- ಮಘಾ ಮಳೆ ಬಂದಷ್ಟು ಒಳ್ಳೇದು, ಮನೆ ಮಗ ಉಂಡಷ್ಟು ಒಳ್ಳೇದು.
- ಆಶ್ಲೇಷ ಮಳೆ, ಈಸಲಾರದ ಹೊಳೆ.
- ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.
- ಅಣ್ಣ ಹುಸಿಯಾದರೂ ತಮ್ಮ ತಂಪು ತರದೇ ಹೋಗಲ್ಲ.
- ಆರಿದ್ರಾ ಮಳೆ ಆರದೇ ಹುಯ್ಯುತ್ತೆ.
- ಅಮ್ಮನ ಮನಸ್ಸು ಬೆಲ್ಲದ ಹಾಗೆ ; ಆರಿದ್ರಾ ಹನಿ ಕಲ್ಲಿನ ಹಾಗೆ.
- ಮಳೆಗಾಲದ ಮಳೆ ನಂಬಲಾಗದು ; ಮನೆ ಹೆಂಡ್ತಿ ನಗೆ ನಂಬಲಾಗದು.
- ತುಂತುರು ಮಳೆಯಿಂದ ತೂಬು ಒಡೆದೀತೆ?
- ಅಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ.
- ಮಗೆ ಮಳೆ ಮಗೆ ಗಾತ್ರ ಬೀಳ್ತದೆ.
- ಮಳೆ ಬಂದರೆ ಕೇಡಲ್ಲ ಮಗ ಉಂಡರೆ ಕೇಡಲ್ಲ
- ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)
- ಅಸ್ಲೆ ಮಳೆಗೆ ಸಸ್ಲೆ ಬೆಟ್ಟಕ್ಕೆ ನೆಗಿತು
- ಬಂದರೆ ಮಗೆ ಹೋದರೆ ಹೊಗೆ
- ಕುರುಡು ಚಿತ್ತೆ ಎರಚಿದತ್ತ ಬೆಳೆ
- ಸ್ವಾತಿ ಮಳೆ ಹೇತೆನೆಂದ್ರೂ ಬಿಡದು.
- ಅಶ್ವಿನೀ ಸಸ್ಯನಾಶಿನೀ.
- ಭರಣಿ ಮಳೆ ಧರಣಿ ಬೆಳೆ.
- ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
- ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
- ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
- ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ.
- ಸ್ವಾತಿ ಮಳೆ ಮುತ್ತಿನ ಬೆಳೆ.
- ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
- ಅನುರಾಧ ಬಂದರೆ ನಮ್ಮ ರಾಗಿ ನಮ್ಮದು.
- ಚಿತ್ತಾ ಮಳೆ ವಿಚಿತ್ರ ಬೆಳೆ!
- ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ.