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
  • ಕಾಣದಿರೋ ದೇವರಿಗಿಂತ ಕಾಣೋ ಭೂತಾನೇ ವಾಸಿ
  • ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
  • ಕಾಲಿನದು ಕಾಲಿಗೆ; ತಲೆಯದು ತಲೆಗೆ
  • ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
  • ಕಾರ್ಯವಾಸಿ ಕತ್ತೆ ಕಾಲು ಕಟ್ಟು
  • ಕಾಸಿದ್ರೆ ಕೈಲಾಸ
  • ಕಾಸಿಗೆ ತಕ್ಕ ಕಜ್ಜಾಯ.
  • ಕಾಸಿಗೊಂದು,ಕೊಸರಿಗೆರಡು
  • ಕಾಸು ಕೊಟ್ಟು ಬ್ರಹ್ಮೇತಿ ತಗೊಂಡರು
  • ಕಾಯಕವೇ ಕೈಲಾಸ
  • ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ
  • ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
  • ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು
  • ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು
  • ಕೋಮಟಿ ಕೊಡ;ಜೈನಿಗ ಬಿಡ
  • ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
  • ಕೋತಿ ಕಜ್ಜಾಯ ಹಂಚಿದ ಹಾಗೆ.
  • ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ
  • ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
  • ಕೋತಿಗೆ ಹೆಂಡ ಕುಡಿಸಿದಂತೆ
  • ಕೂರೆಗೆ ಹೆದರಿ ಸೀರೆ ಬಿಚ್ಚೆಸೆದರು
  • ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ
  • ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
  • ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
  • ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು
  • ಕಡ್ಡೀನ ಗುಡ್ಡ ಮಾಡು
  • ಕಡ್ಡೀನ ಗುಡ್ಡ ಮಾಡು.
  • ಕಳ್ಳನ ಹೆಂಡತಿ ಎಂದಿದ್ದರೂ ...ಯೆ
  • ಕಳ್ಳನ ಹೆಂಡತಿ ಎಂದಿದ್ದರೂ ಮುಂ..
  • ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ
  • ಕಳ್ಳನ ನಂಬಿದ್ರು ಕುಳ್ಳನ ನಂಬಬೇಡ
  • ಕಳ್ಳನಿಗೊಂದು ಪಿಳ್ಳೆ ನೆವ
  • ಕಳ್ಳನಿಗೊಂದು ಪಿಳ್ಳೆ ನೆವ
  • ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
  • ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
  • ಕಂಡೋರ ಆಸ್ತಿಗೆ ನೀನೇ ಧಣಿ
  • ಕಂಡೋರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ
  • ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ
  • ಕಂಡ ಕಳ್ಳ ಜೀವ ಸಹಿತ ಬಿಡ
  • ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
  • ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
  • ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
  • ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ
  • ಕಂತೆಗೆ ತಕ್ಕ ಬೊಂತೆ
  • ಕಣ್ಣರಿಯದಿದ್ದರೂ ಕರುಳರಿಯುತ್ತದೆ
  • ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
  • ಕಣ್ಣು ಕುರುಡಾದರೆ ಬಾಯಿ ಕುರುಡೇ
  • ಕಷ್ಟ ಪಟ್ಟರೆ ಫಲವುಂಟು
  • ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
  • ಕಬ್ಬಿಣ ಕಾದಿರುವಾಗಲೇ ಬಡಿಯಬೇಕು
  • ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
  • ಕದ ತಿನ್ನೋವನಿಗೆ ಹಪ್ಪಳ ಈಡಲ್ಲ
  • ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
  • ಕೈ ಕೆಸರಾದರೆ ಬಾಯಿ ಮೊಸರು
  • ಕೈ ಕೆಸರಾದರೆ ಬಾಯಿ ಮೊಸರು.
  • ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
  • ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
  • ಕೈಗೆಟುಕದ ದ್ರಾಕ್ಷಿ ಹುಳಿ
  • ಕೈಲಾಗದೋನು ಮೈ ಪರಚಿಕೊಂಡ
  • ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
  • ಕಜ್ಜಿ ಹೋದರೂ ಕಡಿತ ಹೋಗಲಿಲ್ಲ
  • ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
  • ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
  • ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ.
  • ಕರೆಯದವರ ಮನೆಗೆ ಕಳಸಗಿತ್ತಿಯಾಗು
  • ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
  • ಕೆಟ್ಟ ಅಡಿಗೆ ಅಟ್ಟವಳೇ ಜಾಣೆ
  • ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು
  • ಕೆಟ್ಟು ಪಟ್ಟಣ ಸೇರು
  • ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ
  • ಕೆಲಸವಿಲ್ಲದ ಬಡಗಿ ಮಗುವಿನ ... ಕೆತ್ತಿದ
  • ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
  • ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ
  • ಕೊಂದ ಪಾಪ ತಿಂದು ಪರಿಹಾರ
  • ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು
  • ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ
  • ಕೊಟ್ಟ ಹೆಣ್ಣು ಕುಲದಿಂದ ಹೊರಗೆ
  • ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ
  • ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
  • ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ
  • ಕುಡಿಯೋ ನೀರಿನಲ್ಲಿ ಬೆರಳಾಡಿಸೋ ಬುದ್ಧಿ (ಕುಡಿಯೋ ನೀರಿನಲ್ಲಿ ... ಅದ್ದುವ ಬುದ್ಧಿ)
  • ಕುಂಟನಿಗೆ ಎಂಟು ಚೇಷ್ಟೆ, ಕುರುಡನಿಗೆ ನಾನಾಚೇಷ್ಟೆ
  • ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ
  • ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕಂಡನಂತೆ
  • ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ
  • ಕುಣಿಯಲಾರದವಳು ನೆಲ ಡೊಂಕು ಅಂದಳಂತೆ
  • ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
  • ಕುದುರೆ ಕಂಡರೆ ಕಾಲುನೋವು
  • ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ
  • ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
  • ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ
  • ಕುರು ಮೇಲೆ ಬರೆ ಎಳೆದ ಹಾಗೆ
  • ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ
  • ’ಕೋ’ ಅನ್ನೋದು ಕುಲದಲ್ಲಿಲ್ಲ ,’ತಾ’ ಅನ್ನೋದು ತಾತರಾಯನ ಕಾಲದ್ದು
  • ಕತ್ತೆಗೆನು ಗೊತ್ತು ಕಸ್ತೂರಿ ಪರಿಮಳ
  • ಖಂಡಿತ ವಾದಿ,ಲೋಕ ವಿರೋಧಿ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಗಂಡ ಹೆಂಡಿರ ಜಗಳ ಉಂಡು ಮಲಗುವತನಕ
  • ಗಂಡ ಹೆಂಡಿರ ಜಗಳದಲ್ಲಿ ಮಕ್ಕಳು ಜಗಳ ಕಲಿತವು
  • ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ
  • ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
  • ಗಳಕ್ಕನೇ ಉಂಡವ ರೋಗಿ ಗಳಿಗೆ ಉಂಡವ ಭೋಗಿ
  • ಗಾಣವಾಡದೆ ಎಣ್ಣೆ ಬಂದೀತೇ
  • ಗಾಯದ ಮೇಲೆ ಬರೆ ಕೊಟ್ಟಂತೆ
  • ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
  • ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
  • ಗುಡಿಸಿದ ಮೇಲೆ ಕಸವಿರಬಾರದು ಬಡಿಸಿದ ಮೇಲೆ ಹಸಿವಿರಬಾರದು
  • ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ
  • ಗುರುವಿಗೆ ತಿರುಮಂತ್ರ
  • ಗೆದ್ದವ ಸತ್ತ ಸೋತವ ಸತ್ತ
  • ಗಾಳಿ ಬಂದಾಗ ತೂರಿಕೋ
  • ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
  • ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
  • ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
  • ಗಾಯದ ಮೇಲೆ ಬರೆ ಎಳೆದಂತೆ
  • ಗೋರ್ಕಲ್ಲ ಮೇಲೆ ಮಳೆಗರೆದಂತೆ
  • ಗಡ್ಡಕ್ಕೆ ಬೇರೆ ಸೀಗೇಕಾಯಿ
  • ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ
  • ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
  • ಗಂಡ ಸರಿಯಿದ್ರೆ ಗುಂಡೂ ಪಾವನ
  • ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ
  • ಗಂಡಸಿಗೇಕೆ ಗೌರಿ ದು:ಖ ?
  • ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
  • ಗಂಟೂ ಹೋಯ್ತು;ನಂಟೂ ಹೋಯ್ತು
  • ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ
  • ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ
  • ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದಂತೆ
  • ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ
  • ಗೆದ್ದೆತ್ತಿನ ಬಾಲ ಹಿಡಿದ ಹಾಗೆ
  • ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
  • ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
  • ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರು.
  • ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ
  • ಗುಂಪಿನಲ್ಲಿ ಗೋವಿಂದ
  • ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
  • ಗುಣ ನೋಡಿ ಗೆಳೆತನ ಮಾಡು
  • ಗುರುವಿಗೇ ತಿರುಮಂತ್ರ
  • ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು.
  • ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
  • ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
  • ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
  • ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
  • ಚಿತ್ತದ ಕಳವಳ ನಿಲ್ಲಿಸಿದವರೇ ಉತ್ತಮರು
  • ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ
  • ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
  • ಚೌಲದಾಗ ದೌಲು ಮಾಡು
  • ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ.
  • ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ
  • ಚಂಡಾಲ ದೇವರಿಗೆ ಚಪ್ಪಲಿ ಸೇವೆ
  • ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ
  • ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
  • ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
  • ಚಿತ್ತಾರದ ಅಂದವನ್ನು ಮಸಿ ನುಂಗಿತು
  • ಛತ್ರದಲ್ಲಿ ಭೋಜನ , ಮಠದಲ್ಲಿ ನಿದ್ದೆ .
  • ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
  • ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
  • ಜನ ಮರುಳೋ ಜಾತ್ರೆ ಮರುಳೋ
  • ಜನಕ್ಕಂಜದಿದ್ದರೂ ಮನಕ್ಕಂಜಬೇಕು
  • ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ
  • ಜಿನ ಧರ್ಮವೇ ಜೀವಧರ್ಮ
  • ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ
  • ಜ್ಯೋತಿಯ ನೆಲೆ ಅರಿತವನೇ ಯೋಗಿ
  • ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
  • ಜೀನ ಗಳಿಸಿದ ;ಜಾಣ ತಿಂದ
  • ಜಟ್ಟಿ ಜಾರಿದರೆ ಅದೂ ಒಂದು ಪಟ್ಟು
  • ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು


ವಿಷಯ-ಪೋಣಿಕೆಗೆ ಹಿಂತಿರುಗಿ

  • ಟೊಣಪೆ (ಗಾತ್ರದಲ್ಲಿ ದೊಡ್ಡದಾದ) ಶಾಸ್ತ್ರಕ್ಕೆ ಹೆಣಗುವುದೇ ಅರ್ಥ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
  • ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ


