ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ಹೋರಾಟದಿಂದಲೇ ಪಡೆದು ಕೊಳ್ಳಬೇಕು. - ೧೬:೨೨, ೧೩ ಅಕ್ಟೋಬರ್ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
ನನಗೆ ರಕ್ತ ನೀಡಿ ಮತ್ತು ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ.
ಒಬ್ಬ ವ್ಯಕ್ತಿ ತನ್ನ ಸಿದ್ದಾಂತಕ್ಕಾಗಿ ಸಾವನ್ನಪ್ಪಬಹುದು. ಅದರೆ, ಆತನ ಮರಣಾನಂತರವೂ ಉಳಿಯುವ ಆ ಸಿದ್ದಾಂತ ಸಾವಿರ ಜನರಲ್ಲಿ ಅವತರಿಸುತ್ತದೆ.
ನಮ್ಮ ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ವಾತಂತ್ರ್ಯವೊಂದೇ ಪರಿಹಾರ.
ಗುಲಾಮಿತನದ ಸಂಕೋಲೆಯನ್ನು ಕಿತ್ತೆಸೆಯಲು ಒಂದೇ ಹೃದಯ. ಒಂದು ಪ್ರಾಣವಾಗಿ ಎಲ್ಲರೂ ಕಟಿಬದ್ದರಾಗಬೇಕಾಗಿದೆ.
ಭಾರತದ ಮೇಲೆ ಇಟ್ಟಿರುವ ನಂಬಿಕೆಯನ್ನು ಯಾವತ್ತೂ ಕಳೆದುಕೊಳ್ಳಬೇಡಿ.
ಭಾರತವನ್ನು ಬಂಧನದಲ್ಲಿಡುವ ಯಾವ ಶಕ್ತಿಯೂ ಭೂಮಿಯಲ್ಲಿ ಇಲ್ಲ. ಶ್ರೀಘದಲ್ಲೇ ಭಾರತ ಸ್ವತಂತ್ರ್ಯವಾಗಲಿದೆ.
ಅನ್ಯಾಯವನ್ನು ಸಹಿಸಿಕೊಳ್ಳುವುದು ಮತ್ತು ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಬಹುದೊಡ್ಡ ಅಪರಾಧ.
ಉತ್ಸಾಹವಿಲ್ಲದೆ ಯಾವ ಮಹತ್ತರವಾದ ಕೆಲಸವೂ ನಡೆದಿಲ್ಲ.
ಜನ ಹಣ ಮತ್ತು ವಸ್ತುಗಳು ಸ್ವತಃ ಜಯ ಅಥವಾ ಸ್ವಾತಂತ್ರ್ಯವನ್ನು ತರಲು ಸಾಧ್ಯವಿಲ್ಲ. ಧೈರ್ಯಶಾಲಿ ಕೆಲಸಗಳು ಮತ್ತು ಉಜ್ಜಲ ಸಾಧನೆ ಮಾಡಬೇಕಾದರೆ ನಮ್ಮಲ್ಲಿ ನಾವು ಪ್ರೇರಕ ಶಕ್ತಿಯನ್ನು ಹೊಂದಿರಬೇಕು.
ಸ್ವೀಕರಿಸಬೇಕಾದ ಸವಾಲುಗಳು ಇಲ್ಲದೇ ಇದ್ದರೆ,ಹೋರಾಟಗಳು ಇಲ್ಲದೇ ಹೋದರೆ ಜೀವನ ಅರ್ಧದಷ್ಟು ಆಸಕ್ತಿಯನ್ನು ಕಳೆದುಕೊಳ್ಳುತ್ತದೆ.