ವಿಷಯ-ಪೋಣಿಕೆಗೆ ಹಿಂತಿರುಗಿ

  • ತಕ್ಕಡಿ ಬಲ್ಲದೇ ಮನೆಯ ಬಡತನವ
  • ತಕ್ಕಡಿ ಸ್ವರೂಪ ತಕ್ಕವನೇ ಬಲ್ಲ
  • ತಕ್ಕವನಲ್ಲಿ ಹೊಕ್ಕಿದ್ದರೆ ತಕ್ಕಷ್ಟಾದರೂ ಸಿಕ್ಕುವುದು
  • ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
  • ತಕ್ರ (=ಮಜ್ಜಿಗೆ) ಶಕ್ರನಿಗೆ(=ಇಂದ್ರ) ಸಹಾ ದುರ್ಲಭ
  • ತಗಣೇ ಉಪದ್ರವ ಮಗಳಿಗೂ ಬಿಡಲಿಲ್ಲ
  • ತಗಲಿದವನಿಗೆ ಹಗಲಿರುಳೇನು?
  • ತಗಲುಗಾರನಿಗೆ (= ದಗಲ್ ಬಾಜ್) ಬಗಲ ಮೇಲೆ ಜ್ಞ್ಯಾನ
  • ತಗ್ಗಿದವ ಎಂದಿಗೂ ನುಗ್ಗಾಗ
  • ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ
  • ತಗ್ಗು ದವಸಕ್ಕಾಗಿ ಹಗ್ಗ ಕೊಂಡು ಕೊಂಡ
  • ತಟಕಿನಿಂದ ತಟಪಟವಾಯಿತು
  • ತಟಕು ಬಿದ್ದು ಮಠಾ ಕೆಡಿಸಿತು
  • ತಟದಲ್ಲಾಗಲೀ ಮಠದಲ್ಲಾಗಲೀ ಹಟದ ಜಂಗಮನ ಕಾಟ ತಪ್ಪುವುದಿಲ್ಲ
  • ತಟಸ್ಥನಾದವನಿಗೆ ತಂಟೆಯೇನು?
  • ತಟ್ಟನೆ ಆಡಿದರೆ ಕೊಟ್ಟಷ್ಟು ಫಲ
  • ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ
  • ತಟ್ಟಿ ಬೈಸಿಕೊಂಡರೂ ತಟ್ಟೇ ಹುಳಿ ಚೆನ್ನಾಗಿದೆ
  • ತಟ್ಟಿನಲ್ಲಿ ಬಿದ್ದಾಗ್ಯೆ ಗಟ್ಟಿ ಆಗಲಾರ
  • ತಟ್ಟು ಇದ್ದರ‍ೇ ತಟಾಯಿಸಿ ನಡದಾನು
  • ತಡವ ಮಾಡುವವನ ಗೊಡವೆ ಬೇಡ
  • ತಡವಿದರೆ ಮಡಿ ಸಹಾ ಕೆಡುವುದು
  • ತಡೇ ಕಟ್ಟುವವನ ಮುಂದೆ ಮುಡಿಯೇನು
  • ತಣ್ಣಗಿದ್ದರೆ ಮಣ್ಣಾದರೂ ಅಸಾಧ್ಯ
  • ತಣ್ಣೀರು ಆದರೂ ಪುಣ್ಯದಿಂದ ದೊರಕಬೇಕು
  • ತತ್ರಬಿತ್ರಿಯ (ತಂತ್ರಗಾರ) ಮುಂದೆ ಕತ್ತೆಯ ಹಾಗೆ ಆದ
  • ತತ್ವಮಸಿ ಅಂತ ಅನ್ನೋದ್ ಕಲಿ ಅಂದ್ರೆ ತುತ್ತು ಸವಿ ಅಂತ ಉಣ್ನೋದ್ ಕಲ್ತ
  • ತನಗಿಲ್ಲದ್ದು ಎಲ್ಲಿದ್ದರೇನು
  • ತನಗೆ ಇಲ್ಲ ಕೂಸಿಗೇನು ಹೊದ್ದಿಸಲಿ
  • ತನಗೆ ಇಲ್ಲದ ಮಾರಿ ತಮ್ಮಡಿಗೆ (ತಮ್ಮಡಯ್ಯನಿಗೆ) ವರಾ ಕೊಟ್ಟೀತೇ?
  • ತನಗೆ ಇಲ್ಲದವಳು ಮಕ್ಕಳಿಗೆ ಏನು ಹೊದಿಸ್ಯಾಳು
  • ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು
  • ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು
  • ತನುವರಿಯದ ನೋವಿಲ್ಲ ಮನವರಿಯದ ತಾಪವಿಲ್ಲ
  • ತನ್ನ ಅಕ್ಕನ ಅರಿಯದವಳು ನೆರೆಮನೆ ಬೊಮ್ಮಕ್ಕನ ಬಲ್ಲಳೇ?
  • ತನ್ನ ಕಾಲಿಗೆ ತಾನೇ ಶರಣು ಮಾಡಿ ಹರಸಿಕೊಂಡ ಹಾಗೆ
  • ತನ್ನ ತಾ ತನ್ನಿಂದಲೇ ಅರಿಯಬೇಕು
  • ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
  • ತನ್ನ ತಾ ಬಲ್ಲವನೆ ಬಲ್ಲವ
  • ತನ್ನ ತಾನರಿತರೆ ತನ್ನರಿವೆ ಗುರು
  • ತನ್ನ ತಾನರಿತರೆ ತಾನ್‍ಆದಾನು ತನ್ನ ತಾ ಮರೆತರೆ ತಾ ಹೋದಾನು
  • ತನ್ನ ತಾನರಿತರೆ ಸುಜ್ಞ್ನಾನಿ
  • ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು
  • ತನ್ನ ನೆರಳಿಗೆ ತಾನಂಜಿ ನಡೆಯಬೇಕು
  • ತನ್ನ ನೆರಳು ತಾ ಕಂಡು ನರಳುವವ ಮರುಳನಲ್ಲವೇ?
  • ತನ್ನ ಮನೆ ಉಪ್ಪು ಇಲ್ಲ ಬೆನ್ನ ಹಿಂದೆ ಉರಿಯೋ
  • ತನ್ನ ಮರ್ಯಾದೆ ಕೆಟ್ಟವ ಪರರ ಮರ್ಯಾದೆ ಇಟ್ಟಾನೆ?
  • ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ
  • ತನ್ನ ಹಲ್ಲು ತಾ ಮರಕೊಂಡು ಇನ್ನೊಬ್ಬನ ಮೇಲೆ ದೂರು ಹೇಳಿದ
  • ತನ್ನ ಹೊಟ್ಟೆ ತಾ ಹೊರೆಯದವ ಮುನ್ನಾರ ಸಲಹುವ?
  • ತನ್ನೂರಲಿ ರಂಗ, ಪರೂರಲಿ ಮಂಗ
  • ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ
  • ತಪಸ್ಸು ಇದ್ದವನೇ ಗಭಸ್ತಿ (=ಕಾಂತಿ) ಉಳ್ಳವನು
  • ತಪ್ಪನೆ ಬಾ (=ತಕ್ಷಣ ಬಾ ) ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ
  • ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ
  • ತಪ್ಪಿ ಬಿದ್ದವನಿಗೆ ತೆಪ್ಪ (=ದೋಣಿ) ಏನು ಮಾಡೀತು
  • ತಪ್ಪಿದವನಿಗೆ ಒಪ್ಪು ಇಲ್ಲ
  • ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು
  • ತಫಾವತುಗಾರ (=ಹಣ ತಿಂದು ಹಾಕುವವ) ತಪ್ಪಿದರೆ ತಿಪ್ಪಯ್ಯಗೆ ಏನು ಕೋಪ
  • ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ
  • ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?
  • ತಬ್ಬಳಿ ದೇವರಿಗೆ ತಂಗಳ ನೈವೇದ್ಯ
  • ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
  • ತಮ್ಮ ಕಲಹಕ್ಕೆ ಐವರು ಪರರ ಕಲಹಕ್ಕೆ ನೂರಾ ಐವರು
  • ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ
  • ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
  • ತಮ್ಮನ ಸಂಗಡ ತಿಮ್ಮ ಬಂದರೆ ತಂಗಳನ್ನವೇ ಗತಿ
  • ತರಗು (=ಒಣಗಿದ ಎಲೆ) ತಿಂಬುವುದೇ ಪರಮ ಸುಖ
  • ತರಗು (ಮರದಿಂದ ಬಿದ್ದ ಒಣ ಎಲೆಗಳು)ಮೊರದಲ್ಲಿ ಹಿಡಿಯದು
  • ತರಗು ತಿಂಬವನಿಗೆ ಒರಗೊಂದು ಕೇಡು
  • ತರಗು ತಿನ್ನುವವನ ಮನೆಗೆ ಹಪ್ಪಳಕ್ಕೆ ಹೋದರು
  • ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
  • ತರಗೆಲೆ ಅಡಿಕೆ ತಿರಿದು ತಿನ್ನಬೇಕೆ
  • ತರತರವಾಗಿ ಹೇಳಿದ್ದು ಮರೆತರೆ ಮರಕ್ಕಿಂತಾ ಕಡೆ
  • ತರಬಲ್ಲವನ ಹೆಂಡತಿ ಅಡಜಾಣೆ (ಅಡಕವಾದ ಜಾಣ್ಮೆ ಉಳ್ಳವಳು)
  • ತರಲಿಲ್ಲ ಬರಲಿಲ್ಲ ಬರ ಹ್ಯಾಗೆ ಹಿಂಗೀತು
  • ತರಲೆ ಕೇಳುವವ ಮರುಳಗಿಂತ ಕಡೆ
  • ತರವಲ್ಲದ ಮಾತು ಮರ ಏರಿದರೆ ಆದೀತೇ
  • ತರಹರಿಸಾಳಾರದವಳು ಮರಣಕ್ಕೆ ಪಾತ್ರಳು
  • ತರುಬಿ ಹೋಗುವನ್ನ ಕರುಬಿ (=ಅಸೂಯೆ) ಮಾಡುವುದೇನು?
  • ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು ಕಷ್ಟ
  • ತರುಬಿಲ್ಲದ ಒಡ್ಡನು, ಬಿರಿಸಿಲ್ಲದ ಹುರಿಯು
  • ತರುಬು ಇದ್ದರೆ ಹರುಬು ನಿಂತೀತೇ
  • ತರುವವ ಮರೆತರೆ ಮೊರ ಏನು ಮಾಡೀತು
  • ತರುವವ ಹೋದಮೇಲೆ ಮರಗುವವರುಂಟೇ
  • ತರ್ಕಾ ಮಾಡುವವ ಮೂರ್ಕನಿಂದ ಕಡೆ
  • ತಲೆ ಗಟ್ಟಿ ಅಂತ ಕಲ್ಲ ಹಾಯಬಾರದು
  • ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು
  • ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು
  • ತಲೆ ಬಲಿಯಿತು ಅಂತ ಕಲ್ಲಿಗೆ ಹಾಯಬಾರದು
  • ತಲೆ ಸೀಳಿದರೆ ಎರಡಕ್ಷರ ಇಲ್ಲ
  • ತಲೆ ಹೋಗುವುದಕ್ಕೆ ಕಾಲು ಹೊಣೆಯಾದ ಹಾಗೆ
  • ತಲೆಗೆ ಎಣ್ಣೆ ಇಲ್ಲ ತನು ಮೃಗನಾಭಿ ಬೇಡಿತು
  • ತಲೆಗೆ ಒಂದು ಕಡ್ಡೀಯಾದರೆ ಒಂದು ತಲೆಯ ಹೊರೆ
  • ತಲೇ ಒಡೆದವನೂ ಸಮ ಲೇಪ ಹಚ್ಚಿದವನೂ ಸಮ
  • ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು
  • ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ
  • ತಲೇ ಕೂದಲು ಉದ್ದವಿದ್ದವಳು ಹ್ಯಾಗೆ ಕಟ್ಟಿದರೂ ಚಂದ
  • ತಲೇ ಕೂದಲು ನೆರೆಯಾದ ಮೇಲೆ ತಬ್ಬಿಕೊಂಡ ತಬ್ಬಲಿ ಮುರವ (=ತಿರುಕ)
  • ತಲೇ ಮೂರು ಸುತ್ತು ತಿರುಗಿದರೂ ತುತ್ತು ಬಾಯಿಲೇ
  • ತಲೇ ಮೇಲಣ ಬರಹ ಎಲೆಯಿಂದ ಒರೆಸಿದರೆ ಹೋದೀತೇ
  • ತಲೇ ಸಿಡಿತಕ್ಕೆ ಮಲಶೋಧನೇ ಕೊಂಡ ಹಾಗೆ
  • ತವಕ ಪಟ್ಟವ ತಬ್ಬರಿಸಿ ಬಿದ್ದ
  • ತವಡು ತಿಂದರು ಮುರುಕು (ಬೆಡಗು, ಕೊಂಕು) ಘನ
  • ತವಡು ತಿಂಬುವನಿಗೆ ವಯ್ಯಾರ ಯಾಕೆ
  • ತವಡು ತಿಂಬುವವ ಹೋದರೆ ಉಮ್ಮಿ ತಿಂಬುವವ ಬತ್ತಾನೆ
  • ತವರೂರಿನ ದಾರೀಲಿ ಕಲಿಲ್ಲ ಮುಳ್ಳಿಲ್ಲ
  • ತಳಮಳ ತೀರಲಿಲ್ಲ, ಕಳವಳ ಕಳಿಯಲಿಲ್ಲ
  • ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು (ಒಕ್ಕಲಿಗರ ಸಮೂಹ) ಹೋದೀತೋ?
  • ತಳಾ ಬಿಟ್ಟು ಬಂಡಿ ಹಾರದು
  • ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ
  • ತಾ ಅನ್ನೋದು ನಮ್ಮ ತಲತಲಾಂತರಕ್ಕೂ ಇರಲಿ, ಕೊ ಅನ್ನೋದು ನಮ್ಮ ಕುಲಕೋಟಿಗೂ ಬೇಡ
  • ತಾ ಕಳ್ಳೆ ಪರರ ನಂಬಳು, ಹಾದರಗಿತ್ತಿ ಗಂಡನ ನಂಬಳು
  • ತಾ ಕಾಣದ ದೇವರು ಪೂಜಾರಿಗೆ ವರ ಕೊಟ್ಟೀತೇ?
  • ತಾ ಕೋಡಗ ಪರರ ಅಣಕಿಸಿತು
  • ತಾ ನೊಂದಂತೆ ಬೇರೇರ ನೋವನ್ನೂ ಅರಿಯಬೇಕು
  • ತಾ ಬಲವೋ ಜಗ ಬಲವೋ
  • ತಾಗದೆ ಬಾಗದು ಬಿಸಿಯಾಗದೆ ಬೆಣ್ಣೆ ಕರಗದು
  • ತಾಟುಗಾರ (ಗರ್ವದ ಮನುಷ್ಯ) ಆಟಕ್ಕೆ ಹೋಗಿ ಮೋಟಗಾರನಾಗಿ (ತನ್ನಿಂದಲೇ ತಾ ಮೂರ್ಕನಾಗುವುದು) ಬಿದ್ದ
  • ತಾತಾಚಾರ‍್ಯರ ಮನೆಗೆ ಏನಪ್ಪಣೆ?
  • ತಾನಾಗಿ ಬೀಳುವ ಮರಕ್ಕೆ ಕೊಡಲಿ ಇಕ್ಕಿದ ಹಾಗೆ
  • ತಾನು ಗರತಿ ಆದರೆ ಸೂಳೆಗೇರೀಲಿ ಮನೆ ಕಟ್ಟು
  • ತಾನು ಜಾರಿಬಿದ್ದು ಉಣ್ಣೆಯಂತ ನೆಲ ಅಂದ
  • ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
  • ತಾನು ತಿಂಬೋದು ಪಲ್ಲೆ ಸೊಪ್ಪು ಹಿರೇ ಕುದರೆ ಚೇಷ್ಟೆ
  • ತಾನು ನೆಟ್ಟ ಬೀಳು (ಬಳ್ಳಿ) ತನ್ನ ಎದೆಗೆ ಹಬ್ಬಿತು
  • ತಾನು ಬಾಳಲಾರದೆ ವಿಧಿಯ ಬೈದಂತೆ
  • ತಾನು ಸಾಯಬೇಕು ಸ್ವರ್ಗಾ ಪಡೆಯಬೇಕು
  • ತಾನು ಹೋದರೆ ಮಜ್ಜಿಗೆ ಇಲ್ಲ ಮೊಸರಿಗೆ ಚೀಟು
  • ತಾನು ಹೋದರೆ ಮಜ್ಜಿಗೆ ಇಲ್ಲ ಹೇಳಿ ಕಳಿಸಿದರೆ ಮೊಸರು ಕೊಟ್ಟಾರೆ
  • ತಾನುಂಟೋ? ಮೂರು ಲೋಕವುಂಟೋ?
  • ತಾನೂ ಕುಡಿಯ ಕುಡಿಯಲೀಸ
  • ತಾನೊಂದೆಣಿಸಿದರೆ ದೈವವೊಂದೆಣಿಸಿತು
  • ತಾನೊಲಿದ ಮಂಕು ಮಾಣಿಕ್ಯ
  • ತಾಪತ್ರಯದವನಿಗೆ ತಾಪೆ/ಚಾಪೆ ಯಾಕೆ
  • ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
  • ತಾಯಂತೆ ಕರು ನಾಯಂತೆ ಬಾಲ
  • ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
  • ತಾಯಿ ಒಂದಾದರೂ ಬಾಯಿ ಬೇರೆ
  • ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ
  • ತಾಯಿ ಬೇಕು ಇಲ್ಲವೆ ಬಾಯಿ ಬೇಕು
  • ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ
  • ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು
  • ತಾಯಿಗೆ ಕಂಡರೆ ತಲೆ ನೋವು
  • ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ
  • ತಾಯಿಗೆ ಸೇರದ್ದು ನಾಯಿಗೂ ಸೇರದು
  • ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
  • ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ
  • ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ
  • ತಾಯಿಲ್ಲದ ತವರು ಕಾಟಕದಿದ್ದ ಅಡವಿ
  • ತಾರಕ್ಕೆ (ಎರಡು ಕಾಸಿನ ನಾಣ್ಯ) ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ
  • ತಾರಕ್ಕೊಂದು ಸೀರೆಯಾದರೂ ನಾಯಿ ತಿಕ ಬೆತ್ತಲೆ
  • ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ
  • ತಾರು ಮಾರು ಮಾಡುವವನಿಗೆ ಯಾರು ತಾನೆ ನಂಬ್ಯಾರು
  • ತಾರುಣ್ಯವೇ ರೂಪು ಕಾರುಣ್ಯವೇ ಗುಣ
  • ತಾರೇ ಬಡ್ಡೀ ನೀರಾ ಅಂದ್ರೆ ತರುವೆನು ನಿಲ್ಲೊ ತಿರುಕ ಮುರವ
  • ತಾರೇಮರದ ಕಾಯಾದರೂ ಕರೆದರೆ ಬಂದೀತೇ
  • ತಾವು ಮಾಡುವುದು ಗಂಧರ್ವರು ಮಾಡಿದರು
  • ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು
  • ತಾಸಿನ ಗೊತ್ತು ದಾಸಿಗೆ ತಿಳಿದೀತೇ?
  • ತಾಸಿನ ಬಟ್ಟಲು ನೀರ ಕುಡಿದರೆ ತಾಸಿಗೆ ಕೊಡತೀ ಪೆಟ್ಟು
  • ತಾಳ ತಪ್ಪಿದ ಬಾಳು, ತಾಳಲಾರದ ಗೋಳು
  • ತಾಳ ತಪ್ಪಿದರೆ ಕುಣಿಯೊದು ತಪ್ಪುವುದಿಲ್ಲ
  • ತಾಳದಲ್ಲಿ ಜಾಣನಾದರೆ ತಾಳಿಕೆ ಇದ್ದೀತೇ
  • ತಾಳಲಾರದ ವಿರಹ ತಿಣಕಿದರೆ ಹೋದೀತೇ?
  • ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು
  • ತಾಳು ಬಡಿದರೆ ಕಾಳು ಸಿಕ್ಕೀತೇ
  • ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು
  • ತಾಳೆಮರ ಉದ್ದವಾದರೆ ಕೋಳಿಗೆ ಬಂದದ್ದೇನು
  • ತಾಳೆಮರ ದೊಡ್ಡದಾದರೂ ತಾಳೆ ಹೂವಿಗೆ ಸರಿಯಾದೀತೇ
  • ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು
  • ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು
  • ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
  • ತಿಕ ಮಕ ಒಂಡೇ ತಿಪ್ಪಾಭಟ್ಟರಿಗೆ
  • ತಿಗಳಗಿತ್ತಿಯ ಬಾಯಿ ಕೆಣಕಬೇಡ ಬಗಳೊ ನಾಯಿ ಬಡಿಯಬೇಡ
  • ತಿಗಳಾ ತಾ ಕೆಡುತ್ತಾ ಏಳು ನೆರೆ ಕೆಡಿಸಿದ
  • ತಿಗುಳಗೆ ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ
  • ತಿಪ್ಪಯ್ಯಗೆ ಸೂಜಿ ಮೇಲು ಕಳ್ಳಗೆ ಬಾಯಿ ಮೇಲು
  • ತಿಪ್ಪೆಯ ಮೇಲೆ ಕುಂಡ್ರುವವಗೆ ತಕ್ಯೆ ಯಾತಕ್ಕೆ
  • ತಿಪ್ಪೇ ಮೇಲಣ ಅರಿವೆಯಾದರೂ ಕಾಲಿಗೆ ಕಟ್ಟಿದರೆ ಬಿರುದು
  • ತಿಪ್ಪೇ ಮೇಲಣ ದೀಪ ಉಪ್ಪರಿಗೆಯ ಮೇಲೆ ಬಂದೀತೋ?
  • ತಿಪ್ಪೇ ಮೇಲೇ ಮುಪ್ಪಾದ ಕುಂಬಾರ ತಿಪ್ಪ
  • ತಿಪ್ಪೇ ಮ್ಯಾಲೆ ಮಲಗಿ ಉಪ್ಪರಿಗೆ ಕನಸು ಕಂಡ ಹಾಗೆ
  • ತಿಮರು (=ಕಡಿತ, ನವೆ) ತುರಿಸಿದರೆ ಅರಸಿನ ಹಾಗೆ
  • ತಿರಿಚಿನಾಪಳ್ಳಿಗೆ ತಿರಿದುಂಬೊದಕ್ಕೆ ಇಲ್ಲಿಂದ ಕೈ ಸವರಿಸಬೇಕೆ
  • ತಿರಿತಿರಿಗಿ ಗೋಕರ್ಣಕ್ಕೆ ಹೋಗಿ ತುರಕನಿಂದ ದೆಬ್ಬೆ ತಿಂದ
  • ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
  • ತಿರಿದುಂಬುವ ಭಟ್ಟ ದಕ್ಷಿಣೆಯಾದರೂ ಬಿಟ್ಟಾನು ಭೊಜನ ಸಿಕ್ಕಿದರೆ ಬಿಡಲೊಲ್ಲ
  • ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?
  • ತಿರುಕನಿಗೆ ಮುರುಕು (ಬೆಡಗು ಕೊಂಕು) ಇದ್ದಾಗ್ಯೂ ತಿರಿದುಂಬುವುದು ತಪ್ಪದು
  • ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
  • ತಿರುಪತಿ ಕ್ಷೌರಿಕರು ತಲೆ ಬೋಳಿಸಿದ ಹಾಗೆ
  • ತಿರುಪದ ಪುಟ್ಟಿಯಲ್ಲಿ ಶನೀಶ್ವರ ಕೂತ
  • ತಿರುಪಿನಂತೆ ಇರಬೇಕು ತಿಳಿದವ
  • ತಿರುಳು ತಿಂದರೂ ಮರುಳು ಹೋಗಲಿಲ್ಲ
  • ತಿರುಳು ಹೋಗಿ ಬೆಂಡು ಉಳೀತು
  • ತಿರೋಕಲ್ಲು ಗಾಳಿಯಿಂದ ಹಾರುವುದೋ
  • ತಿರೋಕಲ್ಲು ಮಳೇಲಿ ಬಿದ್ದರೆ ಮರಕ್ಕಿಂತಾ ಕಡೆಯಾದೀತೇ
  • ತಿವಾಸಿ ಯಾತಕ್ಕೆ ತಿಪ್ಪೇ ಮೇಲಣವಗೆ
  • ತಿವಿದುಕೊಂಡರೆ ಬಂದೀತೇ ತಿಮ್ಮಪ್ಪನ ದಯೆ
  • ತಿಳಿದ ಕಳ್ಳ ತಿರಿಗಿದರೂ ಬಿಡ
  • ತಿಳಿದವ ಮಾಡ್ಯಾನು ನಳಪಾಕವ
  • ತಿಳಿದವನಾದರೂ ಮಲಮೂತ್ರ ಬಿಟ್ಟೀತೇ?
  • ತಿಳಿದು ಒಡ್ಡೋ ತೀರು ಬಾಣವ
  • ತಿಳಿಯಕ್ಕಿಲ್ಲ ನೋಡಕ್ಕಿಲ್ಲ ಹುಚ್ಚು ಮೂಕನ ಆಟ
  • ತೀಟೆ ಆದರೆ ತಾನೆ ಬರುತ್ತಾನೆ
  • ತೀಟೆಗೆ ಮಕ್ಕಳ ಹೆತ್ತು ತಿರುಮಲ ದೇವರ ಹೆಸರಿಟ್ಟ ಹಾಗೆ
  • ತೀಟೆ ತೀರಿದಮೇಲೆ ಲೌಡಿ ಸಂಗ ಯಾಕೆ?
  • ತೀರಕ್ಕೆ ಬಂದ ಮೇಲೆ ತೆರೆಯ ಭಯವೇ
  • ತೀರದ ಕಾರ್ಯ ಹಾರಿದರೂ ಆಗದು
  • ತೀರದಲ್ಲಿರುವ ಮರಕ್ಕೆ ನೀರು ಯಾತಕ್ಕೆ
  • ತುಂಬಿದ ಕೊಡ, ತುಳುಕೋದಿಲ್ಲ
  • ತುಟಿ ಸುಮ್ಮನಿದ್ದರೂ ಹೊಟ್ಟೆ ಸುಮ್ಮನಿರದು
  • ತುಟ್ಟಿಯಾದರೂ ಹೊಟ್ಟೆ ಕೇಳದು
  • ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
  • ತೂತು ಗತ್ತಲೇಲಿ ತಾತನ ಮದುವೆ
  • ತೇಗಿ ತೇಗಿ ಬೀಗಿ ಬಿದ್ದ
  • ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
  • ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು
  • ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು
  • ತೋಟದ ಬೇಲಿಯನ್ನು ದಾಟಿ ನೋಡದವರಾರು
  • ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು
  • ತಾಳಕ್ಕೆ ತಕ್ಕ ಮೇಳ
  • ತಾಳಿದವನು ಬಾಳಿಯಾನು
  • ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
  • ತಾನೂ ತಿನ್ನ; ಪರರಿಗೂ ಕೊಡ
  • ತಾನು ಕಳ್ಳ ,ಪರರ ನಂಬ
  • ತಾನು ಮಾಡುವುದು ಉತ್ತಮ; ಮಗ ಮಾಡುವುದು ಮಧ್ಯಮ; ಆಳು ಮಾಡುವುದು ಹಾಳು
  • ತಾಯೀನೇ ತಿಂದೋಳು,ಅತ್ತೇನ ಬಿಟ್ಟಾಳೆಯೇ?
  • ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ
  • ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
  • ತೋಳ ಬಿದ್ದರೆ ಆಳಿಗೊಂದು ಕಲ್ಲು
  • ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
  • ತೋಟ ಶೃಂಗಾರ, ಒಳಗೆ ಗೋಣಿ ಸೊಪ್ಪು
  • ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
  • ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
  • ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?
  • ತಲೆಗೆಲ್ಲಾ ಒಂದೇ ಮಂತ್ರವಲ್ಲ
  • ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು
  • ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು
  • ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು ಬೇರೆ
  • ತನ್ನ ಓಣೀಲಿ ನಾಯಿಯೇ ಸಿಂಹ
  • ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
  • ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ
  • ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು
  • ತುಂಬೆ ಗಿಡಕ್ಕೆ ಏಣಿ ಹಾಕಿದಂತೆ
  • ತುಂಬಿದ ಕೊಡ ತುಳುಕುವುದಿಲ್ಲ
  • ತುಂಬಿದ ಕೊಡ ತುಳುಕುವುದಿಲ್ಲ
  • ತಾಳ ತಪ್ಪಿದ ಬಾಳು, ತಾಳಲಾರದ ಗೋಳು
  • ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
  • ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
  • ತೇಗಿ ತೇಗಿ ಬೀಗಿ ಬಿದ್ದ
  • ತೂತು ಗತ್ತಲೇಲಿ ತಾತನ ಮದುವೆ
  • ತನ್ನೂರಲಿ ರಂಗ, ಪರೂರಲಿ ಮಂಗ
  • ತುಂಬಿದ ಕೊಡ, ತುಳುಕೋದಿಲ್ಲ
  • ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು


ವಿಷಯ-ಪೋಣಿಕೆಗೆ ಹಿಂತಿರುಗಿ

  • ದನಿಯಿದ್ದವರೂ ಅತ್ತರೂ ಚಂದ ನಕ್ಕರೂ ಚಂದ
  • ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
  • ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ
  • ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
  • ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು
  • ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ
  • ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
  • ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
  • ದುಡಿದದ್ದು ಉಂಡೆಯೋ ಪಡೆದದ್ದು ಉಂಡೆಯೋ
  • ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
  • ದೂಫ ಹಾಕಿದರೆ ಪಾಪ ಹೋದೀತೇ
  • ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು
  • ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ
  • ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ
  • ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ
  • ದಾಕ್ಷಿಣ್ಯಕ್ಕೆ ಬಸಿರಾಗೋದು
  • ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
  • ದೇಶ ಸುತ್ತು ; ಕೋಶ ಓದು.
  • ದೇವನೊಬ್ಬ ನಾಮ ಹಲವು
  • ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ
  • ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
  • ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ
  • ದೇವಸ್ಥಾನದಲ್ಲಿ ಊದಿನ ಕಡ್ಡಿ ಹಚ್ಚದಿದ್ದರೂ ಚಿಂತೆಯಿಲ್ಲ; ... ಬಿಡಬೇಡ
  • ದೀಪದ ಕೆಳಗೆ ಯಾವತ್ತೂ ಕತ್ತಲೇ
  • ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
  • ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಇನ್ನು ನಿನ್ನ ಗಳಗಂಟೆಗೆ
  • ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ
  • ದನ ತಿನ್ನುವವನಿಗೆ ಗೊಬ್ಬರದ ಆಣೆ
  • ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
  • ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು
  • ದಿನಾ ಸಾಯೋರಿಗೆ ಅಳೋರ್ ‍ಯಾರು?
  • ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ
  • ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ
  • ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ
  • ದುಡಿಮೆಯೇ ದೇವರು
  • ದುಡಿಮೆಯೇ ದುಡ್ಡಿನ ತಾಯಿ
  • ದುಷ್ಟರಿಂದ ದೂರವಿರು
  • ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
  • ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
  • ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?



ವಿಷಯ-ಪೋಣಿಕೆಗೆ ಹಿಂತಿರುಗಿ

  • ನಕ್ಕು ನುಡಿದವರು ಕಡೆಗೆ ಅಡವಿಯಲಿಕ್ಕಿ ಬರುವರು
  • ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ
  • ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
  • ನಡೆವರ್ ಎಡವದೇ ಕುಳಿತವರ್ ಎಡವುವರೇ
  • ನಯಶಾಲಿ ಆದವನು ಜಯಶಾಲಿ ಆದಾನು
  • ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು
  • ನಾ ಬಡವ ವಾಲಗ ಸಾವಕಾಶ ಊದು ಅಂದಂತೆ
  • ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು
  • ನಾಡಳಿದು ನಾಡೊಡೆಯನಿಗೆ ಕೇಡು ನಾಡೊಡೆಯ ಅಳಿದು ನಾಡಿಗೆಲ್ಲ ಕೇಡು
  • ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
  • ನಾಯಿ ಬಾಲ ಡೊಂಕು
  • ನಾಯಿ ಬೊಗಳಿದರೆ ದೇವಲೋಕ ಹಾಳೇನು
  • ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
  • ನಾಳೆ ಯಾರೋ ನಾನು ಯಾರೋ!
  • ನಿಜ ಆಡಿದರೆ ನಿಷ್ಠೂರ
  • ನಿಜವ ಹಿಡಿ ಘಟವ ನೆಚ್ಚದಿರು
  • ನಿದ್ದೆ ಗೈಯೋನ ಹೊತ್ತು ನುಂಗ್ತು
  • ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
  • ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು
  • ನಿಷ್ಠೆ ಇಲ್ಲದವನಿಗೆ ದೈವ ಬಟ್ಟಬಯಲು
  • ನಿಷ್ಠೆ ಇಲ್ಲದೆ ಎಷ್ಟು ಪೂಜೆ ಮಾಡಿದರೂ ನಷ್ಟ
  • ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
  • ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
  • ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು/ಕಾದಡಿತು
  • ನೆಂಟ ನೆರವಲ್ಲ ಕುಂಟ ಜೊತೆಯಲ್ಲ
  • ನೆತ್ತರು ಉಕ್ಕಿದರೆ ಜೀವ ತೊಡಕೀತು
  • ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ
  • ನೆರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ
  • ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
  • ನೇಮ ಉಳ್ಳವನ ಕಂಡರೆ ಯಮನಿಗೂ ಭಯ
  • ನಾಯಿ ಬಾಲ ಡೊಂಕು
  • ನಾಯಿ ಬೊಗಳಿದರೆ ದೇವಲೋಕ ಹಾಳೇನು
  • ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
  • ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
  • ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ
  • ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
  • ನಯಶಾಲಿ ಆದವನು ಜಯಶಾಲಿ ಆದಾನು
  • ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
  • ನಿಜ ಆಡಿದರೆ ನಿಷ್ಠೂರ
  • ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
  • ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ ... ಕಂಡು ಇಳಿಬಿತ್ತು
  • ನಾಯಿ ಬಾಲ ಡೊಂಕು
  • ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ
  • ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
  • ನಾಯಿ ಹೆಸರು’ಸಂಪಿಗೆ’ಅಂತ
  • ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
  • ನಾಯಿಗೆ ಹೊತ್ತಿಲ್ಲ;ನಿಲ್ಲಕ್ಕೆ ನೆಲೆಯಿಲ್ಲ
  • ನಾಯಿಗೆ ವಯಸ್ಸಾದ್ರೆ ಅಜ್ಜ ಅಂತಾರಾ?
  • ನೀರಿಳಿಯದ ಗಂಟಲೊಳ್ ಕಡುಬಂ ತುರುಕಿದಂತಾಯ್ತು (ಮುದ್ದಣ)
  • ನೀರಿನಲ್ಲಿ ಹೋಮ ಮಾಡಿದಂತೆ
  • ನೂಲಿನಂತೆ ಸೀರೆ; ತಾಯಿಯಂತೆ ಮಗಳು
  • ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
  • ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ
  • ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ
  • ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು
  • ನಮಾಜು ಮಾಡಲು ಹೋಗಿ ಮಸೀದಿ ಕೆಡವಿಕೊಂಡ ಹಾಗೆ
  • ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
  • ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
  • ನಮ್ಮ ದೇವರ ಸತ್ಯ ನಮಗೆ ಗೊತ್ತು.
  • ನನ್ನ ಮಗ ಎಂಟು ವರ್ಷಕ್ಕೆ ದಂಟು ಎಂದ
  • ನರಿ ಕೂಗು ಗಿರಿ ಮುಟ್ಟುತ್ತದೆಯೆ ?
  • ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ
  • ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
  • ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ
  • ನೆಂಟರಿಗೆ ದೂರ ; ನೀರಿಗೆ ಹತ್ತಿರ
  • ನೆಚ್ಚಿನೆಮ್ಮೆ ಕೋಣನನ್ನೀಯಿತು
  • ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
  • ನಿನ್ನ ಹಿತು(ಮುದ್ದು),ನನ್ನ ತಿಂತು
  • ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ
  • ನೆಗಡಿಯಾಯ್ತೆಂದು ಮೂಗು ಕೂಯಿಕೊಂಡರಂತೆ
  • ನೀನು ಮೊಳ ಬಿಟ್ಟರೆ,ನಾನು ಮಾರು ಬಿಡುತ್ತೇನೆ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಪಡುವಣ ಮನೆಗೆ ಮೂಡಣ ದೀಪ
  • ಪರರ ಹಂಗಿಸಿ ಮಂಗ ಅನಿಸಿಕೊಂಡ
  • ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು
  • ಪಾಪ ಅಂದ್ರೆ ಕರ್ಮ ಬರ್ತದೆ
  • ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು
  • ಪಾಪಿ ಸಮುದ್ರ ಹೊಕ್ಕರು ಮೊಣಕಾಲುದ್ದ ನೀರು
  • ಪಾಲಿಗೆ ಬಂದದ್ದು ಪಂಚಾಮೃತ
  • ಪಿಶಾಚಿ ಬಿಟ್ಟರೂ ನಿಶಾಚರ ಬಿಡ
  • ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು
  • ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ
  • ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
  • ಪ್ರಸ್ತಕ್ಕಿಲ್ಲದ ಮಾತು ಹತ್ತುಸಾವಿರವಿದ್ದೇನು
  • ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು
  • ಪಾಂಡವರು ಪಗಡೆಯಾಡಿ ಕೆಟ್ಟರು ; ಹೆಣ್ಣುಮಕ್ಕಳು ಕವಡೆಯಾಡಿ ಕೆಟ್ಟರು
  • ಪಾಲಿಗೆ ಬಂದದ್ದೆ ಪರಮಾನ್ನ.
  • ಪಾಲಿಗೆ ಬಂದದ್ದು ಪಂಚಾಮೃತ
  • ಪಾಪಿ ಚಿರಾಯು
  • ಪಾಪಿ ಧನ ಪ್ರಾಯಶ್ಚಿತ್ತಕ್ಕೆ
  • ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು
  • ಪಾಯಸ ಮಾಡಿ ನಾಯಿ ಬಾಲದಲ್ಲಿ ತೊಳಸಿದ ಹಾಗೆ
  • ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
  • ಪ್ರಥಮ ಚುಂಬನೇ ದಂತ ಭಗ್ನಮ್
  • ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
  • ಪುರಾಣ ಹೇಳೊಕೆ; ಬದನೆಕಾಯಿ ತಿನ್ನೋಕೆ
  • ಪಾಪ ಅಂದ್ರೆ ಕರ್ಮ ಬರ್ತದೆ
  • ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು
  • ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು


ವಿಷಯ-ಪೋಣಿಕೆಗೆ ಹಿಂತಿರುಗಿ

  • ಬಂಗಾರಕ್ಕೆ ಕುಂದಣವಿಟ್ಟಂತೆ
  • ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
  • ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ
  • ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ
  • ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ
  • ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು
  • ಬಡವ ನೀ ಸೆಣಸಿ ಕೆಡಬೇಡ
  • ಬಡವನಿಗೆ ಉಳಿದಷ್ಟೆ ಅಭಿಮಾನ
  • ಬಡವರ ಮಾತು ನುಡಿನುಡಿಗೂ ಬೇಸರ
  • ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ
  • ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು
  • ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು
  • ಬರೀ ಮಾತಾಡಿ ಬಯ್ಯಿಸಿಕೊಂಡ
  • ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
  • ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು
  • ಬಸುರಲ್ಲಿ ಬಂದ ಕೂಸು ಮುದ್ದು
  • ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ
  • ಬಳ್ಳಿಗೆ ಕಾಯಿ ಭಾರವೇ
  • ಬಾಡಿಗೆ ಎತ್ತೆಂದು ಬಡಿದು ಬಡಿದು ಹೂಡಬೇಕೆ
  • ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
  • ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
  • ಬಾಯಲ್ಲಿ ಬೆಲ್ಲ ಕರುಳು ಕತ್ತರಿ
  • ಬಾಲೇರ ಮನಸ್ಸು ನೆಲೆಯಿಲ್ಲ
  • ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ
  • ಬಾಳಿಕೆಗೆಟ್ಟು ಬೆಸಲಾದ ಚೇಳಿನಂತಾದ
  • ಬಾಳಿಬದುಕಿದವ ಕಲಿ(=ವಿದ್ಯೆ)ಕಲಿತ, ಬಾಳಲಾರದವ ಪಾಠ ಕಲಿತ
  • ಬಿಟ್ಟವರ ಕಂಡು ಬಿಟ್ಟು ಬಾಳುಗೆಟ್ಟ
  • ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು.
  • ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
  • ಬಿದ್ದಿನ (=ಅತಿಥಿ, ನೆಂಟ) ಬಂದು ಹಾಳು ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
  • ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
  • ಬಿಳಿ ಆನೆ ಸಾಕಿದ ಹಾಗೆ
  • ಬೀಜ ಸಣ್ಣದಾದರೆ ಮರ ಸಣ್ಣದೋ
  • ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
  • ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
  • ಬೀಳು ಭೂಮಿಗೆ ಬೀಜ ದಂಡ
  • ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
  • ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ
  • ಬೆಂದ ಮನೇಲಿ ಹಿರಿದದ್ದೇ ಲಾಭ
  • ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ
  • ಬೆಕ್ಕಿನ ಕನಸಿನಲ್ಲಿ ಬರೀ ಇಲಿಗಳೇ
  • ಬೆಣ್ಣೆಯೊಳಗಿನ ಕೂದಲು ತೆಗೆದಂತೆ
  • ಬೆನ್ನಹಿಂದೆ ಬಿದ್ದು (ಓಡಿ)ಬನ್ನ ಪಟ್ಟ
  • ಬೆರಳು ತೋರುದ್ರೆ ಅಂಗೈನೇ ನುಂಗಿದಂತೆ
  • ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ
  • ಬೆಲ್ಲವಿಲ್ಲದಿದ್ದರೆ ಬೆಲ್ಲದಂಥ ಮಾತೂ ಇಲ್ಲವೇ?
  • ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
  • ಬೇಕೆಂಬುದು ಬಾಳು ಸಾಕೆಂಬುದು ಸಾವು
  • ಬೇಡಿದರೆ ಇಲ್ಲ ಅನ್ನೋದ್ ಕಷ್ಟ ನೀಡುವರ ಬೇಡ ಅನ್ನೋದ್ ಕಷ್ಟ
  • ಬೇಲಿನೆ ಎದ್ದು ಹೊಲ ಮೇಯಿತಂತೆ
  • ಬೇವು ಕಾಗೆಗೆ ಇಂಪು ಮಾವು ಕೋಗಿಲೆಗೆ ಇಂಪು
  • ಬೇವು ಕಾಗೆಗೆ ಇಷ್ಟ , ಮಾವು ಕೋಗಿಲೆಗೆ ಇಷ್ಟ
  • ಬೋನದ ಬುತ್ತಿ ತಪ್ಪಿ ಚಿತ್ತವಲ್ಲಭೆಯನ್ನು ಮರೆಸಿತ್ತು
  • ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
  • ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
  • ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ
  • ಭಲೆ ಜಟ್ಟಿ ಅಂದ್ರೆ ಕೆಮ್ಮಣ್ಣು ಮುಕ್ಕಿದ
  • ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ
  • ಬಾಣಲೆಯಿಂದ ಬೆಂಕಿಗೆ
  • ಬಾಲ ಸುಟ್ಟ ಬೆಕ್ಕಿನ ಹಾಗೆ
  • ಬಾಯಲ್ಲಿ ಬೆಣ್ಣೆ;ಬಗಲಲ್ಲಿ ದೊಣ್ಣೆ.
  • ಬಾಯಿ ಬಿಟ್ಟರೆ ಬಣ್ಣಗೇಡು
  • ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
  • ಬೇಲಿಯೇ ಎದ್ದು ಹೊಲ ಮೇದಂತೆ
  • ಬೇಲಿಯೇ ಎದ್ದು ಹೊಲ ಮೇಯ್ದಂತೆ
  • ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು
  • ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
  • ಬಡ್ಡಿ ಬಾಯಿಗಂಜ್ತೀಯೋ,ದೊಡ್ಡೆತ್ತಿನ ಕೋಡಿಗಂಜ್ತೀಯೋ
  • ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ ’ಭುಸ್’ ಅಂತಂತೆ
  • ಬಡವ ನೀ ಮಡಗಿದ ಹಾಗಿರು
  • ಬಡವನ ಕೋಪ ದವಡೆಗೆ ಮೂಲ
  • ಬಡವನ ಸಿಟ್ಟು ದವಡೆಗೆ ಮೂಲ
  • ಬಡವರ ಮನೆ ಊಟ ಚೆನ್ನ, ದೊಡ್ಡವರ ಮನೆ ನೋಟ ಚೆನ್ನ
  • ಬಡವೆ ಸೀರೆ ಉಡದೆ ಮಾಸಿತು
  • ಬಂದ ದಾರಿಗೆ ಸುಂಕವಿಲ್ಲ
  • ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
  • ಬೈದು ಹೇಳಿದವರು ಬದುಕಕ್ಕೆ ಹೇಳಿದರು
  • ಬಲ್ಲವನೇ ಬಲ್ಲ ಬೆಲ್ಲದ ರುಚಿಯ
  • ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
  • ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯ್ತು
  • ಬಸವನ ಹಿಂದೆ ಬಾಲ,ಸೂಜಿ ಹಿಂದೆ ದಾರ
  • ಬೆಳ್ಳಗಿರೋದೆಲ್ಲಾ ಹಾಲಲ್ಲ
  • ಬೆಳ್ಳಗಿರೋದೆಲ್ಲ ಹಾಲಲ್ಲ
  • ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
  • ಬೆಳೆಯುವ ಪೈರು ಮೊಳಕೆಯಲ್ಲಿ
  • ಬೆಂದ ಮನೆಗೆ ಹಿರಿದದ್ದೇ ಲಾಭ
  • ಬೆಂಕಿ ಇಲ್ಲದೆ ಹೊಗೆ ಏಳಲ್ಲ
  • ಬೆಣ್ಣೇಲಿ ಕೂದಲು ತೆಗೆದ ಹಾಗೆ
  • ಬೆಟ್ಟ ಅಗೆದು ಇಲಿ ಹಿಡಿದಂತೆ
  • ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ
  • ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
  • ಬೆರಳು ತೋರಿಸಿದರೆ ಹಸ್ತ ನುಂಗಿದರಂತೆ
  • ಬಿಡಿಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
  • ಬಿಟ್ಟಿ ಬಂದದ್ದಾದರೆ ನನಗೂ ಇರಲಿ,ನಮ್ಮ ತಾತಂಗೂ ಇರಲಿ.
  • ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ
  • ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ
  • ಬೊಗಳುವ ನಾಯಿ ಕಚ್ಚುವುದಿಲ್ಲ
  • ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
  • ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
  • ಬಾಯಲ್ಲಿ ಬೆಲ್ಲ ಕರುಳು ಕತ್ತರಿ
  • ಬೇಲಿನೆ ಎದ್ದು ಹೊಲ ಮೇಯಿತಂತೆ
  • ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
  • ಬಂಟರ ಅಬ್ಬರ ಸೇವಿನ ಗೊಬ್ಬರ
  • ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
  • ಬಿದ್ದರೂ ಮೀಸೆ ಮಣ್ಣಾಗಲಿಲ್ಲ
  • ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
  • ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
  • ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್ತಂತೆ
  • ಭಟ್ಟನ ಮಗಳಿಗೆ ಹುಟ್ಟಲು ದಿನವಿಲ್ಲ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ
  • ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
  • ಮಂತ್ರಿ‌ಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ
  • ಮಂದಾಳಿಗೊಂದು ಮುಂದಾಳು
  • ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು
  • ಮದುವೆ ಮಾಡಿ ನೋಡು ಮನೆ ಕಟ್ಟಿ ನೋಡು
  • ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
  • ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
  • ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ
  • ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
  • ಮರ ಕಡಿದು ಮೈಮೇಲೆ ಹಾಕಿಕೊಂಡ್ರಂತ
  • ಮರಗಿಣಿಯ ಕೂಡೆ ಆಡಿ ಅರಗಿಣಿ ಕೇಟ್ಟಿತು
  • ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ
  • ಮಳೆಗಾಲದೇಲಿ ಚಿಗಿಯೂದಿಲ್ಲ ಬೇಸಿಗೇಲಿ ಒಣಗೂದಿಲ್ಲ
  • ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
  • ಮಾಡಿದ ಕರ್ಮ ಬೆನ್ನಾಡಿ ಬಂತು
  • ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು
  • ಮಾಡಿದ ಪಾಪ ದಾನದಿಂದ ಹೋದೀತೆ
  • ಮಾಡಿದ್ದುಣ್ಣೋ ಮಾರಾಯ
  • ಮಾಡುವವ ಉತ್ತಮ ಆಡಿ ಮಾಡದವ ಅಧಮ
  • ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
  • ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
  • ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ
  • ಮಾತಿಗೆ ಮಾತುಗಳ ಓತು ಸಾಸಿರ ಉಂಟು
  • ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು
  • ಮಾತಿನ ಬೊಮ್ಮ ತೂತಾದ ಮಡಕೆಯ ಪರಿ
  • ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
  • ಮಾತು ಬೆಳ್ಳಿ, ಮೌನ ಬಂಗಾರ
  • ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
  • ಮಾನಿಷ್ಟರು ಮಾನಕ್ಕೆ ಅಂಜಿದರೆ ಮಾನಗೇಡಿ ತನಗೇ ಅಂಜಿದರು ಅಂದನಂತೆ
  • ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ ಕಣ್ಣು ಕುರಿ ಮ್ಯಾಲೆ
  • ಮಾರಿಯ ಹೋತ ತೋರಣದ ಚಿಗುರು ಬಯಸಿತಂತೆ
  • ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
  • ಮಿಂದರೆ ಮೈಯ ಕೊಳೆ ಹೋಯ್ತು
  • ಮಿಂದು ಮೈಲಿಗೆ ಉಡೊದಾದ್ರೆ ಜಳಕದ ದಂದುಗವೇಕೆ
  • ಮುಚ್ಚಿ ಹೇಳಿದರೆ ಒಗಟು ಬಿಚ್ಚಿ ಹೇಳಿದರೆ ಒರಟು
  • ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
  • ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು
  • ಮುದುಕೀ ನಿನ್ನಾಟ ಮುಂದೈತಿ
  • ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
  • ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
  • ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
  • ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
  • ಮೂಗು ಹಿಡಿದರೆ ಬಾಯಿ ತಾನೇ ತೆರೆಯುವುದು
  • ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
  • ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
  • ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು
  • ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
  • ಮೊಂಡ ಕೊಡಲಿ ರಟ್ಟೆಗೆ ಮೂಲ
  • ಮೊಂಡ ಮಾವನಿಗೊಬ್ಬ ಭಂಡ ಅಳಿಯ
  • ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
  • ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು
  • ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?
  • ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
  • ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
  • ಮಾತು ಬೆಳ್ಳಿ, ಮೌನ ಬಂಗಾರ
  • ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
  • ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
  • ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
  • ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
  • ಮದುವೆ ಮಡಿನೋಡು ಮನೆ ಕಟ್ಟಿ ನೋಡು
  • ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
  • ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ
  • ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
  • ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
  • ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
  • ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
  • ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
  • ಮಾಡೋದು ಅನಾಚಾರ ; ಮನೆ ಮುಂದೆ ಬೃಂದಾವನ
  • ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
  • ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ
  • ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ
  • ಮಾಡಿದೋರ ಪಾಪ ಆಡಿದೋರ ಬಾಯಲ್ಲಿ
  • ಮಾಡಿದರೆ ಮನೆ ; ಹೂಡಿದರೆ ಒಲೆ
  • ಮಾಡಿದ್ದುಣ್ಣೋ ಮಹರಾಯ
  • ಮಾಡಿದುಣ್ಣೊ ಮಾರಾಯ
  • ಮಾಘ ಕಾವ್ಯ ಮಗನಿಗೆ ಬೇಡ
  • ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ್ ಕಣ್ಣು ಕುರಿ ಮ್ಯಾಲೆ.
  • ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು
  • ಮಾತು ಬೆಳ್ಳಿ; ಮೌನ ಬಂಗಾರ
  • ಮಾತು ಮನೆ ಕೆಡಿಸಿತು; ತೂತು ಒಲೆ ಕೆಡಿಸಿತು
  • ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ
  • ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
  • ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು
  • ಮೋಟಾಳಿಗೊಂದು ಚೋಟಾಳು
  • ಮೂಗಿಗಿಂತ ಮೂಗುತಿ ಭಾರ
  • ಮೂರೂ ಬಿಟ್ಟೋನು,ಊರಿಗೆ ದೊಡ್ಡೋನು
  • ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು
  • ಮೂರು ವರ್ಷಕ್ಕೆ ಬಂದಿದ್ದು ಮೂವತ್ತು ವರ್ಷಕ್ಕೆ ಬಂತು
  • ಮಘೆ ಮಳೆ ಬಂದಷ್ಟೂ ಒಳ್ಳೇದು, ಮನೆ ಮಗ ಉಂಡಷ್ಟೂ ಒಳ್ಳೇದು
  • ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ
  • ಮಳೆ ಹುಯ್ದರೆ ಕೇಡಲ್ಲ; ಮಗ ಉಂಡರೆ ಕೇಡಲ್ಲ
  • ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
  • ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
  • ಮಂತ್ರಕ್ಕಿಂತ ಉಗುಳೇ ಜಾಸ್ತಿ
  • ಮದುವೇಲಿ ಗಂಡು, ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
  • ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
  • ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ
  • ಮಗೂನ ಚಿವುಟೋದು, ತೊಟ್ಟಿಲು ತೂಗೋದು
  • ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ
  • ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ
  • ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ)
  • ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
  • ಮನೇಲಿ ಇಲಿ,ಬೀದೀಲಿ ಹುಲಿ
  • ಮನಸ್ಸಿದ್ದರೆ ಮಾರ್ಗ
  • ಮನೆ ದೇವರನ್ನ ಮೂಲೆಗಿಟ್ಟು ಬೆಟ್ಟದ ದೇವರಿಗೆ ಬುತ್ತಿ ಹೊತ್ತಂತೆ.
  • ಮನೆ ತುಂಬ ಮುತ್ತಿದ್ದರೆ ...ಗೂ ಪೋಣಿಸಿಕೊಂಡರಂತೆ
  • ಮನೆಗೆ ಮಾರಿ, ಪರರಿಗೆ ಉಪಕಾರಿ
  • ಮೆತ್ತಗಿದ್ದಲ್ಲಿ ಮತ್ತೊಂದು ಗುದ್ದಲಿ
  • ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
  • ಮಿಂಚಿಹೋದ ಕಾರ್ಯಕ್ಕೆ ಚಿಂತಿಸಿ ಫಲವೇನು ?
  • ಮೊದಲಿದ್ದವಳೇ ವಾಸಿ ಎಬ್ಬಿಸಿದರೆ ಉಣ್ಣೋಳು
  • ಮೊಲ ಎಬ್ಬಿಸಿ ...ಕ್ಕೆ ಕೂತರು
  • ಮುಖ ನೋಡಿ ಮಣೆ ಹಾಕು
  • ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ
  • ಮುಂದೆ ಬರೋ ಕೋಡಿಗಿಂತ ಹಿಂದೆ ಬರೋ ಬಾಲಾನೇ ವಾಸಿ
  • ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ
  • ಮುದಿ ... ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
  • ಮುಸುಕಿನೊಳಗೆ ಗುದ್ದಿಸಿಕೊಂಡಂತೆ
  • ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.



ವಿಷಯ-ಪೋಣಿಕೆಗೆ ಹಿಂತಿರುಗಿ

  • ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
  • ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
  • ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
  • ಯಾರನ್ನ ನಂಬಿದರು ಆರೈದು ನಂಬಬೇಕು
  • ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು
  • ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
  • ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
  • ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
  • ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
  • ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
  • ಯೋಗ ಇದ್ದಷ್ಟೇ ಭೋಗ
  • ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
  • ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
  • ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
  • ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
  • ಯಾರದೊ ದುಡ್ಡಿನಲ್ಲಿ ಯೆಲ್ಲಮನ್ನ ಜಾತ್ರೆ
  • ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ
  • ಯಂಕ,ಸೀನ,ನೊಣ ಅಂತ ಮನೇಲಿ ಮೂರೇ ಜನ
  • ಯಥಾ ರಾಜಾ ತಥಾ ಪ್ರಜಾ
  • ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ
  • ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
  • ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
  • ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
  • ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
  • ಯೋಗ ಇದ್ದಷ್ಟೇ ಭೋಗ
  • ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
  • ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
  • ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
  • ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
  • ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
  • ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ


ವಿಷಯ-ಪೋಣಿಕೆಗೆ ಹಿಂತಿರುಗಿ

  • ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
  • ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
  • ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
  • ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ
  • ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ
  • ರಸಿಕನ ನುಡಿ ತಿಂಗಳ ಬೆಳಕಿನಂತೆ
  • ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
  • ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
  • ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
  • ರಾಜ ಇರೋತನಕ ರಾಣಿ ಭೋಗ
  • ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
  • ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
  • ರಾಮಾಯ ಸ್ವಸ್ತಿ, ರಾವಣಾಯ ಸ್ವಸ್ತಿ
  • ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
  • ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ
  • ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
  • ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
  • ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲಿಲ್ಲ
  • ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
  • ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
  • ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
  • ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು
  • ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
  • ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ
  • ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?
  • ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದರು
  • ರವಿ ಕಾಣದ್ದನ್ನು ಕವಿ ಕಂಡ
  • ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
  • ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
  • ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
  • ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
  • ರಾಜ ಇರೋತನಕ ರಾಣಿ ಭೋಗ
  • ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
  • ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
  • ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
  • ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
  • ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
  • ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
  • ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು


ವಿಷಯ-ಪೋಣಿಕೆಗೆ ಹಿಂತಿರುಗಿ

  • ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
  • ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
  • ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
  • ಲಕ್ಷ್ಮಿ ಚಂಚಲೆ
  • ಲಲನೆಯರ ಒಲುಮೆ ತೊಲಗಿದರೆ ಇಲ್ಲ
  • ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
  • ಲಿಂಗ ಹರಿದ ಮೇಲೆ ಜಂಗಮನ ಹಂಗೇನು
  • ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
  • ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
  • ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
  • ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
  • ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
  • ಲಿಂಗ ಹರಿದ ಮೇಲೆ ಜಂಗಮನ ಹಂಗೇನು
  • ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು
  • ಲಂಘನಮ್ ಪರಮೌಷಧಮ್
  • ಲೊಳಲೊಟ್ಟೆ ಗಂಡನಿಗೆ ಹಳಸಿದ ಊಟ


ವಿಷಯ-ಪೋಣಿಕೆಗೆ ಹಿಂತಿರುಗಿ

  • ವಜ್ರಕ್ಕೆ ಸಾಣಿ ಹಿಡಿದಂತೆ
  • ವರಕವಿಗಳ ಮುಂದೆ ನರಕವಿಗಳು ವಿದ್ಯೆ ತೋರಬಾರದು
  • ವಶಗೆಡದೆ ಹಸಗೆಡಲ್ಲ
  • ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ
  • ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
  • ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ
  • ವಿಧಿ ಕಾಣದ ಎಡೆಗಳಿಲ್ಲ
  • ವಿಧಿ ಮುನಿದರೆ ಸರಿ ಬೆಸವಾಯ್ತು
  • ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
  • ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
  • ವೇದ ಸುಳ್ಳಾದರೂ ಗಾದೆ ಸುಳ್ಳಾಗದು
  • ವೈದ್ಯರ ಹತ್ತಿರ, ವಕೀಲರ ಹತ್ತಿರ ಸುಳ್ಳು ಹೇಳಬೇಡ
  • ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
  • ವಿನಾಶ ಕಾಲೇ ವಿಪರೀತ ಬುದ್ಧಿ
  • ವ್ರತ ಕೆಟ್ಟರೂ ಸುಖ ಪಡಬೇಕು
  • ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
  • ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಶಾನುಭೋಗರ ಮನೇಲಿ ಶೋಭನ ಅಂದ್ರೆ ಪಟೇಲನ ಮನೇಲಿ ನಿದ್ದೆ ಮಾಡ್ಲಿಲ್ವಂತೆ
  • ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
  • ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
  • ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
  • ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
  • ಶಂಖದಿಂದ ಬಂದರೇ ತೀರ್ಥ
  • ಶಂಖದಿಂದ ಬಿದ್ದರೆ ತೀರ್ಥ
  • ಶರಣರ ಬದುಕನ್ನು ಅವರ ಮರಣದಲ್ಲಿ ನೋಡು
  • ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು
  • ಶೆಟ್ಟಿ ಬಿಟ್ಟಲ್ಲೆ ಪಟ್ಣ
  • ಶಿಸ್ತುಗಾರ ಪುಟ್ಟಶಾಮಿ
  • ಶಿವ ಪೂಜೇಲಿ ಕರಡಿ ಬಿಟ್ಟಂಗೆ
  • ಶಿವಪೂಜೇಲಿ ಕರಡಿಗೆ ಬಿಟ್ಟ ಹಾಗೆ
  • ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
  • ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
  • ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
  • ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
  • ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
  • ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
  • ಸಂತೇಲಿ ಮಂತ್ರ ಹೇಳಿದಂಗೆ
  • ಸಂತೇಲಿ ಮನೇ ಮಾಡಿ ಸದ್ದಿಗಂಜೂದೇ
  • ಸಂದೀಲಿ ಸಮಾರಾಧನೆ ಮಾಡ್ದಂಗೆ
  • ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
  • ಸಜ್ಜನರ ಸಂಗ ಹೆಜ್ಜೇನು ಸವಿದಂತೆ
  • ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
  • ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
  • ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
  • ಸತ್ತು ಕೊಳ್ಳೋ ಸೊರ‍್ಗಕ್ಕಿಂತ ಬದುಕಿ ಕೊಳ್ಳೋ ನರಕ ಲೇಸು
  • ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
  • ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು
  • ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
  • ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
  • ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
  • ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
  • ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
  • ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
  • ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ
  • ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
  • ಸಾದೆತ್ತಿಗೆ ಎರಡು ಹೇರು (ಹೊರೆ)
  • ಸಾಮವೇದದ ಗಾನ ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
  • ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
  • ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
  • ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
  • ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
  • ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ
  • ಸಾಲ ಕೊಳ್ಳುವಾಗ ಹಾಲು ಕುಡಿದಂತೆ, ಸಾಲ ತಿರುಗಿ ಕೊಡುವಾಗ ಕಿಬ್ಬದಿ ಕೀಲು ಮುರಿದಂತೆ
  • ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
  • ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
  • ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
  • ಸಾವಿರ ಕೊಟ್ಟರೂ ಸವತಿ ಮನೆ ಬೇಡ
  • ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
  • ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
  • ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
  • ಸಿಟ್ಟು ಬಂದರೆ ಪಡಿ ಹಿಟ್ಟು ಮುಕ್ಕು
  • ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ
  • ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
  • ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು
  • ಸಿರಿ ಸೋಂಕಿದವರ ಪರಿ ಬೇರೆ
  • ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ
  • ಸಿರಿತನ ಇರೂತನ ಹಿರಿತನ ಘನ
  • ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
  • ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
  • ಸಿರಿಯವ್ವನದ ಹೆಣ್ಣು ಸಕ್ಕರೆ ಬೊಂಬೆಯಂತೆ
  • ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
  • ಸುಡುವ ಮನೆಯ ಗಳ ಹಿರಿದಂತೆ
  • ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ
  • ಸುಳ್ಳು ದೇವರಿಗೆ ಕಳ್ಳ ಪೂಜಾರಿ
  • ಸುಳ್ಳು ಹೇಳಿದರೂ ನಿಜದ ತಲೆಯ ಮೇಲೆ ಹೊಡೆದಂಗೆ ಹೇಳಬೇಕು
  • ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
  • ಸೂಳೆ ಪಾಪ ಸನ್ಯಾಸಿಗೆ
  • ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
  • ಸೇರಿಗೆ ಸವ್ವಾ ಸೇರು
  • ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
  • ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ
  • ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
  • ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
  • ಸಾವಿರ ಚಿತ್ತಾರ ಮಸಿ ನುಂಗಿತು
  • ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
  • ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
  • ಸಾವಿರ ಉಳಿ ಪೆಟ್ಟು,ಒಂದು ಚಿತ್ತಾರ
  • ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ.
  • ಸೇರಿಗೆ ಸವ್ವಾಸೇರು
  • ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
  • ಸೋದರ ಮಾವನ ಚಾಳು ತುಂಡಪುಂಡರ ಪಾಲು
  • ಸೂಳೆ ಕೈಲಿ ಜೋಳ ಕುಟ್ಟಿಸಿದ ಹಾಗೆ
  • ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
  • ಸೂಳೆಗೆ ಮದುವೆ ಮಾಡಿದ ಹಾಗೆ
  • ಸಂದೀಲಿ ಸಮಾರಾಧನೆ
  • ಸಂಕಟ ಬಂದಾಗ ವೆಂಕಟರಮಣ
  • ಸಂಸಾರ ಗುಟ್ಟು; ವ್ಯಾಧಿ ರಟ್ಟು
  • ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
  • ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ.
  • ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ
  • ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ
  • ಸದಾಶಿವನಿಗೆ ಅದೇ ಧ್ಯಾನ
  • ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
  • ಸಗಣಿಯವನೊಡನೆ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು
  • ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ
  • ಸಜ್ಜನರ ಸಂಗ ಹೆಜ್ಜೇನು ಸವಿದಂತೆ
  • ಸಲಿಗೆ ಕೊಟ್ಟ ಸೊಣಗ ಸಟ್ಟುಗ ನೆಕ್ಕಿತಂತೆ
  • ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
  • ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
  • ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
  • ಸನ್ಯಾಸಿ ಬೆಕ್ಕು ಸಾಕಿದ ಹಾಗೆ
  • ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
  • ಸರಿಸರಿಯಾಗಿದ್ರೆ,ಪರಿಪರಿ ನೆಂಟರು
  • ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
  • ಸುಂಕದವನ ಮುಂದೆ ಸುಖದುಃಖವೇ
  • ಸ್ವತಂತ್ರವೋ,ಸ್ವರ್ಗಲೋಕವೋ
  • ಸಾದೆತ್ತಿಗೆ ಎರಡು ಹೇರು (ಹೊರೆ)
  • ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
  • ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
  • ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
  • ಸಾವಿರ ಕೊಟ್ಟರೂ ಸವತಿ ಮನೆ ಬೇಡ
  • ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
  • ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
  • ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
  • ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
  • ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
  • ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
  • ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
  • ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
  • ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
  • ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
  • ಸಂದೀಲಿ ಸಮಾರಾಧನೆ ಮಾಡ್ದಂಗೆ
  • ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
  • ಸಂತೇಲಿ ಮಂತ್ರ ಹೇಳಿದಂಗೆ
  • ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
  • ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
  • ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
  • ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
  • ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
  • ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
  • ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
  • ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
  • ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
  • ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
  • ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
  • ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
  • ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
  • ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
  • ಸುಳ್ಳು ದೇವರಿಗೆ ಕಳ್ಳ ಪೂಜಾರಿ
  • ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ


ವಿಷಯ-ಪೋಣಿಕೆಗೆ ಹಿಂತಿರುಗಿ

  • ಹಂಗು ತೊರೆದ ಮೇಲೆ ಲಿಂಗದ ಪರಿವೆ ಏನು
  • ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
  • ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು
  • ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು
  • ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
  • ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ
  • ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
  • ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
  • ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
  • ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
  • ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
  • ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
  • ಹಣ ಇಲ್ಲದವ ಹೆಣಕ್ಕಿಂತ ಕಡೆ
  • ಹಣ ಎರವಲು ತಂದು ಮಣ ಉರುವಲು ಕೊಂಡ
  • ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
  • ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
  • ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
  • ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
  • ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
  • ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
  • ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ
  • ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
  • ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
  • ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ
  • ಹರ್ಷದ ಕೂಳು ನೆಚ್ಚಿಕೊಂಡು ವರ್ಷದ ಕೂಳು ತಪ್ಪಿಸ್ಕೊಂಡ
  • ಹರ ಮುನಿದರೆ ಗುರು ಕಾಯ್ವ
  • ಹರಕಿನಲ್ಲಿ ಇಲಿ ಕಡಿಯಿತು
  • ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
  • ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
  • ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
  • ಹರೆಯಕ್ಕೆ ಬಂದಾಗ ಹಂದಿನೂ ಚಂದ
  • ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
  • ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
  • ಹಸನಾದ ಮಾತಿಗೆ ಜೀವ ಬೆಸನಾಯ್ತು
  • ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
  • ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
  • ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
  • ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
  • ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
  • ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
  • ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
  • ಹಾದರ ಹಾಲು ಸಕ್ಕರೆಯಂತೆ,ಬಯಲಾದರೆ, ಬೇವಿನ ಸಾರದಂತೆ
  • ಹಾದಿ ತಪ್ಪಿದವನಿಗೆ ಹದಿನೆಂಟು ಹಾದಿ
  • ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು.
  • ಹಾದೀಲಿ ಹೋಗುವವನ ಕೆಣಕ ಅವನು ಬಂದು ನಿನ್ನ ತದಕ
  • ಹಾಯೋ ಎತ್ತು ಹಾಯ್ದರೂ ಬಂತು ಬಿಟ್ಟರೂ ಬಂತು
  • ಹಾಯ್ದೆ ಇದ್ದರೂ ಎತ್ತಿನ ಕೊಂಬು ಉದ್ದ
  • ಹಾರದ ಕೋತಿಗೆ ಮುಪ್ಪಾಗ ಬೆಲ್ಲ ತಿನ್ನಿಸಿದರಂತೆ
  • ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ
  • ಹಾರುವ ಆಳಲ್ಲ, ಬಾಳೆ ದಡಿಯಲ್ಲ
  • ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ
  • ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
  • ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ.
  • ಹಾರೋ ಹಕ್ಕಿ ಪುಕ್ಕ ಎಣಿಸಿದಂತೆ
  • ಹಾರೋ ಹಕ್ಕಿಗೆ ಹಾದರ ಕಟ್ಟಿದರು.
  • ಹಾರ‍್ಸೋನೋ ತೀರ‍್ಸೋನೋ.
  • ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
  • ಹಾಲಲ್ಲಾದ್ರೂ ಅದ್ದು, ನೀರಲ್ಲಾದ್ರೂ ಅದ್ದು.
  • ಹಾಲಿಗಿಂತ ಕೆನೆ ರುಚಿ
  • ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
  • ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
  • ಹಾಲು ಕಾಯಿಸ್ಕೊಂಡು ನಾನಿದ್ದೆ ಹಲ್ಲು ಕಿರ‍್ಕೊಂಡು ನೀ ಬಂದೆ.
  • ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
  • ಹಾಲು ಬಿಟ್ಟವರ ಮನೆಗೆ ಸೀಬಿ ಅಂದಂಗೆ.
  • ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
  • ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
  • ಹಾವಿಗೆ ಹಾಲೆರೆದರೇನು ಫಲ
  • ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
  • ಹಾಸಿಗೆ ಇದ್ದಷ್ಟು ಕಾಲು ಚಾಚು
  • ಹಾಳೂರಿಗೆ ಉಳಿದವನೇ ಗೌಡ
  • ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
  • ಹಿಂದಲ ಮಾತು ಮರಿ ಮುಂದಲ ಬಾಳು ಅರಿ
  • ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
  • ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
  • ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
  • ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
  • ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
  • ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
  • ಹಿರೀ‌ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
  • ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ
  • ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
  • ಹುಟ್ಟಿದವಗೆ ಸಾವು ತಪ್ಪದು
  • ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
  • ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
  • ಹುಟ್ಟು ಸಾವು ದಿಟವೇ ಆದರೂ ಹೆಜ್ಜೆ ಹೆಜ್ಜೆಗೆ ಅಂಜೂದ್ ತಪ್ಪಲಿಲ್ಲ
  • ಹುಟ್ಟುವವನ ಅಣ್ಣ ಬೆಳೆಯುವವನ ತಮ್ಮ
  • ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
  • ಹುಣ್ಣು ಮಾದರೂ ಕಲೆ ಮಾದೀತೇ
  • ಹುತ್ತ ಬಡಿದರೆ ಹಾವು ಸಾಯುವುದೇ
  • ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
  • ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ
  • ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
  • ಹೂವ ತರುವ ಮನೆಗೆ ದೇವ ಹುಲ್ಲು ಹೊರುವ
  • ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು
  • ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ
  • ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
  • ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
  • ಹೆಂದತಿಯಿಲ್ಲದ ಮನೆ ದೇವರಿಲ್ಲದ ಗುಡಿ
  • ಹೆಡ್ಡಾಳಾದ್ರೂ ದೊಡ್ಡಾಳು ಮೇಲು
  • ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
  • ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ
  • ಹೆಣ್ಣಿದ್ದ ಮನೆಗೆ ಎಡತಾಕಿ ಅಣ್ಣಯ್ಯ ಮಣ್ಣಾಗಿ ಹೋದ
  • ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
  • ಹೆಣ್ಣಿನ ಬಾಳು ಕಣ್ಣೀರಿನ ಗೋಳು
  • ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು
  • ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು
  • ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
  • ಹೆಣ್ಣು ಜಲ್ಮಕ್ಕೆ ಹೆಜ್ಜೆಗೊಂದು ಮುಳ್ಳು
  • ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
  • ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
  • ಹೆಣ್ಣು ಹೊನ್ನು ಮಣ್ಣು ಇನ್ನೊಬರ ಕೈ ಸೇರಿದರೆ ಹೋದಂತೆ
  • ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
  • ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
  • ಹೆತ್ತವರು ಹೆಸರಿಕ್ಕ ಬೇಕು
  • ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
  • ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
  • ಹೇಮಗೇಡಿ ನೇಮ ಬೆಳಗಿದ
  • ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
  • ಹೇಳೊದು ವೇದ ಹಾಕೊದು ಗಾಳ
  • ಹೊಕ್ಕು ಬಳಸಿದರೆ ನಂಟು
  • ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
  • ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
  • ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
  • ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
  • ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು
  • ಹೊತ್ತಿರುವಾಗಲೇ ಗೊತ್ತು ಸೇರಬೇಕು
  • ಹೊತ್ತು ಕಳೆದರೆ ಮತ್ತೆ ಬಾರದು
  • ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
  • ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು
  • ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
  • ಹೊಲಬನರಿತು ನುಡಿದ ಮಾತು ಫಲ ಪಕ್ವವಾದಂತೆ
  • ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ
  • ಹೊಳೆಗೆ ಸುರಿದರೂ ಅಳೆದು ಸುರಿ
  • ಹೋದ ಬದುಕಿಗೆ ಹನ್ನೆರಡು ದೇವರು
  • ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
  • ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
  • ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
  • ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
  • ಹಾಳೂರಿಗೆ ಉಳಿದವನೇ ಗೌಡ
  • ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
  • ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
  • ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
  • ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
  • ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
  • ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
  • ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
  • ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
  • ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
  • ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
  • ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
  • ಹೇಳೊದು ವೇದ ಹಾಕೊದು ಗಾಳ
  • ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
  • ಹೋದ ಬದುಕಿಗೆ ಹನ್ನೆರಡು ದೇವರು
  • ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
  • ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
  • ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
  • ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
  • ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
  • ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
  • ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
  • ಹಣ ಎರವಲು ತಂದು ಮಣ ಉರುವಲು ಕೊಂಡ
  • ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
  • ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
  • ಹಣ ಇಲ್ಲದವ ಹೆಣಕ್ಕಿಂತ ಕಡೆ
  • ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
  • ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
  • ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
  • ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
  • ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
  • ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
  • ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
  • ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
  • ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
  • ಹರೆಯಕ್ಕೆ ಬಂದಾಗ ಹಂದಿನೂ ಚಂದ
  • ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
  • ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
  • ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
  • ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
  • ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
  • ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
  • ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
  • ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
  • ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
  • ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
  • ಹೆಡ್ಡಾಳಾದ್ರೂ ದೊಡ್ಡಾಳು ಮೇಲು
  • ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
  • ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
  • ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
  • ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
  • ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
  • ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
  • ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
  • ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
  • ಹೆತ್ತವರು ಹೆಸರಿಕ್ಕ ಬೇಕು
  • ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
  • ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
  • ಹಿರೀ‌ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
  • ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
  • ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
  • ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
  • ಹೊಳೆಗೆ ಸುರಿದರೂ ಅಳೆದು ಸುರಿ
  • ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
  • ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
  • ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
  • ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
  • ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
  • ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
  • ಹುಣ್ಣಿಮೆ ಬರುವನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
  • ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
  • ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
  • ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
  • ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
  • ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
  • ಹುತ್ತ ಬಡಿದರೆ ಹಾವು ಸಾಯುವುದೇ
  • ಹಾಡಿದ್ದೇ ಹಾಡಿದ ಕಿಸಬಾಯಿ ದಾಸ
  • ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
  • ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ
  • ಹಾಳೂರಿಗೆ ಉಳಿದವನೇ ಗೌಡ
  • ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
  • ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
  • ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
  • ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
  • ಹಾಲಿನ ದುಡ್ಡು ಹಾಲಿಗೆ;ನೀರಿನ ದುಡ್ಡು ನೀರಿಗೆ
  • ಹಾಲಿನಲ್ಲಿ ಹುಳಿ ಹಿಂಡಿದಂತೆ
  • ಹಾಲು ಕುಡಿದ ಮಕ್ಕಳೇ ಬದುಕೊಲ್ಲ; ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೇ ?
  • ಹಾಸಿಗೆ ಇದ್ದಷ್ಟು ಕಾಲು ಚಾಚು
  • ಹಾವು ಸಾಯಬಾರದು , ಕೋಲು ಮುರೀಬಾರದು
  • ಹೇಳೋದು ಶಾಸ್ತ್ರ, ಹಾಕೋದು ಗಾಣ
  • ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ
  • ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
  • ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ
  • ಹೋದ ಪುತ್ತ ಬಂದ ಪುತ್ತ ಪುಟ್ಟನ ಕಾಲಿಗೆ ನೀರಿಲ್ಲ
  • ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
  • ಹೂಸಿದವರು ‌ಯಾರು ಅಂದರೆ ಮಾಸಿದ ಸೀರೆಯವರು
  • ಹೂವಿನ ಜೊತೆ ದಾರ ಮುಡಿಯೇರಿತು
  • ಹೂವಿನಿಂದ ನಾರಿಗೂ ಸ್ವರ್ಗ
  • ಹಳೇ ಗಂಡನ ಪಾದವೇ ಗತಿ
  • ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
  • ಹಂಚಿದವರಿಗೆ ಹಲ್ಲು ಬಾಯಿ
  • ಹಂಚು ಕಾಣದ ಕೈ ಕಂಚು ಕಾಣ್ತು
  • ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
  • ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
  • ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
  • ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ
  • ಹಬ್ಬದ ದಿನವೂ ಹಳೇ ಗಂಡನೇ ?
  • ಹದರಿದವರ ಮೇಲೆ ಕಪ್ಪೆ ಎಸೆದರು
  • ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
  • ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ
  • ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
  • ಹನಿಹನಿಗೂಡಿದರೆ ಹಳ್ಳ; ತೆನೆತೆನೆಗೂಡಿದರೆ ಬಳ್ಳ
  • ಹನುಮಂತರಾಯ ಹಗ್ಗ ತಿನ್ನುವಾಗ ಪೂಜಾರಿ ಶಾವಿಗೆ ಬೇಡಿದನಂತೆ
  • ಹರಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
  • ಹಸಿ ಗೋಡೆ ಮೇಲೆ ಹರಳು ಎಸೆದಂತೆ
  • ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೊಲ್ಲ
  • ಹತ್ತಿರಕ್ಕೆ ಬಂದರೆ ಹಡಿಕ್ ನಾತ
  • ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?
  • ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
  • ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ
  • ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ
  • ಹೆಣ್ಣಿಗೆ ಹೆಣ್ಣೇ ವೈರಿ
  • ಹೆಣ್ಣು ಚಂದ,ಕಣ್ಣು ಕುರುಡು
  • ಹೆದರುವವರ ಮೇಲೆ ಕಪ್ಪೆ ಎಸೆದಂತೆ
  • ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
  • ಹಿಟ್ಟು ಹಳಸಿತ್ತು;ನಾಯಿ ಹಸಿದಿತ್ತು
  • ಹಿರೀಮಗ ಆಗಬೇಡ,ಹಿತ್ತಿಲ ಕದ ಆಗಬೇಡ
  • ಹಿತ್ತಿಲ ಗಿಡ ಮದ್ದಲ್ಲ
  • ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
  • ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
  • ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ
  • ಹೊಳೆಯುವುದೆಲ್ಲಾ ಚಿನ್ನವಲ್ಲ
  • ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
  • ಹೊಟ್ಟೆ ತುಂಬಿದ ಮೇಲೆ ಹಿಟ್ಟೂ ಕಲ್ಲು
  • ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
  • ಹೊರಗೆ ಥಳುಕು, ಒಳಗೆ ಹುಳುಕು
  • ಹೊಸ ಡಾಕ್ಟರ್‌ಗಿಂತ ಹಳೇ ಕಾಂಪೌಂಡರ್ ವಾಸಿ
  • ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು
  • ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ
  • ಹೊತ್ತಿಗಿಲ್ಲದ ಗಾದೆ, ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ.
  • ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
  • ಹುಣ್ಣಿನ ಮೇಲೆ ಉಪ್ಪು ಸವರಿದಂತೆ
  • ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
  • ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ? ಆಕಳು ಕಪ್ಪಾದರೂ ಹಾಲು ಕಪ್ಪೆ ?
  • ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
  • ಹುಟ್ಟು ಗುಣ ಸುಟ್ಟರೂ ಹೋಗಲ್ಲ
  • ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು
  • ಹುಚ್ಚಲ್ಲ,ಬೆಪ್ಪಲ್ಲ,ಶಿವಲೀಲೆ
  • ಹುಚ್ಚು ಬಿಟ್ಟ ಹೊರತು ಮದುವೆ ಆಗೋಲ್ಲ; ಮದುವೆ ಆದ ಹೊರತು ಹುಚ್ಚು ಬಿಡಲ್ಲ
  • ಹುಚ್ಚು ಮನಸಿಗೆ ಹತ್ತು ಹಲವು ಮುಖಗಳು
  • ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
  • ಹುಲಿಗೆ ಹುಣ್ಣು ಎದ್ದ ಹಾಗೆ
  • ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
  • ಹುಳುಕು ತೊಗರಿಗೆ ತಟ್ಟು ಮಡಕೆ
  • ಹೋಗು ಎನ್ನಲಾರದೇ ಹೊಗೆ ಹಾಕಿದರು
  • ಹಂಚು ಕಾಣದ ಮುದುಕಿ ಕಂಚು ಕಂಡರೆ ಮೂರು ಸಲ ಬೆಳಗಿ ನೋಡಿದ್ದಳು


ವಿಷಯ-ಪೋಣಿಕೆಗೆ ಹಿಂತಿರುಗಿ

ಗಾದೆಗಳ ಬಗ್ಗೆ ಇನ್ನೂ ಕೆಲವು ಪುಟಗಳು

ಸಂಪಾದಿಸಿ

ವಿಕಿಪೀಡಿಯ ಕನ್ನಡ ಗಾದೆಗಳು
ವಿಕಿಪೀಡಿಯ ಕನ್ನಡ ಗಾದೆಗಳು (ಆಂಗ್ಲ) / wikipedia kannada proverbs (English)
ಅವರ್-ಕರ್ನಾಟಕ ಗಾದೆಗಳು
ಸಂಪದ ಗಾದೆಗಳ ಸಂಗ್ರಹ

"https://kn.wikiquote.org/w/index.php?title=ಗಾದೆಗಳು&oldid=9383" ಇಂದ ಪಡೆಯಲ್ಪಟ್ಟಿದೆ